SM Krishna: ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ಆರ್. ​ಅಶೋಕ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

SM Krishna: ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು
ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 11, 2024 | 2:56 PM

ಬೆಂಗಳೂರು, ಡಿಸೆಂಬರ್​ 11: ಮಾಜಿ ಮುಖ್ಯಮಂತ್ರಿ, ಸರಳ ಸಜ್ಜನಿಕೆಯ ರಾಜಕಾರಣಿ, ಅಜಾತ ಶತ್ರು ಎಸ್​.ಎಂ.ಕೃಷ್ಣ (SM Krishna) ವಿಧಿವಶರಾಗಿದ್ದಾರೆ. 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನ ಕೊನೆಗೊಳೆಸಿದ್ದಾರೆ. ಇಡೀ ಕರ್ನಾಟಕವೇ ಕಂಬನಿ ಮಿಡಿದಿದೆ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​. ಅಶೋಕ್​ ಮನವಿ ಮಾಡಿದ್ದಾರೆ.

“ಕರ್ನಾಟಕ ರತ್ನ ಎಸ್.ಎಂ.ಕೃಷ್ಣ”

ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್​. ಅಶೋಕ್, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಆರ್​. ಅಶೋಕ್​ ಟ್ವೀಟ್

ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ‘ಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಕೊನೆಯುಸಿರೆಳೆಯೋ ಮುನ್ನ ಕುಟುಂಬ ವೈದ್ಯರಿಗೆ ಫೋನ್ ಮಾಡಿದ್ದ ಎಸ್​ಎಂ ಕೃಷ್ಣ: ಅಚ್ಚರಿಯ ಅಂಶ ಬಹಿರಂಗ

ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಇಂದು ಎಸ್​ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗಣ್ಯಾತಿಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:55 pm, Wed, 11 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ