ಕರ್ನಾಟಕ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಶೇಕಡಾ 60 ರ ಕಮಿಷನ್ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಜೆಟ್‌ನಲ್ಲಿನ ಅನುದಾನ ಕಡಿತ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿನ ನಿಧಾನಗತಿಯನ್ನು ಅಂಕಿಅಂಶ ಸಮೇತ ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಡೆಯಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ
ಆರ್ ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ಜಂಟಿ ಸುದ್ದಿಗೋಷ್ಠಿ
Follow us
Anil Kalkere
| Updated By: Ganapathi Sharma

Updated on: Jan 07, 2025 | 12:31 PM

ಬೆಂಗಳೂರು, ಜನವರಿ 7: ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್​ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್​ 60 ಪರ್ಸೆಂಟ್ ಕಮಿಷನ್​ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್​ ಪಡೆಯುತ್ತಿದ್ದರು, ಈಗ 60 ಪರ್ಸೆಂಟ್ ಕಮಿಷನ್​ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದರು.

40 X 60 ಸೈಟ್​​ನಲ್ಲಿ ಮನೆ ಕಟ್ಟಲು 20 ಲಕ್ಷ ರೂಪಾಯಿ ಕೊಡಬೇಕು. ಕಳೆದ 6 ತಿಂಗಳಿನಿಂದ ಕಾಂಗ್ರೆಸ್​ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್​ ಇದೆ. ಹಿಂದೆ ನಮ್ಮ ವಿರುದ್ಧ 40 ಪರ್ಸೆಂಟ್ ಕಮಿಷನ್​ ಎಂದು ಫೋಟೋ ಹಿಡಿಸಿದ್ದರು. ಅದೇ ಗುತ್ತಿಗೆದಾರರಿಂದ ಈಗ 40 ಪರ್ಸೆಂಟ್​​ಗಿಂತ ಹೆಚ್ಚು ಕಮಿಷನ್​ ಪೀಕುತ್ತಿದ್ದಾರೆ. ಅಂದಾಜು 32 ಸಾವಿರ ಕೋಟಿ ರೂ. ಸರ್ಕಾರದಿಂದ ಬರಬೇಕಿದೆ. ಸರ್ಕಾರ ಈಗ ಮತ್ತೆ ತೆರಿಗೆಗಳನ್ನು ಹಾಕಬೇಕು ಅಷ್ಟೇ ಎಂದು ಆರ್​ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಕಮಿಷನ್​ಗಾಗಿ ಇಡೀ ರಾಜ್ಯವನ್ನು ಕತ್ತಲೆಗೆ ದೂಡುತ್ತಿರುವ ಸರ್ಕಾರ: ಅಶೋಕ್

ಕಮಿಷನ್​ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡುತ್ತಿದೆ. ಹಿಟ್ನಾಳ್ ಹೇಳಿದರು, ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಎಂದು. ವೋಟ್ ಹಾಕುವಾಗಲೂ ಅಡ್ಜಸ್ಟ್ ಮಾಡ್ಕೊಳ್ಳಿ ಅಂತ ಹೇಳಬೇಕಿತ್ತು. ಖರ್ಗೆಯವರೇ, ‘ಪಾಪರ್ ಮಾಡಿಬಿಡ್ತೀರಿ ನೀವು’ ಎಂದು ಕಾಂಗ್ರೆಸ್​​ನವರಿಗೆ ಹೇಳಿದ್ದಾರೆ. ರಾಜುಕಾಗೆ ದಿನನಿತ್ಯ ಕೂಗುತ್ತಿದ್ದಾರೆ. ಅಭಿವೃದ್ಧಿ ಕುಂಠಿತ ಆಗಿದೆ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್​​ನವರು ಅಭಿವೃದ್ಧಿ ಆಗುತ್ತಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಕಮಿಷನ್ ಪ್ರಮಾಣವನ್ನು ಶೇ 5 ರಷ್ಟು ಹೆಚ್ಚು ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ‌ ದಿನಗಳಲ್ಲಿ ಮತ್ತಷ್ಟು ಕಮಿಷನ್ ಹೆಚ್ಚಾಗಲಿದೆ. ಗುತ್ತಿಗೆದಾರರು ಆತ್ಮಹತ್ಯೆಗೆ ಅರ್ಜಿ ಹಾಕಿಕೊಳ್ಳುವ ಕಾಲ ಬಂದಿದೆ. ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ದಾಖಲೆ ಇದೆಯಾ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಈ ಹಿಂದೆ 40 ಪರ್ಸೆಂಟ್ ಆರೋಪಕ್ಕೆ ದಾಖಲೆ ಕೊಟ್ಟಿದ್ದಿರಾ? ಇದ್ಯಾವ ನ್ಯಾಯ? ಇದು 60 ಪರ್ಸೆಂಟ್ ಲೂಟಿಯ ಸರ್ಕಾರ. ಕುಮಾರಸ್ವಾಮಿ ಹೇಳಿಕೆಯನ್ನ ಸಮರ್ಥನೆ ಮಾಡುತ್ತೇನೆ ಎಂದು ಅಶೋಕ್ ಹೇಳಿದರು.

ಬಜೆಟ್​ನಲ್ಲಿ ಸಿದ್ದರಾಮಯ್ಯ ಮಹಾ ಮೋಸ: ಅಂಕಿಅಂಶ ಸಮೇತ ಬಿಚ್ಚಿಟ್ಟ ಅಶೋಕ್

ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. ಬಿಜೆಪಿ ಗಿಂತ ಹೆಚ್ಚು ಅಭಿವೃದ್ಧಿ ಮಾಡಿದ್ದೇವೆ. ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಹೆಚ್ಚು ಅನುದಾನ ಕೊಟ್ಟಿರುವುದಾಗಿ ಹೇಳಿದ್ದಾರೆ. ಗಂಗಾ ಕಲ್ಯಾಣದಲ್ಲಿ ಬಿಜೆಪಿ 60 ಕೋಟಿ ರೂ. ಕೊಟ್ಟಿತ್ತು, ಈಗ 80 ಕೋಟಿ ರೂ. ಆಗಬೇಕು. ಆದರೆ, ಅವರು ಕೊಟ್ಟಿದ್ದು ಕೇವಲ 40 ಕೋಟಿ ರೂ. ಅಷ್ಟೆ ಎಂದು ಅಶೋಕ್ ಹೇಳಿದರು.

ದಲಿತರ ಬಗ್ಗೆ ಇರುವ ಪ್ರೀತಿಗೆ ಅನುದಾನ ಕಡಿತವೇ: ಸಿದ್ದರಾಮಯ್ಯಗೆ ಪ್ರಶ್ನೆ

ಡಾ.ಬಿ.ಆರ್.ಅಂಬೇಡ್ಕರ್ ಸ್ವಯಂ ಉದ್ಯೋಗ ಯೋಜನೆಗೆ ನಮ್ಮ ಸರ್ಕಾರ ಇದ್ದಾಗ 100 ಕೋಟಿ ರೂ. ಕೊಟ್ಟಿದ್ದೆವು. ಕಾಂಗ್ರೆಸ್ ಅದನ್ನ 45 ಕೋಟಿ ರೂ.ಗೆ ಇಳಿಸಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ನಾವು ಕೊಟ್ಟಿದ್ದು 100 ಕೋಟಿ ರೂ., ಅವರು ಕೊಟ್ಟಿದ್ದು 40 ಕೋಟಿ ರೂ. ದಲಿತರ ಬಗ್ಗೆ ಇರುವ ಪ್ರೀತಿ ಇದುವೆಯಾ ಸಿದ್ದರಾಮಯ್ಯನವರೇ ಎಂದು ಅಶೋಕ್ ಪ್ರಶ್ನಿಸಿದರು.

ಸಂವಿಧಾನದ ಪುಸ್ತಕ ಖಾಲಿ ಇತ್ತೋ, ಪ್ರಿಂಟ್ ಆಗಿತ್ತೊ ಗೊತ್ತಿಲ್ಲ. ಹಿಂದುಗಳಿದ ವರ್ಗಗಳಿಗೆ ದೇವರಾಜು ಅರಸು ಅಭಿವೃದ್ಧಿ ನಿಗಮ 190 ಕೋಟಿ ರೂ. ನಾವು ಕೊಟ್ಟಿದ್ದೆವು. ಅವರು 100 ಕೋಟಿ ರೂ. ಕೊಟ್ಟಿದ್ದಾರೆ. ವಿಶ್ವಕರ್ಮ ಸಮಿದಾಯಕ್ಕೆ 13 ಕೋಟಿ ರೂ. ನೀಡಿದ್ದಾರೆ. ಸಂಗೊಳ್ಳಿರಾಯಣ್ಣ ಕ್ಷೇತ್ರ ಅಭಿವೃದ್ಧಿ ಗೆ ಅವರು 50 ಕೋಟಿ ರೂ. ಕೊಟ್ಟಿದ್ದಾರೆ ಎಂದು ಅಶೋಕ್ ಅಂಕಿಅಂಶ ಸಹಿತ ಟೀಕಾಸ್ತ್ರ ಪ್ರಯೋಗಿಸಿದರು.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ನಾವು 15 ಕೋಟಿ ರೂ. ಕೊಟ್ಟಿದ್ದೆವು. ಇವರು 5 ಕೋಟಿ ರೂ. ಕೊಟ್ಟಿದ್ದಾರೆ. ವೀರಶೈವ ನಿಗಮಕ್ಕೆ 100 ಕೋಟಿ ಕೊಟ್ಟಿದ್ದೆವು., ಇವರು 50 ಕೋಟಿ ರೂ. ಕೊಟ್ಟಿದ್ದಾರೆ. ದೇವಾಲಯ ಇತರೆ ಧಾರ್ಮಿಕ ಸಂಸ್ಥೆಗಳಿಗೆ 274.68 ಕೋಟಿ ರೂ. ನಾವು ಕೊಟ್ಟಿದ್ದೆವು. ಕಾಂಗ್ರೆಸ್​ನವರು 90 ಪರ್ಸೆಂಟ್ ಡಿಸ್ಕೌಂಟ್, 17 ಕೋಟಿ ರೂ. ಕೊಟ್ಟಿದ್ದಾರೆ. ಮಠ, ದೇವಾಲಯಗಳಿಗೆ ಸಿಎಂ ಸಹಾಯ ಧನಕ್ಕೆ ಬಿಜೆಪಿ ಅವಧಿಯಲ್ಲಿ 154.85 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್ ಸರ್ಕಾರ 30 ಕೋಟಿ ರೂ. ಕೊಟ್ಟಿದೆ. ಅನ್ನಕ್ಕೂ ಕನ್ನ ಹಾಕಿದ್ದಾರೆ. ಕಬರ್ ಸ್ತಾನ್ ಅಂತ ಇರೋಬರೋ ಭೂಮಿಗೆಲ್ಲ ಹಾಕಿದ್ದಾರೆ. ಸಿದ್ದರಾಮಯ್ಯ ಹಿಂದೂಗಳಿಗೆ ಎಷ್ಟು ಕೊಟ್ಟಿದ್ದಾರೆ ನೋಡಿ, ಹಿಂದೂ ರುದ್ರಭೂಮಿಗೆ 10 ಕೋಟಿ ರೂ. ಕೊಟ್ಟಿದ್ದಾರೆ. ನಾವು 15 ಕೋಟಿ ಕೊಟ್ಟಿದ್ದೆವು. ರೋಟಿ, ಕಪಡಾ ಮಕಾನ್ ನೇಕಾರ್ ಯೋಜನೆಗೆ 125.77 ಕೋಟಿ ಬಿಜೆಪಿ ಕೊಟ್ಟಿದೆ. ಕೇವಲ 10 ಕೋಟಿ ರೂ. ಮಾತ್ರ ಕಾಂಗ್ರೆಸ್ ಕೊಟ್ಟಿದೆ. ವಿಪಕ್ಷಗಳಿಗೆ ಲೆಕ್ಕಾ ಗೊತ್ತಿಲ್ಲ ಅಂತ ನಮ್ಮ ಮೇಲೆ ಹೇಳುತ್ತಾರೆ ಸಿಐಡಿ ಡಿಐಜಿ ಶಾಂತನು ಸಿನ್ಹಾ ಎಂದು ಅಶೋಕ್ ಕಿಡಿ ಕಾರಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್