ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಆತ್ಮಹತ್ಯೆ
ಕರ್ನಾಟಕದಲ್ಲಿ ಈಗ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿವೆ. ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗಳು ನಡೆಯಲಿವೆ. ಇದರ ಮಧ್ಯ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರದಲ್ಲಿ ಎಸ್ .ಎಸ್ .ಎಲ್.ಸಿ ವಿದ್ಯಾರ್ಥಿನಿ ಪ್ರಾಣಕಳೆದುಕೊಂಡಿದ್ದರೆ, ತುಮಕೂರಿನಲ್ಲೂ ಸಹ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕಾರವಾರ/ತುಮಕೂರು, (ಮಾರ್ಚ್ 06): ಎಸ್ಎಸ್ಎಲ್ಸಿ ಪರೀಕ್ಷೆಗೂ (SSLC Exams 2025) ಮುನ್ನವೇ ವಿದ್ಯಾರ್ಥಿನಿ (Student) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ(Karwar) ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಪರ್ಧಿಯಲ್ಲಿರುವ ಬಾಲ ಮಂದಿರದಲ್ಲಿ ಶ್ವೇತಾ ಪನ್ನಿಕರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾರವಾರದ ಮೂಲದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದ ಶ್ವೇತಾ ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದಳು. ಹೀಗಾಗಿ ಮುಖ್ಯ ಪರೀಕ್ಷೆಯ ಭಯದಿಂದ ಇಂದು(ಮಾರ್ಚ್ 06) ಬಾಲಮಂದಿರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಕಾರವಾರ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿ ಹೇಳಿದ್ದಿಷ್ಟು
ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿ ಸೋನಲ್ ಪ್ರತಿಕ್ರಿಯಿಸಿದ್ದು, ಶ್ವೇತಾ ಪನ್ನಿಕರ ಎಂಬ ಬಾಲಕಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ 10:35 ಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿ ತಿಳಿಯಿತು. ಕೂಡಲೇ ಸ್ಥಳಕ್ಕೆ ಹೋಗಿ ನೋಡಿದಾಗ ನೇಣು ಬಿಗಿದುಕೊಂಡಿದ್ಳು. ಅವಳನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯ್ತು . ವೈದ್ಯರು ಎಷ್ಟೆ ಪ್ರಯತ್ನ ಮಾಡಿದ್ರು ಅವಳು ಬದಕುಳಿಯಲಿಲ್ಲ. ಈಗಾಗಲೇ ವಿದ್ಯಾರ್ಥಿನಿಯ ತಾಯಿಗೆ ವಿಷಯ ತಿಳಿಸಿದ್ದೆವೆ. ಈ ಬಗ್ಗೆ ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದ್ದು, ತನಿಖೆಯಿಂದ ಆತ್ಮಹತ್ಯೆಯ ಕಾರಣ ತಿಳಿದು ಬರಬೇಕಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿ ನಿಗೂಢ ನಾಪತ್ತೆ: ಸಿಗದ ಸುಳಿವು, ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ
ತುಮಕೂರಿನಲ್ಲೂ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
ತುಮಕೂರು: ಕಾರವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ತುಮಕೂರಿನಲ್ಲೂ ಸಹ ಪಿಯುಸಿ ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ. ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ದೀಪಿಕಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಸತಿ ಶಾಲೆಯ ಮಹಡಿ ಮೇಲೆ ತನ್ನ ವೇಲ್ನಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ನಿವಾಸಿಯಾಗಿರುವ ದೀಪಿಕಾ, ತುಮಕೂರಿನ ಸಿದ್ದಾರ್ಥ ಪಿಯು ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತ ಅದೇ ಸಿದ್ದಾರ್ಥ ವಸತಿ ನಿಲಯದಲ್ಲಿ ವಾಸವಿದ್ದಳು. ಆದ್ರೆ, ಇಂದು (ಮಾರ್ಚ್ 06) ಏಕಾಏಕಿ ದೀಪಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಜಯನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿದ್ದು, ಇದರ ಮಧ್ಯ ದೀಪಿಕಾ ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಕಾರವಾರದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪರೀಕ್ಷೆಗಳಿಗೆ ಭಯಪಟ್ಟು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ದುಸ್ಸಾಹಸಕ್ಕೆ ಮುಂದಾಗಬೇಡಿ. ಜೀವ ಇದ್ರೆ ಏನು ಬೇಕಾದರೂ ಸಾಧನೆ ಮಾಡಬಹುದು. ಇಂತ ಪರೀಕ್ಷೆಗಳನ್ನು ಬರೆಯಬಹುದು. ಆದ್ರೆ, ಆತ್ಮಹತ್ಯೆ ಮಾಡಿಕೊಂಡು ಸಾಧಿಸುವುದು ಏನಿದೆ. ನಿಮಗೋಸ್ಕರ ಕುಟುಂಬ, ಗೆಳೆಯರು, ಬಂಧು-ಬಳಗ ಅಂತ ಇರುತ್ತೆ. ಅವರನ್ನು ದುಖದಲ್ಲಿ ತಳ್ಳಬೇಡಿ. ಆಗುವುದಿಲ್ಲ ಒಳ್ಳೆಯದಕ್ಕೆ ಎಂದುಕೊಂಡು ಒಳ್ಳೆಯ ಹಾದಿಯಲ್ಲೇ ನಡೆಯಿರಿ ಅಷ್ಟೇ.
ಚಿತ್ರದುರ್ಗದಲ್ಲಿ ಇಬ್ಬರು ನೀರುಪಾಲು
ಚಿತ್ರದುರ್ಗ: ಇನ್ನೊಂದೆಡೆ ಚಿತ್ರದುರ್ಗದಲ್ಲಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ. ನೆಲ್ಲಿಕಟ್ಟೆ ಗ್ರಾಮದ ಕೃಷಿ ಹೊಂಡದಲ್ಲಿ ಮುಳುಗಿ ನಾಗರಾಜ(35) ಹಾಗೂ ಶ್ರೀನಿವಾಸ್(40) ಸಾವನ್ನಪ್ಪಿದ್ದಾರೆ. ನೆಲ್ಲಿಕಟ್ಟೆ ಗ್ರಾಮದ ಅಜ್ಜಪ್ಪ ಎಂಬುವರ ಜಮೀನಿನ ಕೃಷಿ ಹೊಂಡದಲ್ಲಿ ಇಂದು (ಮಾರ್ಚ್ 06) ಈಜಾಡಲು ತೆರಳಿದಾಗ ಈ ದುರ್ಘಟನೆ ಸಂಭವಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:51 pm, Thu, 6 March 25