ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ, ಮಾನ ಮರ್ಯಾದೆ ಇಲ್ಲದಿರುವವರು ಯಾರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ
ಮಾನ ಮಱದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Mar 10, 2024 | 7:57 PM

ಬೆಂಗಳೂರು, ಮಾ.10: ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ (R Ashoka), ಮಾನ ಮರ್ಯಾದೆ ಇಲ್ಲದಿರುವವಱರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ತಮಿಳುನಾಡಿಗೆ ಪದೇಪದೆ ನೀರು ಬಿಡುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಚುನಾವಣೆಗೋಸ್ಕರ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ನಾಚಿಕೆಗೆಟ್ಟ ಸರ್ಕಾರ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಲಾಗಿದೆ. ಲೂಟಿ ಹೊಡೆಯುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಪರಿಹಾರ ತರಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಡಿ. ಬೇರೆ ಯಾರಾದರೂ ಕೇಂದ್ರದಿಂದ ಪರಿಹಾರ ತರುತ್ತಾರೆ. ಸರ್ಕಾರ ಪಾಪರ್ ಆಗಿದೆ. ತಮಿಳುನಾಡು, ಆಂಧ್ರದವರು ಅನುದಾನ ತರುತ್ತಾರೆ. ಹೇಗೆ ಮಾತನಾಡಬೇಕೆಂದು ಇವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೋಡಿ ಕಲಿತುಕೊಳ್ಳಬೇಕು ಎಂದರು.

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ

ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅಶೋಕ ಸ್ಪಷ್ಟನೆ ನೀಡಿದರು. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಟಿಕೆಟ್ ಹಂಚಿಕೆ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ವರಿಷ್ಠರ ಜೊತೆಗೆ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಇಂದಿನ ಸಭೆ ರದ್ದುಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸಭೆ ಆಗಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ