ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭ; ಸ್ನೇಹಲ್ ಆರ್ ಮಾಹಿತಿ
ಮೊದಲ ಹಂತದಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ಶುರು ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಭೌತಿಕ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಜುಲೈ 15ರಿಂದ ಆನ್ಲೈನ್ ಮೂಲಕ ತರಗತಿಗಳು ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ಶುರು ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಭೌತಿಕ ತರಗತಿ ಆರಂಭ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳು ಆರಂಭವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್ಡೌನ್ ವಿಧಿಸಿತ್ತು. ಈ ವೇಳೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ ಘೋಷಿಸಿತ್ತು. ಮಕ್ಕಳ ಆರೋಗ್ಯ ಹಿತಾದೃಷ್ಟಿಯಿಂದ ನಡೆಯಬೇಕಿದ್ದ ಪಿಯು ಪರೀಕ್ಷೆಯನ್ನು ಸರ್ಕಾರ ರದ್ಧುಗೊಳಿಸಿದೆ. ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯು ಅಂಕಗಳನ್ನು ಅವಲೋಕಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂಕವನ್ನು ನೀಡಲು ನಿರ್ಧರಿಸಲಾಗಿದೆ.
ಸದ್ಯ ರಾಜ್ಯದಲ್ಲಿ ಕೊರೊನಾ ಆರ್ಭಟ ಕಡಿಮೆಯಾಗಿದ್ದು, ಹಂತ ಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಆದರೆ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಹಂತ ಹಂತವಾಗಿ ಶೈಕ್ಷಣಿಕ ವರ್ಷಾರಂಭಕ್ಕೆ ಮುಂದಾದ ಶಿಕ್ಷಣ ಇಲಾಖೆ, ಮೊದಲ ಹಂತದಲ್ಲಿ ಆನ್ಲೈನ್ ಮೂಲಕ ತರಗತಿ ಶುರುಮಾಡಲು ನಿರ್ಧರಿಸಿದೆ. ಪ್ರಥಮ ಪಿಯು ಪಾಸಾದ ವಿದ್ಯಾರ್ಥಿಗಳಿಗೆ ಮೊದಲು ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುವುದು. ಕೊರೊನಾ ಸ್ಥಿತಿಗತಿ ನೋಡೊಕೊಂಡು ಭೌತಿಕ ತರಗತಿಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುವುದು. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಜುಲೈ ಕೊನೆಯ ವಾರದಿಂದಲೇ ಭೌತಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂದು ಟಿವಿ9ಗೆ ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್ ಆರ್. ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ
ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧ ಸಡಿಸಿಲಿದ ದುಬೈ; ಭಾರತದಿಂದ ಹೋಗುವವರಿದ್ದರೆ ಈ ನಿಯಮಗಳ ಪಾಲನೆ ಕಡ್ಡಾಯ
(PU Board Director Snehal R informed that PU academic year begins on July 15)
Published On - 10:03 am, Sun, 20 June 21