ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ.. ಚಿತ್ತಾಪುರ PU ವಿದ್ಯಾರ್ಥಿನಿ ಸಾವು

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಬಳಿಯ ಹಲಕರ್ಟಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಕಿರಣಾ ಅವಘಡದಲ್ಲಿ ಮೃತಪಟ್ಟಿದ್ದಾಳೆ.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ.. ಚಿತ್ತಾಪುರ PU ವಿದ್ಯಾರ್ಥಿನಿ ಸಾವು

Updated on: Feb 05, 2021 | 8:19 PM

ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಬಳಿಯ ಹಲಕರ್ಟಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ಕಿರಣಾ ಅವಘಡದಲ್ಲಿ ಮೃತಪಟ್ಟಿದ್ದಾಳೆ.

ಕಿರಣಾ ಚಿತ್ತಾಪುರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ಕಾಲೇಜು ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬಾಲಕಿ ಲಿಂಕ್‌ ಎಕ್ಸ್‌ಪ್ರೆಸ್‌ ರೈಲಿನಿಂದ ಬಿದ್ದು ಮೃತಪಟ್ಟಿದ್ದಾಳೆ.

ನಿಲ್ದಾಣದಲ್ಲಿ ನಿತ್ಯ ಸ್ಟಾಪ್ ಕೊಡ್ತಿದ್ದ ರೈಲು ಇಂದು ನಿಲ್ಲಿಸಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಕಿರಣಾ ರೈಲಿನಿಂದ ಇಳಿಯಲು ಯತ್ನಿಸಿದ್ದಾಳೆ. ಈ ವೇಳೆ, ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ವಾಡಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನಕ್ಕೆ ತೆರಳುವಾಗ ರಸ್ತೆ ವಿಭಜಕಕ್ಕೆ ಬೈಕ್​ ಡಿಕ್ಕಿ: ಬರ್ತ್‌ಡೇ ದಿನದಂದೇ ಮಸಣ ಸೇರಿದ ಯುವಕ