ಕನ್ನಡ ಭಾಷೆ ಇರುವಷ್ಟು ದಿನವೂ ಪುನೀತ್ ಇರುತ್ತಾರೆ, ಈ ವರ್ಷ ಕನ್ನಡದ ಹಬ್ಬ ಪುನೀತ್‌ಗೆ ಅರ್ಪಿಸುತ್ತೇನೆ -ಹೆಚ್.ಡಿ.ಕುಮಾರಸ್ವಾಮಿ

| Updated By: Digi Tech Desk

Updated on: Nov 01, 2021 | 9:30 AM

Karnataka Rajyotsava 2021: ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟಿ ಮೂಲಕ ತಿಳಿಸಿದ್ದಾರೆ.

ಕನ್ನಡ ಭಾಷೆ ಇರುವಷ್ಟು ದಿನವೂ ಪುನೀತ್ ಇರುತ್ತಾರೆ, ಈ ವರ್ಷ ಕನ್ನಡದ ಹಬ್ಬ ಪುನೀತ್‌ಗೆ ಅರ್ಪಿಸುತ್ತೇನೆ -ಹೆಚ್.ಡಿ.ಕುಮಾರಸ್ವಾಮಿ
ನಟ ಪುನೀತ್ ರಾಜ್​ಕುಮಾರ್
Follow us on

ಬೆಂಗಳೂರು: ಇಂದು ಕನ್ನಡದ ಹಬ್ಬ. 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಇಡೀ ಕರುನಾಡಿನಲ್ಲಿ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ಹೊತ್ತಲ್ಲೇ ಕರುನಾಡು ಯುವರತ್ನನನ್ನ ಕಳೆದು ಕೊಂಡಿದೆ. ನಟ ಪುನೀತ್ ರಾಜಕುಮಾರ್ ನಿಧನದಿಂದ ರಾಜ್ಯಕ್ಕೆ ರಾಜ್ಯವೇ ಸೂತಕ ಆಚರಿಸಿದೆ. ಸದ್ಯ ವಿಶ್ವದ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯ ಹೇಳುತ್ತ ಪುನೀತ್ರ ನೆನಪು ಮೆಲಕು ಹಾಕುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.

1500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ. ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್‌ ರಾಜಕುಮಾರ್‌ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ.

ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್‌ ರಾಜಕುಮಾರ್‌ ಅವರಿಗೆ ಅರ್ಪಿಸುತ್ತಾ, ಮತ್ತೊಮ್ಮೆ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟಿ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ 2021: ಭಾಷಾ ಬಿಕ್ಕಟ್ಟುಗಳ ನಡುವೆ ಕನ್ನಡದ ಉಳಿವು

ಕುಟುಂಬಕ್ಕೆ ಆಸರೆ ಒದಗಿಸಿದ್ದ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಕಣ್ಣೀರಿಟ್ಟ ರೈತ ಮಹಿಳೆ

Published On - 7:39 am, Mon, 1 November 21