R Ashoka, BY Vijayendra Press Meet: ಆರ್ ಅಶೋಕ್, ಬಿ ವೈ ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ
ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಆರ್.ಅಶೋಕ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಅಂದ್ರೆ. ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಲು ನಿರ್ಧರಿಸಿದರು. ಈ ಮೂಲಕ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಕನಸು ಇತ್ತು. ಆದ್ರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ ಎಂದು ವಿಜಯೇಂದ್ರ ಕಿಡಿಕಾರಿದರು.
ಲೋಕಸಭಾ ಚುನಾವಣೆ (Lok Sabha Election) ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹಾಗೂ ಆರ್.ಅಶೋಕ್ (R Ashok) ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಕುಟುಂಬ ರಾಜಕಾರಣ, ಮೇಕೆದಾಟು ವಿಚಾರ, ಟಿಕೆಟ್ ಹಂಚಿಕೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದರು. ಮೇಕೆದಾಟು ವಿಚಾರದ ಬಗ್ಗೆ ಕಾಂಗ್ರೆಸ್ ಸ್ಪಷ್ಟವಾಗಿ ಉತ್ತರಿಸಬೇಕು. ಕಾಂಗ್ರೆಸ್ ಈಗ ಅಧಿಕಾರದಲ್ಲಿದೆ. ಅವರು ಈಗ ಸ್ಪಷ್ಟವಾಗಿ ಹೇಳಬೇಕು. ನಮ್ಮ ನಿಲುವು ಸ್ಪಷ್ಟವಾಗಿದೆ. ನಾವು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದರು.
ಎಲ್ಲವೂ ಶಾಂತಿಯುತವಾಗಲಿದೆ. ಎಲ್ಲಾ ಸಮಸ್ಯೆ ಶಮನವಾಗಲಿದೆ, ತಿಳಿಯಾಗಲಿದೆ. ಎಲ್ಲಾ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಸುಭದ್ರವಾಗಿದೆ ಅಂತ ತಿಳಿಸಬೇಕಿದೆ. ನಮ್ಮ ಮುಂದೆ ಎರಡು ಗುರಿ ಇದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ವಿಜಯಪತಾಕೆ ಹಾರಿಸಬೇಕಿದೆ. ಮುಂದಿನ ಬಾರಿ ಸ್ಪಷ್ಟ ಬಹುಮತ ಬರಬೇಕಿದೆ. ಪಕ್ಷದ ಮುಂದಿನ ಭವಿಷ್ಯದ ದೃಷ್ಟಿಯಿಂದ ಪಕ್ಷದ ಮುಖಾಂತರ ಮಾಡುವ ಕೆಲಸ ಆಗಬೇಕಿದೆ. ವಿಧಾನಸಭಾ ಚುನಾವಣೆಯಲ್ಲಿ ಕೂಡ ಉತ್ತಮ ಗೆಲುವಾಗಬೇಕು. ಆ ನಿಟ್ಟಿನಲ್ಲಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ ಎಂದು ವಿಜಯೆಂದ್ರ ತಿಳಿಸಿದರು.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ