AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿ ಹಣ ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ಸ್ಥಗಿತ: ಆರ್.ಅಶೋಕ ಹೇಳಿಕೆಗೆ ವ್ಯಾಪಕ ಖಂಡನೆ

’ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಗಳಲ್ಲಿರುವವರಿಗೆ ಬಡತನದ ಬಗ್ಗೆ ಮಾಹಿತಿಯ ಕೊರತೆಯಿದೆ. ಇನ್ನಾದರೂ ಇವರು ಸರಿಯಾದ ಸಲಹೆಗಾರರನ್ನು ನೇಮಿಸಿಕೊಳ್ಳುವುದು ಒಳಿತು’

ಪಿಂಚಣಿ ಹಣ ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ಸ್ಥಗಿತ: ಆರ್.ಅಶೋಕ ಹೇಳಿಕೆಗೆ ವ್ಯಾಪಕ ಖಂಡನೆ
ಆರ್. ಅಶೋಕ್
Ghanashyam D M | ಡಿ.ಎಂ.ಘನಶ್ಯಾಮ
|

Updated on: Feb 16, 2021 | 3:05 PM

Share

ಬೆಂಗಳೂರು: ಸತತ 9 ತಿಂಗಳು ಬ್ಯಾಂಕ್​ನಿಂದ ಪಿಂಚಣಿ ಹಣ ವಿತ್​ಡ್ರಾ ಮಾಡದಿದ್ದರೆ ಅಂಥ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಲಾಗುವುದು ಎಂಬ ಕಂದಾಯ ಸಚಿವ ಆರ್.ಅಶೋಕ ಅವರ ಹೇಳಿಕೆ ಗೊಂದಲ ಸೃಷ್ಟಿಸಿದೆ. ರಾಜ್ಯದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ ಸಿಗುತ್ತಿರುವ ಪಿಂಚಣಿಯನ್ನೇ ಜೀವನಾಧಾರ ಮಾಡಿಕೊಂಡಿರುವ ಹಲವರು ಕಂದಾಯ ಸಚಿವರ ಹೇಳಿಕೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.

‘ಸರ್ಕಾರದಿಂದ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವವರು 9 ತಿಂಗಳ ಅವಧಿಯಲ್ಲಿ ಹಣವನ್ನು ಡ್ರಾ ಮಾಡದಿದ್ದರೆ ಅಂಥ ಖಾತೆಗಳನ್ನು ಸ್ಥಗಿತಗೊಳಿಸಲು ಬ್ಯಾಂಕುಗಳಿಗೆ ಸೂಚಿಸುತ್ತೇವೆ. ಪ್ರತಿ ವರ್ಷ 4 ಲಕ್ಷ ಹೊಸ ಪಿಂಚಣಿದಾರರು ಸೇರ್ಪಡೆಯಾಗುತ್ತಿದ್ದಾರೆ’ ಎಂದು ಸಚಿವರು ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ್ದರು.

‘ಕೊರೊನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡಿದ್ದ ಹಿನ್ನೆಲೆಯಲ್ಲಿ ಹಲವು ಹಿರಿಯ ನಾಗರಿಕರು ಸುಮಾರು ಒಂದು ವರ್ಷದಿಂದ ಬ್ಯಾಂಕ್​ ಸೇರಿದಂತೆ ಜನಜಂಗುಳಿ ಹೆಚ್ಚಿರುವ ಪ್ರದೇಶಗಳಿಂದ ದೂರವೇ ಉಳಿದಿದ್ದಾರೆ. ಸಾಲಸೋಲ ಮಾಡಿ ಜೀವನ ನಡೆಸುತ್ತಿದ್ದಾರೆ. ಇಂಥ ಹೊತ್ತಿನಲ್ಲಿ ಸಚಿವರು ಪಿಂಚಣಿ ವಿತ್​ಡ್ರಾ ಮಾಡದ ಬ್ಯಾಂಕ್ ಖಾತೆಯನ್ನೇ ನಿರ್ಬಂಧಿಸುತ್ತೇವೆ ಎಂದು ಹೇಳಿರುವುದು ಆತಂಕ ಮೂಡಿಸಿದೆ’ ಎಂದು ಹೆಸರು ಹೇಳಲು ಇಚ್ಛಿಸದ ವೃದ್ಧಾಪ್ಯ ವೇತನ ಫಲಾನುಭವಿಯೊಬ್ಬರು ತಿಳಿಸಿದರು.

‘ಈ ಸರ್ಕಾರಕ್ಕೆ ಏನಾಗಿದೆ? ಟಿವಿ, ಬೈಕ್, ಫ್ರಿಡ್ಜ್ ಇದ್ದವರಿಗೆ ಬಿಪಿಎಲ್ ಕಾರ್ಡ್​ ಕೊಡಲ್ಲ ಎಂದು ನಿನ್ನೆ ಉಮೇಶ್​ ಕತ್ತಿ ಹೇಳಿಕೆ ನೀಡಿ ಗಾಬರಿಯುಂಟು ಮಾಡಿದ್ದರು. ಈಗ ಹಣ ವಿತ್​ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ನಿರ್ಬಂಧಿಸುವುದಾಗಿ ಆರ್.ಅಶೋಕ ಹೇಳಿದ್ದಾರೆ. ಸರ್ಕಾರದಲ್ಲಿ ಆಯಕಟ್ಟಿನ ಸ್ಥಾನಗಳಲ್ಲಿರುವವರಿಗೆ ಬಡತನದ ಬಗ್ಗೆ ಮಾಹಿತಿಯ ಕೊರತೆಯಿದೆ. ಇನ್ನಾದರೂ ಇವರು ಸರಿಯಾದ ಸಲಹೆಗಾರರನ್ನು ನೇಮಿಸಿಕೊಳ್ಳುವುದು ಒಳಿತು’ ಎಂದು ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯರಾಗಿರುವ ಹೋರಾಟಗಾರರೊಬ್ಬರು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ 20ರಂದು ‘ಹಳ್ಳಿ ಕಡೆ ನಡೆಯಿರಿ’ ಕಾರ್ಯಕ್ರಮ; ಹಳ್ಳಿಗಳಿಗೆ ಡಿಸಿ, ಎಸಿ, ತಹಶೀಲ್ದಾರ್ ಭೇಟಿ: ಆರ್​.ಅಶೋಕ ಘೋಷಣೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ