AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಚಾಮುಂಡಿ ಬೆಟ್ಟದ ಮಹಾಬಲೇಶ್ವರ ರಥೋತ್ಸವಕ್ಕೆ ಪ್ರವೇಶ ನಿರ್ಬಂಧ

ಚಾಮುಂಡಿ ಬೆಟ್ಟ ಪ್ರವೇಶದ 5 ಕಡೆಗಳಲ್ಲಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದ್ದು, ಆರಂಭದಲ್ಲೇ ಸಾರ್ವಜನಿಕರನ್ನು ಪೊಲೀಸರು ತಡೆಯುತ್ತಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ಮಹಾಬಲೇಶ್ವರ ರಥೋತ್ಸವಕ್ಕೆ ಪ್ರವೇಶ ನಿರ್ಬಂಧ
ರಥೋತ್ಸವ ಮುಗಿಯುವವರೆಗೂ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
preethi shettigar
|

Updated on:Apr 03, 2021 | 12:29 PM

Share

ಮೈಸೂರು: ಚಾಮುಂಡಿ ಬೆಟ್ಟದ ಮಹಾಬಲೇಶ್ವರ ರಥೋತ್ಸವದ ಮೇಲೆ ಕೊರೊನಾ ಕರಿನೆರಳು ಕಾಣಿಸಿಕೊಂಡಿದ್ದು,ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಾಲಯದ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಬೆಟ್ಟಕ್ಕೆ ಹೆಚ್ಚಿನ ಸಾರ್ವಜನಿಕರು ಆಗಮಿಸುವ ಹಿನ್ನಲೆಯಲ್ಲಿ ಕೊವಿಡ್ 19 ಹರಡುವಿಕೆ ತಡೆಯುವ ಉದ್ದೇಶದಿಂದ ಜನರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಉತ್ಸವದಲ್ಲಿನ ಧಾರ್ಮಿಕ ಕಾರ್ಯಗಳು ದೇವಾಲಯದ ಒಳ ಆವರಣದಲ್ಲಿ ನಡೆಯಲಿದ್ದು, ಅರ್ಚಕರು, ಸಿಬ್ಬಂದಿ ಸಮ್ಮುಖದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಉತ್ಸವ ನಡೆಯಲಿದೆ. ಚಾಮುಂಡಿ ಬೆಟ್ಟ ಪ್ರವೇಶದ 5 ಕಡೆಗಳಲ್ಲಿ ಪೊಲೀಸ್ ಭದ್ರತೆಯನ್ನು ಮಾಡಲಾಗಿದ್ದು, ಆರಂಭದಲ್ಲೇ ಸಾರ್ವಜನಿಕರನ್ನು ಪೊಲೀಸರು ತಡೆಯುತ್ತಿದ್ದಾರೆ. ರಥೋತ್ಸವ ಮುಗಿಯುವವರೆಗೂ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಶ್ರೀ ಮಹಾಬಲೇಶ್ವರ ಸ್ವಾಮಿ ರಥೋತ್ಸವವನ್ನು ಸರಳವಾಗಿ ನಡೆಸಲು ಅವಕಾಶ ನೀಡಲಾಗಿದೆ.

ಕೊರೊನಾ ಎರಡನೇ ಅಲೆಗೆ ಕರ್ನಾಟಕ ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡುವ ವೇಗಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಈಗಾಗಲೇ ಪ್ರಕಟವಾಗಿದೆ. 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​, ಬಾರ್, ಪಬ್​, ಕ್ಲಬ್, ರೆಸ್ಟೊರೆಂಟ್​ಗೆ ಶೇ 50ರಷ್ಟು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ.

ಅಲ್ಲದೆ, ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್ ಆಗಲಿವೆ. 6ರಿಂದ 9ನೇ ತರಗತಿಯವರೆಗೆ ಶಾಲೆಗಳು ಕಾರ್ಯನಿರ್ವಹಿಸುವುದಿಲ್ಲ. ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದಕ್ಕೆ ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ.

ಇದನ್ನೂ ಓದಿ:

 IPL 2021: ಐಪಿಎಲ್​ ಆರಂಭಕ್ಕೂ ಮುನ್ನ ಕೊರೊನಾಘಾತ.. ವಾಂಖೆಡೆ ಸ್ಟೇಡಿಯಂನ 8 ಸಿಬ್ಬಂದಿಗಳಿಗೆ ಕೊರೊನಾ ಧೃಡ!

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್

(Public entry restricted for Mahabaleshwar Rathotsava at Chamundi hills in Mysuru)

Published On - 12:17 pm, Sat, 3 April 21

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ