AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ, I love you ಚಿನ್ನ ಎಂದು ಪುನೀತ್​ಗೆ ವಿದಾಯ ಹೇಳಿದ ಹಿರಿಯ ನಟ ಜಗ್ಗೇಶ್

Puneeth Rajkumar Condolence: ಸ್ಯಾಂಡ್​ವುಡ್​ನ ಅನೇಕ ಹಿರಿಯ ಕಿರಿಯ ಕಲಾವಿದರು ಅಪ್ಪು ನಿಧನಕ್ಕೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಮೌನರೋದನೆ ವ್ಯಕ್ತಪಡಿಸಿದ್ದಾರೆ. ಪುನೀತ್ ನಿನ್ನ 30ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ. I love you ಚಿನ್ನ ಎಂದು ಹಿರಿಯ ನಟ ಜಗ್ಗೇಶ್ ವಿದಾಯ ಹೇಳಿದ್ದಾರೆ.

30 ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ, I love you ಚಿನ್ನ ಎಂದು ಪುನೀತ್​ಗೆ ವಿದಾಯ ಹೇಳಿದ ಹಿರಿಯ ನಟ ಜಗ್ಗೇಶ್
ಪುನೀತ್ 30 ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ, I love you ಚಿನ್ನ ಎಂದು ವಿದಾಯ ಹೇಳಿದ ಹಿರಿಯ ನಟ ಜಗ್ಗೇಶ್
TV9 Web
| Edited By: |

Updated on: Oct 29, 2021 | 6:05 PM

Share

ಬೆಂಗಳೂರು: ಚಂದನವನದ ಚಂದದ ನಟ ಪುನೀತ್​ ರಾಜ್​ ಕುಮಾರ್ (46) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡ್​ವುಡ್​ನ ಅನೇಕ ಹಿರಿಯ ಕಿರಿಯ ಕಲಾವಿದರು ಅಪ್ಪು ನಿಧನಕ್ಕೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಮೌನರೋದನೆ ವ್ಯಕ್ತಪಡಿಸಿದ್ದಾರೆ. ಪುನೀತ್ ನಿನ್ನ 30ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ. I love you ಚಿನ್ನ ಎಂದು ಹಿರಿಯ ನಟ ಜಗ್ಗೇಶ್ ವಿದಾಯ ಹೇಳಿದ್ದಾರೆ. “ಅಪ್ಪ ನನ್ನನ್ನು ನಿನಗೆ ಪರಿಚಯಿಸಿದಾಗ ನಿನ್ನ ಆಶ್ಚರ್ಯದ ಮುದ್ದು ಮುಖ ಹೇಗೆ ಮರೆಯಲಿ. “ನನ್ನ ಚಿತ್ರಗಳ ನೋಡಿ ಸಂಭ್ರಮಿಸಿ ನನಗೆ ಕರೆಮಾಡಿ ಹರಸುತ್ತಿದ್ದ ನಿನ್ನ ಗುಣ ಹೇಗೆ ಮರೆಯಲಿ. “ನನ್ನ ಗ್ರಾಮದ ಭೈರವನ ನೋಡಲು ಬಂದು ನನ್ನ ಗ್ರಾಮೀಣ ಹಿನ್ನೆಲೆ ಬದುಕಿನ ಅನುಭವ ಕೇಳಿ ಮರುಗಿದ್ದು ಹೇಗೆ ಮರೆಯಲಿ. “ನನ್ನ ಜೊತೆ ಮಂತ್ರಾಲಯಕ್ಕೆ ಬಂದು ಸಾಮಾನ್ಯನಂತೆ ರಸ್ತೆ ಬದಿಯ ಚಹಾದ ಅಂಗಡಿ ಮುಂದಿನ ಆನಂದಮಯ ಕ್ಷಣದ ದಿನ ಹೇಗೆ ಮರೆಯಲಿ. “ಆನಂದರಾಮ ನನಗಾಗಿ ನಿರ್ದೇಶನ ಮಾಡುವ ಚಿತ್ರದ ಕಥೆ ಕೇಳಿ ನೀನು ನಗುತ್ತಿದ್ದ ಆ ನಗು ಮುಖ ಹೇಗೆ ಮರೆಯಲಿ.

ಜಗ್ಗೇಶ್ ಟ್ವೀಟ್​ ಸಾರಾಂಶ ಹೀಗಿದೆ: ಪುನೀತ್ ನಿನ್ನ 30ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ? “ಅಪ್ಪ ನನ್ನನ್ನು ನಿನಗೆ ಪರಿಚಯಿಸಿದಾಗ ನಿನ್ನ ಆಶ್ಚರ್ಯದ ಮುದ್ದು ಮುಖ ಹೇಗೆ ಮರೆಯಲಿ? “ನನ್ನ ಚಿತ್ರಗಳ ನೋಡಿ ಸಂಭ್ರಮಿಸಿ ನನಗೆ ಕರೆಮಾಡಿ ಹರಸುತ್ತಿದ್ದ ನಿನ್ನ ಗುಣ ಹೇಗೆ ಮರೆಯಲಿ ? “ನನ್ನ ಗ್ರಾಮದ ಭೈರವನ ನೋಡಲು ಬಂದು ನನ್ನ ಗ್ರಾಮೀಣ ಹಿನ್ನೆಲೆ ಬದುಕಿನ ಅನುಭವ ಕೇಳಿ ಮರುಗಿದ್ದು ಹೇಗೆ ಮರೆಯಲಿ ? “ನನ್ನ ಜೊತೆ ಮಂತ್ರಾಲಯಕ್ಕೆ ಬಂದು ಸಾಮಾನ್ಯನಂತೆ ರಸ್ತೆ ಬದಿಯ ಚಹಾದ ಅಂಗಡಿ ಮುಂದಿನ ಆನಂದಮಯ ಕ್ಷಣದ ದಿನ ಹೇಗೆ ಮರೆಯಲಿ? “ಆನಂದರಾಮ ನನಗಾಗಿ ನಿರ್ದೇಶನ ಮಾಡುವ ಚಿತ್ರದ ಕಥೆ ಕೇಳಿ ನೀನು ನಗುತ್ತಿದ್ದ ಆ ನಗು ಮುಖ ಹೇಗೆ ಮರೆಯಲಿ? ಮಗ ಗುರುರಾಜನ ಚಿತ್ರಕ್ಕೆ ಶುಭ ಹಾರೈಸಿ ಮಗನಿಗೆ ಭುಜ ತಟ್ಟಿದ ದಿನ ಹೇಗೆ ಮರೆಯಲಿ ? ನಿನ್ನ ತಂದೆಯ ದ್ವನಿ ಅನುಕರಣೆ ಮಾಡಿದಾಗ ನೀ ಮಗುವಂತೆ ನಗುತ್ತಿದ್ದ ಆ ಮುದ್ದು ಮುಖ ಹೇಗೆ ಮರೆಯಲಿ? ಕೇವಲ ವಾರದ ಹಿಂದೆ ಅಣ್ಣ ಮಲ್ಲೇಶ್ವರಕ್ಕೆ ಬಂದಿರುವೆ ಬನ್ನಿ ಎಂದು ಕರೆದು ನನ್ನ ನಿನ್ನ ಬದುಕಿನ ಕಡೆಯಬೇಟಿ ಹೇಗೆಮರೆಯಲಿ.. ಪ್ರೀತಿಯ ಆತ್ಮವೆ ಹೋಗಿ ಬಾ ಎಂದು ಹೇಳಲು ನನಗೆ ಮನಸ್ಸು ಒಪ್ಪುತ್ತಿಲ್ಲ.. ನನ್ನ ಕಡೆ ಉಸಿರಿನವರೆಗು ನಿನ್ನ ನೆನಪು ಒಡನಾಟ ನನ್ನಮನದಲ್ಲಿ ಉಳಿಸಿಕೊಳ್ಳುವೆ…ನಿನ್ನ ಆತ್ಮ ಎಲ್ಲೆ ಇರಲಿ ಶಾಂತಿಯಿಂದ ಉಳಿಯಲಿ… I love you ಚಿನ್ನ ?

(puneeth rajkumar death sandalwood senior actor jaggesh tweet Condolence)