AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಗುರಿಯಾಗಿಸುತ್ತಿದೆಯೇ ಕಾಂಗ್ರೆಸ್? ಆರ್ ಅಶೋಕ್ ಪ್ರಶ್ನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರು ಥಾವರ್ ಚಂದ್ ಗೆಹ್ಲೋಟ್​​ರನ್ನು ನಿಂದಿಸಿ ಮಾತನಾಡಿದ್ದರು.ಈ ವಿಚಾರವಾಗಿ ಸಾಮಾಜಿಕ ಮಾಧ್ಯಮದ ಮೂಲಕ ಪ್ರಸ್ತಾಪಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ದಲಿತ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಟಿಕಾ ಪ್ರಹಾರ ಮಾಡಿದ್ದಾರೆ.

ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಗುರಿಯಾಗಿಸುತ್ತಿದೆಯೇ ಕಾಂಗ್ರೆಸ್? ಆರ್ ಅಶೋಕ್ ಪ್ರಶ್ನೆ
ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
Ganapathi Sharma
|

Updated on:Aug 20, 2024 | 1:26 PM

Share

ಬೆಂಗಳೂರು, ಆಗಸ್ಟ್ 20: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ ವಾಗ್ದಾಳಿಗೆ ಪ್ರತಿಪಕ್ಷ ನಾಯಕ ಆರ್ ಅಶೋಕ ತಿರುಗೇಟು ನೀಡಿದ್ದಾರೆ. ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ಗುರಿಯಾಗಿಸುತ್ತಿದ್ದಾರೆಯೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಅಶೋಕ್ ಪ್ರಶ್ನಿಸಿದ್ದಾರೆ. ದಲಿತರನ್ನು ದ್ವೇಷಿಸುವ ಮತ್ತು ಗುರಿಯಾಗಿಸುವ ಸುದೀರ್ಘ ಇತಿಹಾಸವನ್ನು ಕಾಂಗ್ರೆಸ್ ಹೊಂದಿದೆ ಎಂದು ಅವರು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಪ್ಲಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಕಾಂಗ್ರೆಸ್ ನಾಯಕರು ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದೇ ವೇಳೆ ಸಚಿವರಾದ ಕೃಷ್ಣಭೈರೇಗೌಡ, ಜಮೀರ್ ಅಹ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರಾಜ್ಯಪಾಲರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಲ್ಲದೆ ನಿಂದಿಸಿದ್ದಾರೆ. ಇದರಿಂದ ಕೆರಳಿರುವ ಅಶೋಕ್ ಇದೀಗ ದಲಿತ​ ದಾಳ ಉರುಳಿಸಿದ್ದಾರೆ.

ಆಶೋಕ್ ಎಕ್ಸ್ ಸಂದೇಶ

ಕಾಂಗ್ರೆಸ್ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿತು ಮತ್ತು ದಶಕಗಳಿಂದ ಅವರಿಗೆ ಭಾರತ ರತ್ನ ನಿರಾಕರಿಸಿತು. ಏಕೆಂದರೆ ಕಾಂಗ್ರೆಸ್​ನವರು ಒಂದೇ ಕುಟುಂಬವನ್ನು ಆರಾಧಿಸುತ್ತಾರೆ. ಆಂಧ್ರಪ್ರದೇಶದ ಮಾಜಿ ಸಿಎಂ ಶ್ರೀ ಟಿ.ಆಂಜಯ್ಯ ದಲಿತ ಎಂಬ ಕಾರಣಕ್ಕೆ ರಾಜೀವ್ ಗಾಂಧಿ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದ್ದರು. ಬಾಬು ಜಗಜೀವನ್ ರಾಮ್ ಮತ್ತು ಸೀತಾರಾಂ ಕೇಸರಿ ಅವರು ಕೆಳ ವರ್ಗಗಳ ನಾಯಕರಾಗಿದ್ದರಿಂದ ಅವರಿಗೆ ಕಾಂಗ್ರೆಸ್ ಎಂದಿಗೂ ಅರ್ಹತೆ ನೀಡಲಿಲ್ಲ ಎಂದು ಅಶೋಕ್ ಟೀಕಿಸಿದರು.

ಇದನ್ನೂ ಓದಿ: ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್; ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಲೀಂ ಅಹ್ಮದ್

ಬುಡಕಟ್ಟು ಮಹಿಳೆಯೊಬ್ಬರು ಭಾರತದ ರಾಷ್ಟ್ರಪತಿಯಾಗುವುದನ್ನು ತಡೆಯಲು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪ್ರಯತ್ನಿಸಿದವು. ಪ್ರಧಾನಿ ಮೋದಿ ಒಬಿಸಿ ಸಮುದಾಯದ ಪ್ರಧಾನಿ ಎಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ದ್ವೇಷಿಸುತ್ತದೆ. ಈಗ ಕಾಂಗ್ರೆಸ್​​ನವರು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ, ಏಕೆಂದರೆ ಅವರು ದಲಿತರಾಗಿದ್ದಾರೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

‘ನಾಲಾಯಕ್ ಸಚಿವ ಕೃಷ್ಣಭೈರೇಗೌಡರನ್ನು ಯಾವಾಗ ವಜಾ ಮಾಡುತ್ತೀರಿ?’

ಸಂವಿಧಾನ ಮತ್ತು ಸಾಮಾಜಿಕ ನ್ಯಾಯವನ್ನು ದ್ವೇಷಿಸುವ ಊಳಿಗಮಾನ್ಯ ಸಂಸ್ಥೆಗೆ ಕಾಂಗ್ರೆಸ್ ಒಂದು ದೊಡ್ಡ ಉದಾಹರಣೆ. ರಾಹುಲ್ ಗಾಂಧಿ ಅವರೇ, ಸಾಂವಿಧಾನಿಕ ಹುದ್ದೆಯಲ್ಲಿರುವ ದಲಿತ ವ್ಯಕ್ತಿಯನ್ನು ಅವಮಾನಿಸಿದ ನಿಮ್ಮ ‘ನಾಲಾಯಕ್’ ಸಚಿವ ಕೃಷ್ಣಭೈರೇಗೌಡರನ್ನು ಯಾವಾಗ ವಜಾ ಮಾಡುತ್ತೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಏನು ಹೇಳಿದ್ದರು ಕೃಷ್ಣಭೈರೇಗೌಡ?

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಮಾತನಾಡಿದ್ದ ಕೃಷ್ಣಭೈರೇಗೌಡ, ಥಾವರ್ ಚಂದ್ ಗೆಹ್ಲೋಟ್ ಕರ್ತವ್ಯದಲ್ಲಿ ಮುಂದುವರಿಯಲು ‘ನಾಕಾಯಕ್’ ಎಂದಿದ್ದರು.

ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ; ಜಮೀರ್​

ಯಾರು ಏನು ಹೇಳಿದ್ದರು?

ಥಾವರ್ ಚಂದ್ ಗೆಹ್ಲೋಟ್ ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದ್ದರು. ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ ಎಂದು ಮತ್ತೊಬ್ಬ ಸಚಿವ ಜಮೀರ್ ಅಹ್ಮದ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:26 pm, Tue, 20 August 24