ಈಶ್ವರಪ್ಪಗೆ ಮೋದಿ ಫೋಟೊ ಬಳಕೆ ಮಾಡುವ ಅಧಿಕಾರವಿಲ್ಲ: ಆರ್. ಅಶೋಕ್

ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಅವರು ಬಳಕೆ ಮಾಡಿದರೆ ಅದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಬೆಂಗಳೂರಿನಲ್ಲಿ ಹೇಳಿದರು. ಮೋದಿ ಫೋಟೊ ಬಳಕೆ ಸಂಬಂಧ ಈಶ್ವರಪ್ಪ ಕೋರ್ಟ್ ಮೊರೆ ಹೋಗಿರುವುದು, ಬರ ಪರಿಹಾರ ವಿಚಾರವಾಗಿ ಕಾಂಗ್ರೆಸ್ ಟೀಕೆಗಳಿಗೆ ಅಶೋಕ್ ತಿರುಗೇಟು ನೀಡಿದರು.

ಈಶ್ವರಪ್ಪಗೆ ಮೋದಿ ಫೋಟೊ ಬಳಕೆ ಮಾಡುವ ಅಧಿಕಾರವಿಲ್ಲ: ಆರ್. ಅಶೋಕ್
ಆರ್ ಅಶೋಕ
Follow us
| Updated By: ಗಣಪತಿ ಶರ್ಮ

Updated on: Apr 06, 2024 | 2:14 PM

ಬೆಂಗಳೂರು, ಏಪ್ರಿಲ್ 6: ಲೋಕಸಭೆ ಚುನಾವಣೆಗೆ (Lok Sabha Elections) ಶಿವಮೊಗ್ಗ (Shivamogga) ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ (KS Eshwarappa) ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುವ ಅಧಿಕಾರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಮತ್ತು ಬಿವೈ ರಾಘವೇಂದ್ರ ಮಧ್ಯೆ ಮೋದಿ ಫೋಟೋ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದರು.

ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಅವರು ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿಗೆ ಮಾತ್ರ ಮೋದಿ ಫೋಟೊ ಬಳಕೆಗೆ ಅಧಿಕಾರ ಇದೆ. ಈಶ್ವರಪ್ಪ ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು.

ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅಶೋಕ್ ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬರ ಪರಿಹಾರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ವಿಳಂಬ ಮಾಡಿದೆ. ರಾಜ್ಯ ಸರ್ಕಾರ ವಿಳಂಬ ಮಾಡಿ ನಂತರ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಬನ್ನಿ ಎನ್ನುತ್ತಾರೆ. ಯಾಕೆ ಸಂಸತ್​​​ನಲ್ಲಿ ಕಾಂಗ್ರೆಸ್ ಪಕ್ಷ ಸತ್ತು‌ ಹೋಗಿದ್ಯಾ? ಕಾಂಗ್ರೆಸ್ಸಿಗರಿಗೆ ಸಾಮರ್ಥ್ಯ ಇಲ್ಲ ಅಂತ ತೀರ್ಮಾನಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್​ನವರು ತೀರ್ಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ

ಸಚಿವ ಕೃಷ್ಣ ಭೈರೇಗೌಡರು ಅಷ್ಟು ಬುದ್ಧಿವಂತರಾಗಿದ್ದರೆ ಬೆಂಗಳೂರು ಉತ್ತರದಲ್ಲಿ ಸ್ಫರ್ಧಿಸಿ ಗೆದ್ದು ಕೇಳಬಹುದಿತ್ತು. ಗೆದ್ದು ಸಂಸತ್​ನಲ್ಲಿ ಪ್ರಶ್ನೆ ಕೇಳಬಹುದಿತ್ತಲ್ವಾ? ಯಾವ ಮಂತ್ರಿಯೂ ಸ್ಪರ್ಧೆ ಮಾಡಲು ಸಿದ್ಧರಿಲ್ಲ. ಎಲ್ಲಾ ಮಂತ್ರಿಗಳು ಓಡು ಮಗಾ ಓಡು ಎನ್ನುತ್ತಿದ್ದಾರೆ. ಮಂತ್ರಿಗಳೆಲ್ಲಾ ಟೂರ್ ಹೋಗಿದ್ದಾರೆ, ಟೆಂಪಲ್ ರನ್ ಮಾಡುತ್ತಿದ್ದಾರೆ. ಎಲ್ಲ ಸಚಿವರೂ ಮಕ್ಕಳನ್ನು ಸ್ಪರ್ಧೆ ಮಾಡಿಸುತ್ತಿದ್ದಾರೆ ಎಂದು ಅಶೋಕ ವ್ಯಂಗ್ಯವಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ