ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್

Ganesh Chaturthi: ಪ್ರತಿ ತಾಲೂಕಿನಲ್ಲಿ ಆಚರಣೆ ಬಗ್ಗೆ ಮಾಹಿತಿ ಪಡೆದು ಸಭೆ ನಡೆಸಲಾಗುವುದು. ಸೆಪ್ಟೆಂಬರ್ 5 ರಂದು ಆ ಬಗ್ಗೆ ಸಭೆ ಮಾಡಲಾಗುವುದು. ಸಭೆ ಬಳಿಕ ಗಣೇಶ ಉತ್ಸವ ಆಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್
ಗಣೇಶ
Follow us
| Updated By: ganapathi bhat

Updated on:Aug 30, 2021 | 7:14 PM

ಬೆಂಗಳೂರು: ಗಣೇಶ ಹಬ್ಬ ಆಚರಣಗೆ ಅವಕಾಶ ವಿಚಾರವಾಗಿ ಇಂದು (ಆಗಸ್ಟ್ 30) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಸಿದ ಸಭೆಯಲ್ಲಿ ಚರ್ಚಿಸಲಾಗಿದೆ. ಗಣೇಶ ಆಚರಣೆ ಬಗ್ಗೆ ಮತ್ತೊಮ್ಮೆ ಸಭೆ ಕರೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ತಾಲೂಕಿನಲ್ಲಿ ಆಚರಣೆ ಬಗ್ಗೆ ಮಾಹಿತಿ ಪಡೆದು ಸಭೆ ನಡೆಸಲಾಗುವುದು. ಸೆಪ್ಟೆಂಬರ್ 5 ರಂದು ಆ ಬಗ್ಗೆ ಸಭೆ ಮಾಡಲಾಗುವುದು. ಸಭೆ ಬಳಿಕ ಗಣೇಶ ಉತ್ಸವ ಆಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಎಚ್ಚರದಿಂದ ಇರಬೇಕಾಗುತ್ತೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಗಣೇಶೋತ್ಸವ ಆಚರಣೆ ಇರುತ್ತೆ. ಹೀಗಾಗಿ ಈಗಾಗಲೇ ಡಿಸಿ, ಎಸ್​ಪಿಗಳ ಜತೆ ಮಾತುಕತೆ ನಡೆಸಿದ್ದೇವೆ. ಗಣೇಶೋತ್ಸವ ಆಚರಣೆ ಸಂಬಂಧ ಆಯೋಜಕರ ಜತೆ ಚರ್ಚೆ ಮಾಡಬೇಕಿದೆ. ಹಿಂದಿನ ವರ್ಷಗಳಲ್ಲಿ ಅದ್ಧೂರಿಯಾಗಿ ಆಚರಿಸಿದ್ದವರ ಜತೆ ಸಭೆ ಮಾಡುತ್ತೇವೆ. ಡಿಸಿ, ಎಸ್​ಪಿಗಳು ಕರೆದು ಚರ್ಚೆ ನಡೆಸಿ ವರದಿ ನೀಡುತ್ತಾರೆ. ಆ ಬಳಿಕ, ಸೆಪ್ಟೆಂಬರ್ 5 ರಂದು ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದೇವೆ. ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ. ಗಣೇಶೋತ್ಸವ ಆಚರಣೆಗೆ ಅನುಮತಿ ಸಿಗುವ ಎಲ್ಲಾ ಸಾಧ್ಯತೆ ಇದೆ. ನಮ್ಮ ಸರ್ಕಾರ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಸೆಪ್ಟೆಂಬರ್ 5 ರ ಭಾನುವಾರ ಗಣೇಶೋತ್ಸವ ಗೈಡ್​ಲೈನ್ಸ್​ ಸಂಬಂಧ ಸಭೆ ಇದೆ. ಗಣೇಶೋತ್ಸವ ಆಚರಣೆ ಸಂಬಂಧ ನಿರ್ಧಾರ ಸದ್ಯಕ್ಕೆ ಇಲ್ಲ. ಜಿಲ್ಲಾವಾರು ಆಯೋಜಕರ ಅಭಿಪ್ರಾಯ ಪಡೆದು ನಿರ್ಧಾರ ತಿಳಿಸಲಾಗುವುದು ಎಂದು ಹೇಳಲಾಗಿದೆ.

ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಅವಕಾಶ ವಿಚಾರವಾಗಿ ತಾಂತ್ರಿಕ ಸಲಹಾ ಸಮಿತಿ ಸಭೆಗೂ ಮುನ್ನ ಸಿಎಂ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್​ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿತ್ತು. ಸಭೆಯಲ್ಲಿ ಚರ್ಚಿಸುವ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಮಾಹಿತಿಪಡೆದಿದ್ದರು. ಆರೋಗ್ಯ ಇಲಾಖೆಯಿಂದ ಸಿದ್ಧತೆ ಬಗ್ಗೆ ವರದಿ ಪಡೆದಿದ್ದರು. ಈ ವೇಳೆ, 1-8ನೇ ತರಗತಿ ಆರಂಭಕ್ಕೆ ಸಿದ್ಧತೆ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿತ್ತು.

ತಜ್ಞರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಜ್ಞರ ಜತೆ ಸಭೆ ನಡೆಸಲಾಗಿದೆ. ಸಚಿವರಾದ ಕೆ. ಸುಧಾಕರ್, ಬಿ.ಸಿ.ನಾಗೇಶ್, ಆರ್.ಅಶೋಕ್, ಸಿಎಸ್​ಪಿ ರವಿಕುಮಾರ್, ಡಿಜಿ & ಐಜಿಪಿ ಪ್ರವೀಣ್ ಸೂದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆಯಲ್ಲಿ ಭಾಗಿ ಆಗಿದ್ದಾರೆ.

ಸಿಎಂ ನೇತೃತ್ವದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಾಥಮಿಕ ಶಾಲೆಗಳ ಭೌತಿಕ ತರಗತಿ ಆರಂಭ ವಿಚಾರ, 9- 12 ನೇ ತರಗತಿಗಳ ಫೀಡ್‌ಬ್ಯಾಕ್ ಪಡೆಯುವುದು, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕಾ, ನೀಡಬಾರದಾ ಎಂಬ ಬಗ್ಗೆಯೂ ಮಾತುಕತೆ ನಡೆಸಲಾಗಿದೆ. ಜತೆಗೆ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳ ಪರಿಸ್ಥಿತಿ ಪರಿಶೀಲನೆ. ಜಿಲ್ಲಾವಾರು ಕೊವಿಡ್ ಸ್ಥಿತಿಗತಿಯ ಬಗ್ಗೆ ಸಭೆಯಲ್ಲಿ ಚರ್ಚೆ, ಕೊರೊನಾ ಸೋಂಕಿನ 3ನೇ ಅಲೆ ತಡೆಗೆ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಸಭೆಯಲ್ಲಿ ವಿಮರ್ಶಿಸಲಾಗಿದೆ.

ಇದನ್ನೂ ಓದಿ: ಮದುವೆ ಸಮಾರಂಭಗಳಲ್ಲಿ 400 ಜನ ಸೇರಬಹುದು; ಕೊಡಗು, ದ.ಕ. ಹೊರತುಪಡಿಸಿ ಕೊರೊನಾ ನಿರ್ಬಂಧ ಸಡಿಲಿಕೆ

ಇದನ್ನೂ ಓದಿ: School Open: 6ರಿಂದ 8ನೇ ತರಗತಿಯವರೆಗೆ ಸೆಪ್ಟೆಂಬರ್ 6ರಿಂದ ಶಾಲೆ ಆರಂಭ: ಸಚಿವ ಆರ್ ಅಶೋಕ್ ಘೋಷಣೆ

(R Ashok on Ganesh Chaturthi Celebration Ganesh Festival amid Coronavirus Covid19 in Karnataka)

Published On - 6:05 pm, Mon, 30 August 21

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು