ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ಕಾಲ ನಡೆಸಲು ವಿಪಕ್ಷ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ವಕ್ಫ್ ಆಸ್ತಿ, ಪಡಿತರ ಚೀಟಿ, ಅಬಕಾರಿ ಹಗರಣ, ಉತ್ತರ ಕರ್ನಾಟಕದ ಸಮಸ್ಯೆಗಳು, ಆರ್ಥಿಕ ಸ್ಥಿತಿ ಮುಂತಾದ ವಿಷಯಗಳನ್ನು ಚರ್ಚಿಸಲು ಒತ್ತಾಯಿಸಿದ್ದಾರೆ.

ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ
ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 26, 2024 | 6:04 PM

ಬೆಂಗಳೂರು, ನವೆಂಬರ್​ 26: ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ ನಡೆಯಲಿದ್ದು, 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್​​ ಅಶೋಕ್ (R Ashoka) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಿದ್ದೇನೆ ಎಂದಿದ್ದಾರೆ.

ವಕ್ಫ್ ಆಸ್ತಿ ನೋಂದಣಿ, ಪಡಿತರ ಚೀಟಿ ಗೊಂದಲದ ಬಗ್ಗೆ,  ಅಬಕಾರಿ ಇಲಾಖೆ ಹಗರಣದ ಬಗ್ಗೆಯೂ ಪ್ರಸ್ತಾಪ ಮಾಡುತ್ತೇವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ಕೇಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಆರ್​​ ಅಶೋಕ್ ವಾಗ್ದಾಳಿ

ಬೈಎಲೆಕ್ಷನ್​ನಲ್ಲಿ 3 ಕ್ಷೇತ್ರ ಗೆದ್ದಿದ್ದೇವೆಂದು ಬೀಗುವುದು ಬೇಡ. ಸರ್ಕಾರದಲ್ಲಿ ಅಧಿಕಾರಿಗಳಿಗೆ ನೇಣುಭಾಗ್ಯ, ವರ್ಗಾವಣೆ ಭಾಗ್ಯ ನೀಡಿದೆ. ಜನರ ಧ್ವನಿಯಾಗಿ ನಾವು ಸದನದಲ್ಲಿ ಹೋರಾಟ ಮಾಡುತ್ತೇವೆ. ಅನುದಾನ ಕಡಿತ, ಬಿತ್ತನೆ ಬೀಜ ಬೆಲೆ ಏರಿಕೆ ವಿಚಾರಗಳ ಬಗ್ಗೆ ಕೂಡಾ ಚರ್ಚೆ ಮಾಡುತ್ತೇವೆ. ಸರ್ಕಾರದ ಆರ್ಥಿಕ ಸ್ಥಿತಿ ಅಧೋಗತಿಗೆ ಇಳಿದಿರುವ ಬಗ್ಗೆಯೂ ಅಧಿವೇಶನದಲ್ಲಿ ಚರ್ಚಿಸಲು ದಾಖಲೆ ಸಿದ್ಧಪಡಿಸಿಟ್ಟುಕೊಂಡಿದ್ದೇವೆ. ಕಾಂಗ್ರೆಸ್ ಶಾಸಕ ಗವಿಯಪ್ಪ ಇಂದು ಗವಿಯಿಂದ ಗುಡುಗಿದ್ದಾರೆ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಲದಲ್ಲಿ ಕೂತಿದ್ದಾರೆ. ಬಿಲ ಓಪನ್ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶ: ಬಿಜೆಪಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಕಾಂಗ್ರೆಸ್, ಎಲ್ಲರ ಚಿತ್ತ ರಾಜ್ಯಪಾಲರತ್ತ

ವಕ್ಫ್ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ವಿಚಾರ ಬಿಜೆಪಿ ವಿಚಾರವಾಗಿ ಉಳಿದಿಲ್ಲ, ಜನರ ವಿಚಾರವಾಗಿದೆ. ವಕ್ಫ್ ವಿಚಾರದಲ್ಲಿ ಯಾರೇ ಹೋರಾಟ ಮಾಡಿದರೂ ಸ್ವಾಗತಿಸುತ್ತೇವೆ. ವಿಧಾನಸಭೆಯೊಳಗೆ ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

ನಮಗೂ ಕರ್ನಾಟಕದಲ್ಲಿ ಅನುಮಾನ ಎಂದ ಅಶೋಕ್

EVM ಹ್ಯಾಕ್ ಆಗಿದ್ದಕ್ಕೆ ಮಹಾರಾಷ್ಟ್ರದಲ್ಲಿ ನಮಗೆ ಸೋಲು’ ಜಿ. ಪರಮೇಶ್ವರ್ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ಪ್ರತಿಕ್ರಿಯಿಸಿದ್ದು, ಇವಿಎಂ ಸರಿ ಇಲ್ಲ ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಮಗೂ ಕರ್ನಾಟಕದಲ್ಲಿ ಅನುಮಾನ ಇದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ 90 ಸ್ಥಾನ ದಾಟಲ್ಲ ಆದರೂ, 136 ಸ್ಥಾನ ಹೇಗೆ ಬಂತು? ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ 136 ಸ್ಥಾನ ಹೇಗೆ ಬಂತು? ತಕ್ಷಣ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು. ಗೆದ್ದಾಗ ಕುಣಿಯುವುದು, ಸೋತಾಗ ಬಾಯಿ ಬಡಿದುಕೊಳುತ್ತಾರೆ. ಬೈಎಲೆಕ್ಷನ್​​ನಲ್ಲಿ ಸೋತಾಗ ನಾವು ಇವಿಎಂ ಮೇಲೆ ಆರೋಪಿಸಿಲ್ಲ. ಬ್ಯಾಲೆಟ್​​ನಲ್ಲಿ ಚುನಾವಣೆ ನಡೆಸಿ ಎಂದು ಎಲ್ಲರೂ ಸೇರಿ ಚುನಾವಣಾ ಆಯೋಗಕ್ಕೆ ಮನವಿ ಮಾಡೋಣ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:03 pm, Tue, 26 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ