AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳಿಂದ ಬಿಎಸ್​ವೈ ಮಗನ ಹೆಸರು ದುರ್ಬಳಕೆ, ಸಿಬಿಐ ತನಿಖೆಗೆ ಗುತ್ತಿಗೆದಾರನಿಂದ ಮನವಿ

ಲೋಕೋಪಯೋಗಿ ಇಲಾಖೆ,ಕಾವೇರಿ ನಿಗಮದ ಅಧಿಕಾರಿಗಳು ಸಿಎಂ ಪುತ್ರ ವಿಜಯೇಂದ್ರರ ಹೆಸರನ್ನು ದುರುಪಯೋಗಪಡಿಸಿಕೊಂಡು, ಭೃಷ್ಟಾಚಾರದಲ್ಲಿ ನಿರತರಾಗಿದ್ದಾರೆ, ಈ ಕುರಿತು ಸಿಬಿಐ ತನಿಖೆ ನಡೆಸುವಂತೆ ಮಂಡ್ಯದ ಸಿವಿಲ್ ಗುತ್ತಿಗೆದಾರರೊಬ್ಬರು ಮುಖ್ಯಮಂತ್ರಿ ಮತ್ತು ಅವರ ಕಾರ್ಯದರ್ಶಿಗಳ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯ ಪ್ರತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಮಂಡ್ಯದ ಪಿಡಬ್ಲ್ಯುಡಿ ಗುತ್ತಿಗೆದಾರ ಮತ್ತು ರೈತರೂ ಆಗಿರುವ ಬಸವೇಗೌಡ ಮನವಿ ಪತ್ರ ನೀಡಿದವರು. ಲೋಕೋಪಯೋಗಿ ಇಲಾಖೆ, ಕಾವೇರಿ ನಿಗಮದಲ್ಲಿ ಸಾವಿರಾರು ಕೋಟಿ ಬಿಲ್ ಪಾವತಿ ಬಾಕಿಯಿದ್ದು, ಗುತ್ತಿಗೆದಾರರಿಗೆ ಬಿಲ್ ಪಾವತಿಸುವಾಗ ಬಿಎಸ್​ವೈ ಅವರ […]

ಅಧಿಕಾರಿಗಳಿಂದ ಬಿಎಸ್​ವೈ ಮಗನ ಹೆಸರು ದುರ್ಬಳಕೆ, ಸಿಬಿಐ ತನಿಖೆಗೆ ಗುತ್ತಿಗೆದಾರನಿಂದ ಮನವಿ
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 21, 2020 | 8:03 PM

Share

ಲೋಕೋಪಯೋಗಿ ಇಲಾಖೆ,ಕಾವೇರಿ ನಿಗಮದ ಅಧಿಕಾರಿಗಳು ಸಿಎಂ ಪುತ್ರ ವಿಜಯೇಂದ್ರರ ಹೆಸರನ್ನು ದುರುಪಯೋಗಪಡಿಸಿಕೊಂಡು, ಭೃಷ್ಟಾಚಾರದಲ್ಲಿ ನಿರತರಾಗಿದ್ದಾರೆ, ಈ ಕುರಿತು ಸಿಬಿಐ ತನಿಖೆ ನಡೆಸುವಂತೆ ಮಂಡ್ಯದ ಸಿವಿಲ್ ಗುತ್ತಿಗೆದಾರರೊಬ್ಬರು ಮುಖ್ಯಮಂತ್ರಿ ಮತ್ತು ಅವರ ಕಾರ್ಯದರ್ಶಿಗಳ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯ ಪ್ರತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ಮಂಡ್ಯದ ಪಿಡಬ್ಲ್ಯುಡಿ ಗುತ್ತಿಗೆದಾರ ಮತ್ತು ರೈತರೂ ಆಗಿರುವ ಬಸವೇಗೌಡ ಮನವಿ ಪತ್ರ ನೀಡಿದವರು. ಲೋಕೋಪಯೋಗಿ ಇಲಾಖೆ, ಕಾವೇರಿ ನಿಗಮದಲ್ಲಿ ಸಾವಿರಾರು ಕೋಟಿ ಬಿಲ್ ಪಾವತಿ ಬಾಕಿಯಿದ್ದು, ಗುತ್ತಿಗೆದಾರರಿಗೆ ಬಿಲ್ ಪಾವತಿಸುವಾಗ ಬಿಎಸ್​ವೈ ಅವರ ಮಗ ವಿಜಯೇಂದ್ರ, ಮತ್ತು ಅವರ ಕುಟುಂಬದ ಆಪ್ತ ಉಮೇಶ್ ಅವರ ಹೆಸರನ್ನು ಅಧಿಕಾರಿಗಳು ಬಳಸಿಕೊಂಡು ಶೇ.8ರಷ್ಟು ಕಮೀಷನ್ ಪಡೆಯುತ್ತಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಬಿಲ್ ಪಾವತಿಸುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ಆರೋಪಿಸಿದ್ದಾರೆ.

ಮನವಿಯಲ್ಲಿ ಯಾರ ಹೆಸರಿದೆ?

ಲೋಕೋಪಯೋಗಿ ಇಲಾಖೆಯ ಸರ್ಕಾರಿ ಕಾರ್ಯದರ್ಶಿ, ಆಂತರಿಕ ಆರ್ಥಿಕ ಸಲಹೆಗಾರ, ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್​ಗಳು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು ಸೇರಿ ಸುಮಾರು 60 ಅಧಿಕಾರಿಗಳು ಭೃಷ್ಟಾಚಾರದಲ್ಲಿ ತೊಡಗಿದ್ದಾರೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬಸವೇಗೌಡರು ಕಳೆದ 10 ವರ್ಷಗಳಿಂದ ಲೋಕಾಯುಕ್ತ ಮತ್ತು ಎ.ಸಿ.ಬಿಗೂ ಅಧಿಕಾರಿಗಳು ನಡೆಸುತ್ತಿರುವ ಭೃಷ್ಟಾಚಾರ ಕುರಿತು ಹಲವಾರು ದೂರು ನೀಡುತ್ತಿದ್ದಾರೆ. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಿಲ್ಲವೆಂದು ಅವರು ಹೇಳುತ್ತಾರೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ತನಿಖಾ ಸಂಸ್ಥೆಗಳು ನ್ಯಾಯಯುವಾಗಿ ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ಅವುಗಳನ್ನು ರದ್ದು ಮಾಡಬೇಕೆಂದು ಅವರು ಟಿವಿ9 ಡಿಜಿಟಲ್ ಮೂಲಕ ಮನವಿ ಮಾಡಿದ್ದಾರೆ.

Published On - 7:58 pm, Sat, 21 November 20

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ