AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕೋಪಯೋಗಿ ಇಲಾಖೆಯ ಅಕ್ರಮ, ಲಂಚ ಸಂಗ್ರಹ ದಾಖಲೆ ಪತ್ತೆ: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಇಡಿ

ಕಳೆದ 2 ದಿನಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿರೋದು ಇಡಿ ದಾಳಿ. ಸಚಿವ ಸತೀಶ್ ಜಾರಕಿಹೋಳಿ ನಿವಾಸದ ಮೇಲೆ 36 ಗಂಟೆಗೂ ಹೆಚ್ಚು ಕಾಲ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದರು. ಈ ದಾಳಿಯ ಬಳಿಕ ರಾಜಕೀಯ ಸಮರ ಬಿಜೆಪಿಯ ವಿರುದ್ಧ ಶುರುವಾಗಿದ್ದು, ಬೇರೆ ಬೇರೆ ಕೆಸರೇರಚಾಟಕ್ಕೆ ವೇದಿಕೆಯಾಗಿದೆ. ಇನ್ನೊಂದೆಡೆ ದಾಳಿಯಲ್ಲಿ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಏನೇನು ಪತ್ತೆಯಾಯ್ತು ಎನ್ನುವುದನ್ನು ಸ್ವತಃ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಲೋಕೋಪಯೋಗಿ ಇಲಾಖೆಯ ಅಕ್ರಮ, ಲಂಚ ಸಂಗ್ರಹ ದಾಖಲೆ ಪತ್ತೆ: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಇಡಿ
Satish Jarkiholi
ಶಿವಪ್ರಸಾದ್​ ಬಿ.
| Edited By: |

Updated on:Sep 11, 2026 | 10:40 PM

Share

ಬೆಂಗಳೂರು, (ಸೆಪ್ಟೆಂಬರ್ 11): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವುದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರ ಮಧ್ಯೆ ಇಡಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವರ ಬೆಂಗಳೂರಿನ ನಿವಾಸ, ಪುತ್ರಿ ಪ್ರಿಯಾಂಕಾ, ಮಗ ರಾಹುಲ್ ಹಾಗೂ ಆಪ್ತರ ಒಟ್ಟು 21 ಕಡೆ ಮಾಡಿದ್ದ ದಾಳಿಯಲ್ಲಿ ಏನೇನು ಸಿಕ್ತು ಎನ್ನುವುದನ್ನು ಇಂಚಿಂಚು ಮಾಹಿತಿ ನೀಡಿದೆ. ಇದರಲ್ಲಿ ಪ್ರಮುಖವಾಗಿ PWD ಇಲಾಖೆಯಲ್ಲಿ ಅಕ್ರಮ ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹ ಸಂಬಂಧಿಸಿದ ದಾಖಲೆ, ಡಿಜಿಟಲ್ ಸಾಧನ ಪತ್ತೆಯಾಗಿದೆ ಎಂದು ಇಡಿ ಸ್ಫೋಟ ವಿಚಾರಗಳನ್ನು ಬಹಿರಂಗಪಡಿಸಿದೆ.

ಜಾರಕಿಹೊಳಿ‌ ನಿವಾಸ ಸೇರಿದಂತೆ 21 ಕಡೆ ದಾಳಿ

ಸತೀಶ್ ಜಾರಕಿಹೊಳಿ‌ ನಿವಾಸ ಸೇರಿದಂತೆ 21 ಕಡೆ ದಾಳಿ ನಡೆಸಲಾಗಿದೆ. ಸತೀಶ್ ಜಾರಕಿಹೊಳಿ, ಸಂಸದೆ ಪುತ್ರಿ ಪ್ರಿಯಾಂಕಾ, ಪುತ್ರ ರಾಹುಲ್‌ಗೆ ಸಂಬಂಧಿಸಿದ ಸ್ಥಳ, ಅಳಿಯ ವೈ.ಡಿ. ಮಂಜುನಾಥ್ ಸೇರಿದಂತೆ ಆಪ್ತರ ಮನೆ, ಕಚೇರಿ ಸೇರಿದಂತೆ ಬೆಂಗಳೂರು, ಬೆಳಗಾವಿ, ಗೋಕಾಕ ಹಾಗೂ ಕೋಲ್ಕತ್ತಾದಲ್ಲೂ ಸಹ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ವಿದೇಶಿ ಹೂಡಿಕೆ, ಕ್ರಾಸ್‌ ಬಾರ್ಡರ್ ವ್ಯವಹಾರಗಳ ಬಗ್ಗೆ ತನಿಖೆ ನಡೆದಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು: ವಿದೇಶದಲ್ಲಿ ಹೂಡಿಕೆಗೆ ಪ್ಲ್ಯಾನ್ ಇತ್ತು ಎಂದ ಸಚಿವ ಜಾರಕಿಹೊಳಿ

ದಾಳಿ ವೇಳೆ ಏನೇನು ಸಿಕ್ತು?

ದಾಳಿ ವೇಳೆ ಕಾಂಗೋದ ಮೆಸ್ಸರ್ಸ್‌ನಲ್ಲಿ ಗಣಿಗಾರಿಕೆ ಸಂಸ್ಥೆಯಲ್ಲಿ ಸತೀಶ್ ಜಾರಕಿಹೊಳಿ ಪಾಲು, ಚಿನ್ನದ ಗಣಿಗಾರಿಕೆಯಲ್ಲಿ ಶೇ.40ರಷ್ಟು ಪಾಲು ಹೊಂದಿರುವುದು ಬೆಳಕಿಗೆ ಬಂದಿದೆ. ವಿದೇಶಿ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ದಾಳಿ ವೇಳೆ ಲೆಕ್ಕಕ್ಕೆ ತೋರಿಸದ 3.3 ಕೋಟಿ ರೂಪಾಯಿ ನಗದು, 15 ಲಕ್ಷ ಮೌಲ್ಯದ ಡಾಲರ್, ಯುರೋ ಸೇರಿದಂತೆ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು ಅದೆಲ್ಲಾವನ್ನೂ ಸೀಜ್ ಮಾಡಲಾಗಿದೆ.

ಗುತ್ತಿಗೆದಾರರಿಂದ ಲಂಚ ಸಂಗ್ರಹ ದಾಖಲೆ ಪತ್ತೆ

ಲೋಕೋಪಯೋಗಿ ಇಲಾಖೆಯಲ್ಲಿ ಅಕ್ರಮ ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹ ಸಂಬಂಧಿಸಿದ ದಾಖಲೆ, ಡಿಜಿಟಲ್ ಸಾಧನ ಪತ್ತೆಯಾಗಿದ್ದು, ಸಚಿವ ಸತೀಶ್ ನಿವಾಸದ ಮೇಲೆ ದಾಳಿ ಸಂಬಂಧ ತನಿಖೆ ಮುಂದುವರಿದಿದೆ ಎಂದು ಬೆಂಗಳೂರು ಜಾರಿ ನಿರ್ದೇಶನಾಲಯ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.

PWD ಇಲಾಖೆಯಲ್ಲಿ ಟೆಂಡರ್ ಪಡೆಯಲು ಭಾರಿ ಲಂಚ ನೀಡಲಾಗಿದೆ. ಭಾರತೀಯ ವಾಣಿಜ್ಯ ಈಸ್ಟರ್ನ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆ ಲಂಚ ಪಡೆದಿರುವ ಆರೋಪ ಇದ್ದು, ಈ ಹಣದಿಂದಲೇ ವಿದೇಶಿದಲ್ಲಿ ಆಸ್ತಿ ಖರೀದಿಸಲು ಬಳಸಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಕಂಪನಿ ಅಧಿಕಾರಿಗಳು ಹಾಗೂ ಮಾಲೀಕರ ಮನೆ, ಕಚೇರಿಗಳ ಮೇಲು ದಾಳಿ ಮಾಡಲಾಗಿದೆ.

ಸತೀಶ್ ಜಾರಕಿಹೊಳಿ ಕುಟುಂಬಸ್ಥರು ಎಲ್ದೋರಾಡೋ ಮೈನಿಂಗ್ ರಿಸೋರ್ಸ್ ಮತ್ತು ಜಾಂಬಿಯಾದ ನವ ಔರಂ ಮೈನಿಂಗ್ ಲಿಮಿಟೆಡ್ ಸೇರಿದಂತೆ ಹಲವು ವಿದೇಶಿ ಸಂಸ್ಥೆಗಳಲ್ಲಿ ಷೇರು ಹೊಂದಿರುವುದು ಕಂಡು ಬಂದಿದೆ. ಅಲ್ಲದೆ ಚಿನ್ನದ ಗಣಿಗಾರಿಕೆ ನಡೆಸುತ್ತಿರುವ ಮ್ಯಾಗ್ನಿಟ್ಯೂಡ್ ಸ್ಟಾರ್ ಕಂಪನಿಯಲ್ಲಿ ಸತೀಶ್ ಜಾರಕಿಹೊಳಿ ಪಾಲುದಾರಿಕೆ ಶೇಕಡಾ 40 ರಷ್ಟು ಪಾಲುದಾರಿಕೆ ಹೊಂದಿದ್ದಾರೆ ಎನ್ನುವ ವಿಚಾರ ಬಯಲಾಗಿದೆ.

ವಿಪಕ್ಷಗಳಿಗೆ ಸಿಕ್ತು ಮತ್ತಷ್ಟು ಅಸ್ತ್ರ

ವಿದೇಶದಲ್ಲಿ ಹೂಡಿಕೆ ಸಂಬಂಧ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಾಗಿದೆ ಎಂದು ವಿಪಕ್ಷ ಬಿಜೆಪಿಗರು ಮಾತು. ಆದ್ರೆ, ಇತ್ತ ಕಾಂಗ್ರೆಸ್​ ನಾಯಕರು, ಇಲ್ಲ ಇದು ಟಾರ್ಗೆಟ್ ಮಾಡಿ ದಾಳಿ ಮಾಡಿಸಲಾಗಿದೆ. ಕೇಂದ್ರ ಸರ್ಕಾರವೇ ಮಾಡಿಸಿದೆ ಎಂದು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಇಡಿ ವಿರುದ್ಧ ಮತ್ತು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಸರಣಿ ಪ್ರತಿಭಟನೆಗಳನ್ನು ನಡೆಸಿದ್ದು, ಕೇವಲ ಇಡಿ, ಬಿಜೆಪಿಯ ಹೊರತುಪಡಿಸಿ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಮುಂದಿನ ಮುಖ್ಯಮಂತ್ರಿ ಆಗುವ ಅವಕಾಶ ಸತೀಶ್ ಜಾರ್ಕಿಹೋಳಿ ಅವರಿಗೆ ಇದ್ದು, ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸಲು ರಾಜಕೀಯವಾಗಿ ಸತೀಶ್ ಜಾರ್ಕಿಹೋಳಿಯನ್ನು ಕಟ್ಟಿಹಾಕಲು ಇಡಿ ದಾಳಿ ನಡೆಸಲಾಗಿದೆ ಎಂಬುದು ಸತೀಶ್ ಬೆಂಬಲಿಗರ ಆರೋಪವಾಗಿದೆ.

ಆದ್ರೆ, ಇದೀಗ ದಾಳಿ ವೇಳೆ ಲೋಕೋಪಯೋಗಿ ಇಲಾಖೆಯಲ್ಲಿ ಅಕ್ರಮ ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹ ಸಂಬಂಧಿಸಿದ ದಾಖಲೆ ಸಿಕ್ಕಿರುವುದಾಗಿ ಸ್ವತಃ ಇಡಿಯೇ ಮಾಧ್ಯಮ ಪ್ರಕಟಣೆ ಮೂಲಕ ಬಹಿರಂಗಪಡಿಸಿದ್ದು, ಇದೀಗ ವಿಪಕ್ಷಗಳಿಗೆ ಒಂದು ರೀತಿಯಾಗಿ ಅಸ್ತ್ರ ಸಿಕ್ಕಂತಾಗಿದೆ. ಅಕ್ರಮ ಹಾಗೂ ಲಂಚ ದಾಖಲೆ ಪತ್ತೆಯಾಗಿರುವುದನ್ನು ಮುಂದಿಟ್ಟುಕೊಂಡೇ ಸತೀಶ್ ಜಾರಕೊಹೊಳಿ ಮೇಲೆ ಮುಗಿಬೀಳುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Fri, 11 September 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?