Schools reopening ಫೆ. 22ರಿಂದ 6-8ನೇ ತರಗತಿಗಳ ಆರಂಭ: ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಪಾಲಿಸಲೇಬೇಕು ಎಂದ ಸಾರ್ವಜನಿಕ ಶಿಕ್ಷಣ ಇಲಾಖೆ

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಕೊಂಚ ತಗ್ಗಿದ್ದ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಇದೀಗ, ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಹೆಮ್ಮಾರಿಯ ಭೀತಿ ಮತ್ತೆ ಶುರುವಾಗಿರುವ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸುತ್ತೋಲೆ ಹೊರಡಿಸಿದೆ.

Schools reopening ಫೆ. 22ರಿಂದ 6-8ನೇ ತರಗತಿಗಳ ಆರಂಭ: ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಪಾಲಿಸಲೇಬೇಕು ಎಂದ ಸಾರ್ವಜನಿಕ ಶಿಕ್ಷಣ ಇಲಾಖೆ
ಪ್ರಾತಿನಿಧಿಕ ಚಿತ್ರ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Feb 19, 2021 | 6:15 PM

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 22ರಿಂದ 6-8ನೇ ತರಗತಿಗಳ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಾಲಾ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಈ ಹಿಂದೆ ಕೈಗೊಂಡಿತ್ತು. ಆ ವೇಳೆ ಕರ್ನಾಟಕದಲ್ಲಿ ಕೊರೊನಾ ಆರ್ಭಟ ಕೊಂಚ ತಗ್ಗಿದ್ದ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಈಗ, ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಹೆಮ್ಮಾರಿಯ ಭೀತಿ ಮತ್ತೆ ಶುರುವಾಗಿರುವ ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸುತ್ತೋಲೆ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿರುವ ಮಾರ್ಗಸೂಚಿಯ ವಿವರ ಹೀಗಿದೆ 1. BBMP ಮತ್ತು ಕೇರಳ ಗಡಿಯ ಶಾಲೆಗಳಲ್ಲಿ 6 ಹಾಗೂ 7ನೇ ತರಗತಿಗಳಿಗೆ ವಿದ್ಯಾಗಮ 2. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 8ನೇ ತರಗತಿ ಮಾತ್ರ ನಡೆಸಲಾಗುವುದು 3. 6ರಿಂದ ಮೇಲಿನ ತರಗತಿ ಮಕ್ಕಳಿಗೆ ಮನೆಯಿಂದಲೇ ಊಟ ಕಳುಹಿಸಬೇಕು 4. ದೈಹಿಕ ಅಂತರ, ಶುಚಿತ್ವ & ಮಾಸ್ಕ್ ಧರಿಸುವುದು ಕಡ್ಡಾಯ. 5. 6ರಿಂದ 10ನೇ ತರಗತಿಗೆ ವಾರದಲ್ಲಿ 5 ದಿನ ಮಾತ್ರ ತರಗತಿ 6. ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ 5 ದಿನ ಮಾತ್ರ ತರಗತಿ 7. ಶನಿವಾರದಂದು ಬೆಳಗ್ಗೆ 10.30ರಿಂದ 12.30ರವರೆಗೆ ತರಗತಿ 8. 6 ಹಾಗೂ 7ನೇ ತರಗತಿಗಳ ವಿದ್ಯಾಗಮ ವಾರದಲ್ಲಿ ಪ್ರತ್ಯೇಕ 3 ದಿನ ನಡೆಸಬೇಕು 9. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಱಂಡಂ ಟೆಸ್ಟ್ 10. ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ 11. ಕೊವಿಡ್‌ನಿಂದ ಪೂರ್ಣ ಪ್ರಮಾಣದಲ್ಲಿ ಅಡ್ಮಿಶನ್‌ ನಡೆದಿಲ್ಲ. ಹಾಗಾಗಿ, ಮಕ್ಕಳ ದಾಖಲಾತಿ ಅವಧಿ ಮಾರ್ಚ್ 30ರವರೆಗೆ ವಿಸ್ತರಣೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆಯಲ್ಲಿ ಪ್ರಕಟಿಸಿದೆ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ