ಕ್ವಾರಂಟೈನ್ ಕೇಂದ್ರದಲ್ಲಿ ಇದೆಂತಹ ದುರಂತ!
ಬೀದರ್: ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಔರಾದ್ ತಾಲೂಕಿನ ವನಮಾರಪಳ್ಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದೆ. ನಾರಾಯಣ ಪುರ ಗ್ರಾಮದ ಸಚಿನ್(25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸಚಿನ್ ವಾರದ ಹಿಂದೆ ಮುಂಬೈನಿಂದ ಬೀದರ್ಗೆ ಬಂದಿದ್ದ. ಹೀಗಾಗಿ ಆತನನ್ನು ವನಮಾರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಈಗ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಔರಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]
ಬೀದರ್: ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಔರಾದ್ ತಾಲೂಕಿನ ವನಮಾರಪಳ್ಳಿಯ ಕ್ವಾರಂಟೈನ್ ಕೇಂದ್ರದಲ್ಲಿ ಘಟನೆ ನಡೆದಿದೆ. ನಾರಾಯಣ ಪುರ ಗ್ರಾಮದ ಸಚಿನ್(25) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.
ಸಚಿನ್ ವಾರದ ಹಿಂದೆ ಮುಂಬೈನಿಂದ ಬೀದರ್ಗೆ ಬಂದಿದ್ದ. ಹೀಗಾಗಿ ಆತನನ್ನು ವನಮಾರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಈಗ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಔರಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Published On - 9:57 am, Tue, 26 May 20