ಬಿಜೆಪಿ ಟಿಕೆಟ್ ಗಾಗಿ ಸುಮಲತಾ ಅಂಬರೀಶ್ ಓಡಾಡುತ್ತಿದ್ದರೆ ಕಾಂಗ್ರೆಸ್ ಸೇರುವ ಪ್ರಶ್ನೆ ಎಲ್ಲಿ ಹುಟ್ಟುತ್ತದೆ? ಚಲುವರಾಯಸ್ವಾಮಿ, ಸಚಿವ
ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಅಂತ ಸುಮಲತಾ ಅವರನ್ನು ಯಾರೂ ಕರೆದಿಲ್ಲ, ಯಾರಾದರೂ ಆಹ್ವಾನಿಸಿದ್ದರೆ ಅವರು ಹೇಳಲಿ, ಅದಾದ ಬಳಿಕ ತಾನು ಪ್ರತಿಕ್ರಿಯೆ ನೀಡುವುದಾಗಿ ಚಲುವರಾಯಸ್ವಾಮಿ ಹೇಳಿದರು. ಸದಕ್ಕಂತೂ ಅವರು ಬಿಜೆಪಿಯಿಂದ ಸ್ಪರ್ಧಿಸುವುದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಹೇಳಿದರು.
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು (JP Nadda) ಭೇಟಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಗೋಸ್ಕರ ಮನವಿ ಮಾಡಿದ್ದು ಅವರು ಬಿಜೆಪಿ ಅಭ್ಯರ್ಥಿ ಆಗಬಯಸಿದ್ದಾರೆ ಅನ್ನೋದು ಸ್ಪಷ್ಟವಾಗುತ್ತದೆ, ಇನ್ನು ಅವರು ಕಾಂಗ್ರೆಸ್ ಪಕ್ಷ ಸೇರುವ ಮಾತು ಹೇಗೆ ಉದ್ಭವಿಸೀತು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಸುಮಲತಾ ಕಾಂಗ್ರೆಸ್ ಪಕ್ಷ ಸೇರುವುದು ಖಚಿತವಾ ಅಂತ ಕೇಳಿದಾಗ ಮೇಲಿನಂತೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಅಂತ ಅವರನ್ನು ಯಾರೂ ಕರೆದಿಲ್ಲ, ಯಾರಾದರೂ ಆಹ್ವಾನಿಸಿದ್ದರೆ ಅವರು ಹೇಳಲಿ, ಅದಾದ ಬಳಿಕ ತಾನು ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಸದಕ್ಕಂತೂ ಅವರು ಬಿಜೆಪಿಯಿಂದ ಸ್ಪರ್ಧಿಸುವುದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಹೇಳಿದರು.
ಸುಮಲತಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅಂತ ಜೆಡಿಎಸ್ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡ ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಅವರು ಹೇಳಿದ್ದು ಗಣನೆಗೆ ಬರಲ್ಲ ಎಂದು ಚಲುವರಾಯಸ್ವಾಮಿ ಹೇಳಿದರು. ಸುಮಲತಾ ಅವರ ಪಾಲಿಗೆ ಕಾಂಗ್ರೆಸ್ ಬಾಗಿಲು ಮುಚ್ಚಿದಂತೆಯೇ ಅಂತ ಕೇಳಿದ ಪ್ರಶ್ನೆಗೆ ಸಚಿವ, ಅದನ್ನು ಅವರನ್ನಷ್ಟೇ ಕೇಳಬೇಕು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ