Breaking: ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ನಿರ್ಮಾಣ; ಲೋಕೋಪಯೋಗಿ ಇಲಾಖೆಯಿಂದ ಮಹತ್ವದ ಆದೇಶ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 03, 2022 | 12:51 PM

ರಸ್ತೆಗಳಿಂದ ಎಷ್ಟು ಅಂತರದಲ್ಲಿ ಕಟ್ಟಡ ನಿರ್ಮಿಸಿದರೆ ಅದು ಅಧಿಕೃತ ನಿರ್ಮಾಣ ಎನ್ನಿಸಿಕೊಳ್ಳುತ್ತದೆ ಎನ್ನುವುದರ ಬಗ್ಗೆ ಈ ಹೇಳಿಕೆ ಸ್ಪಷ್ಟನೆ ನೀಡಿದೆ.

Breaking: ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ನಿರ್ಮಾಣ; ಲೋಕೋಪಯೋಗಿ ಇಲಾಖೆಯಿಂದ ಮಹತ್ವದ ಆದೇಶ
ರಾಜ್ಯ ಹೆದ್ದಾರಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್, ಜಿಲ್ಲಾ ರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದಲ್ಲಿ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ಹೇಳಿಕೆಯು ಈವರೆಗೆ ರಾಜ್ಯದಲ್ಲಿ ಹಲವು ಗೊಂದಲಗಳಿಗೆ ತೆರೆ ಎಳೆದಿದ್ದು ರಸ್ತೆಗಳಿಂದ ಎಷ್ಟು ಅಂತರದಲ್ಲಿ ಕಟ್ಟಡ ನಿರ್ಮಿಸಿದರೆ ಅದು ಅಧಿಕೃತ ನಿರ್ಮಾಣ ಎನ್ನಿಸಿಕೊಳ್ಳುತ್ತದೆ ಎನ್ನುವುದರ ಬಗ್ಗೆ ಸ್ಪಷ್ಟನೆ ನೀಡಿದೆ.

ಮುಂದಿನ ದಿನಗಳಲ್ಲಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯು ಸ್ಪಷ್ಟ ನಿಯಮ ಜಾರಿಗೊಳಿಸಲು ಮುಂದಾಗಿದೆ. ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಪ್ರಮಾಣದ ಅಂತರ ಕಾಯ್ದುಕೊಳ್ಳಲೇ ಬೇಕು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ರಾಜ್ಯ ಹೆದ್ದಾರಿಗಳ ಮಧ್ಯಭಾಗದಿಂದ 40 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ. ಅದೇ ರೀತಿ ಜಿಲ್ಲಾ ಮುಖ್ಯರಸ್ತೆಗಳ ಮಧ್ಯಭಾಗದಿಂದ 25 ಮೀಟರ್ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಿಸುವುದಕ್ಕೆ ಅವಕಾಶವಿಲ್ಲ ಎಂದು ಈ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಲಾಗಿದೆ.

ಸಿಟಿ ಕಾರ್ಪೊರೇಷನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕನಿಷ್ಠ 6 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಸಿಟಿ ಕಾರ್ಪೊರೇಷನ್ ಪರಿಮಿತಿಯಿಂದ 15 ಕಿಮೀ ದೂರದವರೆಗೆ 12 ಮೀಟರ್ ಅಂತರ ಪಾಲಿಸುವುದು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.

ಈ ನಿಯಮ ಜಾರಿಗೊಳಿಸುವ ಅಧಿಕಾರವನ್ನು ಲೋಕೋಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್​ಗಳಿಗೆ ವಹಿಸಲಾಗಿದೆ. ಅವರನ್ನು ಹೆದ್ದಾರಿ ಪ್ರಾಧಿಕಾರಿ ಎಂದು ಘೋಷಣೆ ಮಾಡಲಾಗಿದ್ದು, ರಸ್ತೆಯಿಂದ ಕಟ್ಟಡಗಳ ಅಂತರ ನಿಗದಿಪಡಿಸುವುದು ಹಾಗೂ ರಸ್ತೆ ಗಡಿಯನ್ನು ನಿಗದಿಪಡಿಸುವ ಜವಾಬ್ದಾರಿಯನ್ನು ನೀಡಲಾಗಿದೆ.

Published On - 12:43 pm, Wed, 3 August 22