ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು
ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ. ನಿನ್ನೆ ಖಾಸಗಿ […]

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು.
ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ.
ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಹೆರಿಗೆ ಬಳಿಕ 6 ತಿಂಗಳ ಮಗು ಗರ್ಭಿಣಿಯ ಹೊಟ್ಟೆಯಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಗರ್ಭಿಣಿ ದೇಹದಲ್ಲಿ ಹೆಚ್ಚಿನ ನೀರು ತುಂಬಿಕೊಂಡ ಕಾರಣ ತೊಂದರೆಯಾಗಿದೆ. ಆರೋಗ್ಯದ ತೊಂದರೆ ಇದೆ ಅಂತಾ ಹೇಳಿದ್ರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ವಿರುದ್ಧ ಗರ್ಭಿಣಿ ಆರೋಪಿಸಿದ್ದಾರೆ.
Published On - 10:46 am, Thu, 28 May 20