AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಸಚಿವ ಆರ್.ಅಶೋಕ್​ರಿಂದ ಚಾಲನೆ

ಪ್ರತಿ ಮನೆಗೆ ಬಿಬಿಎಂಪಿ ವೈದ್ಯರ ತಂಡ ಭೇಟಿ ನೀಡಲಿದ್ದು, ಮನೆಯಲ್ಲಿರುವ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಅಲ್ಲದೆ ಕೊರೊನಾ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದು, ಕೊರೊನಾ ಲಕ್ಷಣಗಳಿದ್ದರೆ ವೈದ್ಯರ ತಂಡ ಚಿಕಿತ್ಸೆ ನೀಡಲಿದ್ದಾರೆ.

ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಸಚಿವ ಆರ್.ಅಶೋಕ್​ರಿಂದ ಚಾಲನೆ
ಸಚಿವ ಆರ್.ಅಶೋಕ್
TV9 Web
| Updated By: preethi shettigar|

Updated on:Aug 16, 2021 | 2:58 PM

Share

ಬೆಂಗಳೂರು: ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಇಂದು ಸಚಿವ ಆರ್.ಅಶೋಕ್ ಚಾಲನೆ ನೀಡಿದ್ದಾರೆ. ಆ ಮೂಲಕ ಪ್ರತಿ ಮನೆಗೆ ಬಿಬಿಎಂಪಿ ವೈದ್ಯರ ತಂಡ ಭೇಟಿ ನೀಡಲಿದ್ದು, ಮನೆಯಲ್ಲಿರುವ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಅಲ್ಲದೆ ಕೊರೊನಾ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದು, ಕೊರೊನಾ ಲಕ್ಷಣಗಳಿದ್ದರೆ ವೈದ್ಯರ ತಂಡ ಚಿಕಿತ್ಸೆ ನೀಡಲಿದ್ದಾರೆ. ಅಲ್ಲದೆ ಈ ಎಲ್ಲಾ ಮಾಹಿತಿ ಬಿಬಿಎಂಪಿ ಅಭಿವೃದ್ಧಿ ಪಡಿಸಿರುವ ಆ್ಯಪ್‌ಗೆ ಅಪ್ಲೋಡ್ ಕೂಡ ಆಗುತ್ತದೆ.

ಬಳಿಕ ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆಯ ಆತಂಕ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಗರದಲ್ಲಿ ಕಠಿಣ ನಿಯಮ ಜಾರಿ ಬಗ್ಗೆ ಮೂರ್ನಾಲ್ಕು ದಿನದಲ್ಲಿ ಸಿಎಂ ಬಸವರಾಜ ಬೊಮ್ಮಯಿ ಜತೆ ಚರ್ಚೆ ನಡೆಸಲಾಗುತ್ತದೆ. ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆ, ಬೆಂಗಳೂರಿಗೆ ಕಠಿಣ ನಿಯಮ ಜಾರಿ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚಿಸುತ್ತೇವೆ. ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾದರೆ ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಯೋಚಿಸುತ್ತೇವೆ. ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಯೋಚನೆ ಇಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ಬಳಿಕ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸರ್ಕಾರ ಮಟ್ಟದಲ್ಲಿ ಯಾವುದೇ ರೀತಿ ಚರ್ಚೆಯಾಗಿಲ್ಲ. ಮಂತ್ರಿಮಂಡಲದ ಸದಸ್ಯರಲ್ಲೂ ಈ ಬಗ್ಗೆ ಚರ್ಚೆ ನಡೆದಿಲ್ಲ. ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರಿಡಲು ಹೇಳುತ್ತಿದ್ದಾರೆ. ಆದರೆ ಈವರೆಗೆ ಯಾವುದೇ ರೀತಿಯ ಅಧಿಕೃತ ಚರ್ಚೆಯಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಇದನ್ನೂ ಓದಿ: 2 ಡೋಸ್ ಲಸಿಕೆ ಪಡೆದವರಿಗೂ ಕೊರೊನಾ ದೃಢ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

Corona 3rd Wave: ಕೊರೊನಾ 3ನೇ ಅಲೆಯ ಆತಂಕ, ಆಗಸ್ಟ್ 18ರಿಂದ ಬೆಂಗಳೂರಿನಲ್ಲಿ ಹೊಸ ರೂಲ್ಸ್ ಸಾಧ್ಯತೆ

Published On - 2:55 pm, Mon, 16 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ