AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟರಂಗಶೆಟ್ಟಿಗೆ ವಿಧಾನಸಭೆ ಉಪಸಭಾಧ್ಯಕ್ಷ ಹುದ್ದೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನ ಒಲಿದಿದೆ.

ಪುಟ್ಟರಂಗಶೆಟ್ಟಿಗೆ ವಿಧಾನಸಭೆ ಉಪಸಭಾಧ್ಯಕ್ಷ ಹುದ್ದೆ
ಶಾಸಕ ಪುಟ್ಟರಂಗಶೆಟ್ಟಿ
ವಿವೇಕ ಬಿರಾದಾರ
|

Updated on: May 27, 2023 | 6:43 AM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದ ಚಾಮರಾಜನಗರ (Chamrajnagar) ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಪುಟ್ಟರಂಗಶೆಟ್ಟಿ (Puttaranga Shetty) ಅವರಿಗೆ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನ ಒಲಿದಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 4 ಬಾರಿ ಆರಿಸಿ ಬಂದಿರುವ ಪುಟ್ಟರಂಗಶೆಟ್ಟಿ ಅವರು ಹಿಂದುಳಿದ ಉಪ್ಪಾರ ಸಮುದಾಯಕ್ಕೆ ಸೇರಿದವರು. ಹೀಗಾಗಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದೇ ಎಣಿಸಲಾಗಿತ್ತು. ಆದರೆ ಕಡೇಗಳಿಗೆಯಲ್ಲಿ ತಪ್ಪಿದೆ. ಹೀಗಾಗಿ ಪುಟ್ಟರಂಗ ಶೆಟ್ಟಿ ಅವರನ್ನು ಉಪಸ್ಪೀಕರ್ ಮಾಡಲು ಪಕ್ಷ ನಿರ್ಧರಿಸಿದ್ದು, ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳುವುದು ಒಂದೇ ಬಾಕಿ ಇದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರನ್ನು ಪುಟ್ಟರಂಗಶೆಟ್ಟಿ ಮಣಿಸಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರದ ನೂತನ ಸಚಿವರ ಪಟ್ಟಿ ಇಲ್ಲಿದೆ

ಸೋಲಿಲ್ಲದ ಸರದಾರ ಪುಟ್ಟರಂಗಶೆಟ್ಟಿ

ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗರಾದ ಸಿ.ಪುಟ್ಟರಂಗಶೆಟ್ಟಿ ತಾವು ಸೋಲಿಲ್ಲದ ಸರದಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಸುಮಾರು ಹತ್ತೊಂಬತ್ತು ಹಂತದಲ್ಲಿ ನಡೆದ ಮತ ಎಣಿಕೆಯಲ್ಲಿ 7,383 ಮತ ಅಂತರದಲ್ಲಿ ಸಿ‌.ಪುಟ್ಟರಂಗಶೆಟ್ಟಿಗೆ ಜಯ ಸಾಧಿಸಿದ್ದು, ಸಿ.ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ವಿ.ಸೋಮಣ್ಣ 75,753 ಮತಗಳನ್ನು ಪಡೆದಿದ್ದಾರೆ.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!