Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ್ಯಾರಿಗೆ ಟಿಕೆಟ್? ದಿಲ್ಲಿಯಿಂದ ಹೊಸ ಸುದ್ದಿ ಹೊತ್ತು ತಂದ ಅಶೋಕ್ , ಬೊಮ್ಮಾಯಿ

ಲೋಕಸಭೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಆದ್ರೆ ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಇನ್ನೂ ಬಗೆಹರಿಯುತ್ತಿಲ್ಲ. 195 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿರುವ ಬಿಜೆಪಿ ಹೈಕಮಾಂಡ್, 2ನೇ ಪಟ್ಟಿ ಬಿಡುಗಡೆ ಮಾಡಲು ಮ್ಯಾರಥಾನ್ ಮೀಟಿಂಗ್ ಮಾಡುತ್ತಿದೆ. ಅದರಲ್ಲೂ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಅಂತಿಮವಾಗಿದ್ದರೆ, ಇನ್ನೂ ಕೆಲ ಕ್ಷೇತ್ರಗಳ ಟಿಕೆಟ್​ ಕಗ್ಗಾಂಟಾಗಿದೆ. ಅದರಲ್ಲೂ ಮುಖ್ಯವಾಗಿ ಕೆಲ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್​ ಕಟ್ ಆಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಸಭೆ ಮುಗಿಸಿ ಅಶೋಕ್ ಹಾಗೂ ಬಸವರಾಜ್ ಬೊಮ್ಮಾಯಿ ದಿಲ್ಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದು, ಟಿಕೆಟ್​ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಯಾರ್ಯಾರಿಗೆ ಟಿಕೆಟ್? ದಿಲ್ಲಿಯಿಂದ ಹೊಸ ಸುದ್ದಿ ಹೊತ್ತು ತಂದ ಅಶೋಕ್ , ಬೊಮ್ಮಾಯಿ
ಅಶೋಕ್, ಬೊಮ್ಮಾಯಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 12, 2024 | 6:17 PM

ಬೆಂಗಳೂರು, (ಮಾರ್ಚ್ 12): ಲೋಕಸಭಾ ಚುನಾವಣೆಗೆ ( Loksabha Elections 2024) ಈಗಾಗಲೇ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವ ಕ್ಷೇತ್ರವನ್ನು ಬಿಜೆಪಿ ಹೈಕಮಾಂಡ್ ಪರಿಗಣಿಸಿರಲಿಲ್ಲ. ಇದೀಗ ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಇಂದು (ಮಾರ್ಚ್ 12) ರಾತ್ರಿ ಅಥವಾ ನಾಳೆ(ಮಾ.13) ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ ಆಗುತ್ತಿದೆ. ಆದ್ರೆ, ಯಾರಿಗೆಲ್ಲಾ ಟಿಕೆಟ್​ ಸಿಗುತ್ತೆ? ಯಾರಿಗೆ ಸಿಗಲ್ಲ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಭೆ ಮುಗಿಸಿ ದೆಹಲಿಯಿಂದ ವಾಪಸ್ ಬೆಂಗಳೂರಿಗೆ ಆಗಮಿಸಿದ್ದು, ಸಭೆಯಲ್ಲಿ ಏನೆಲ್ಲಾ ಆಯ್ತು? ಯಾರಿಗೆ ಟಿಕೆಟ್? ಯಾವಾಗ ಪಟ್ಟಿ ಬಿಡುಗಡೆಯಾಗುತ್ತೆ ಎನ್ನುವುದರ ಬಗ್ಗೆ ಅಪ್ಡೇಟ್ ನೀಡಿದ್ದಾರೆ.​

ಅಶೋಕ್ ಹೇಳಿದ್ದೇನು?

ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಕೆಲ ಕ್ಷೇತ್ರದ ಟಿಕೆಟ್​ ಪೆಂಡಿಂಗ್ ಆಗಿವೆ. ಇನ್ನೂ ಕೆಲವು ಮಾತುಕತೆ ಹಂತದಲ್ಲಿದ್ದು, ಇಂದು ಅಥವಾ ನಾಳೆಯೊಳಗೆ ಬಿಜೆಪಿ ಪಟ್ಟಿ ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಹಿತಿ ನೀಡಿದರು.

ಗೆಲ್ಲುವ ಮಾನದಂಡದ ಮೇಲೆ ಅಭ್ಯರ್ಥಿಗಳಿಗೆ ಟಿಕೆಟ್​ ತೀರ್ಮಾನ ಮಾಡುತ್ತಿದ್ದಾರೆ. ಹೊಸ ಮುಖಗಳಿಗೂ ಅವಕಾಶ ಕೊಟ್ಟಿದ್ದಾರೆ, ಹಳಬರಿಗೂ ಅವಕಾಶವಿದೆ. ಹಾಲಿ ಸಂಸದರ ಕಾರ್ಯವೈಖರಿ ಬಗ್ಗೆಯೂ ಚರ್ಚೆ ಆಗಿದೆ. ಟಿಕೆಟ್​ ವಿಚಾರವಾಗಿ ಹೈಕಮಾಂಡ್​ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಇದನ್ನೂ ಓದಿ: 18 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಅಂತಿಮ: ಕಗ್ಗಂಟಾಗಿ ಉಳಿದ 10 ಕ್ಷೇತ್ರಗಳು, ಕೆಲ ಹಾಲಿ ಎಂಪಿಗಳಿಗೆ ಟಿಕೆಟ್ ಡೌಟ್

4-5 ಕ್ಷೇತ್ರ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳ ಟಿಕೆಟ್ ಫೈನಲ್

ಇನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಮಾತನಾಡಿ, ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ. ನಾಳೆ ಅಥವಾ ನಾಡಿದ್ದು ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಮೊದಲ ಸಭೆಯಲ್ಲಿ ಚರ್ಚೆಯಾಗಿ ಹೆಸರುಗಳು ಶಾರ್ಟ್​ಲಿಸ್ಟ್ ಆಗಿತ್ತು. ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ನಡ್ಡಾ ಮತ್ತೊಮ್ಮೆ ಪರಾಮರ್ಶಿಸಿದ್ದಾರೆ. 4 ರಿಂದ 5 ಕ್ಷೇತ್ರ ಹೊರತುಪಡಿಸಿ ಎಲ್ಲಾ ಕ್ಷೇತ್ರಗಳ ಟಿಕೆಟ್ ಫೈನಲ್ ಆಗಿದೆ. ಮೈತ್ರಿ ಪಕ್ಷಕ್ಕೆ ಕ್ಷೇತ್ರ ಹಂಚಿಕೆ ಬಗ್ಗೆ ವರಿಷ್ಠರೇ ತೀರ್ಮಾನ ಮಾಡುತ್ತಾರೆ. ರಾಜಕಾರಣದಲ್ಲಿ ಯಾವುದೂ ಕಷ್ಟವಿಲ್ಲ, ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ವಿರೋಧಿಗಳ ರಣನೀತಿ ಮೇಲೆ ನಾವು ಕೆಲವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕೆಲ ಹಾಲಿ ಸಂಸದರಿಗಿಲ್ಲ ಟಿಕೆಟ್

ಮೂಲಗಳ ಪ್ರಕಾರ ನಿನ್ನೆ(ಮಾರ್ಚ್ 11) ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಕ್ಕೆ ಹೆಸರು ಫೈನಲ್ ಆಗಿದೆ ಎನ್ನಲಾಗಿದೆ. ಆದ್ರೆ 10 ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಬೇಕೆಂಬ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಬಗ್ಗೆ ಅಮಿತ್ ಶಾ ಮತ್ತೊಂದು ಸುತ್ತಿನ ಸಭೆ ಮಾಡಿ ಅಂತಿಮಗೊಳಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯವಾಗಿ ಹಾಲಿ ಸಂಸದರಾದ ನಳಿನ್ ಕುಮಾರ್ ಕಟೀಲ್(ದಕ್ಷಿಣ ಕನ್ನಡ), ಪ್ರತಾಪ್ ಸಿಂಹ(ಮೈಸೂರು), ಜಿಎಂ ಸಿದ್ದೇಶ್ವರ್(ದಾವಣಗೆರೆ), ರಮೇಶ್ ಜಿಗಜಿಣಗಿ(ವಿಜಯಪುರ), ಅನಂತಕುಮಾರ್ ಹೆಗಡೆ(ಉತ್ತರ ಕನ್ನಡ) ಅವರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದು ಪಕ್ಕಾ ಆಗಿದೆ. ಹೀಗಾಗಿ ಈ ಎಲ್ಲಾ ಕ್ಷೇತ್ರಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ