AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ

ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸುವ ವಿಚಾರವಾಗಿ ಸರ್ಕಾರದ ಹೊಸ ಆದೇಶದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಕೆರಳಿದ್ದಾರೆ. ಇನ್ನೊಂದೆಡೆ ಶಾಲೆ ಪುನಾರಂಭವಾದರೂ ಕೂಡ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ನೀಡಿಲ್ಲ. ಶಾಲೆ ಆರಂಭವಾದರೂ ಪಠ್ಯಪುಸ್ತಕ ಕೊಡದಿರುವುದು ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ
ಶಾಲೆ ಆರಂಭವಾದರೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಕಿಡಿ
ಕಿರಣ್​ ಹನಿಯಡ್ಕ
| Edited By: |

Updated on: Jun 13, 2024 | 3:06 PM

Share

ಬೆಂಗಳೂರು, ಜೂನ್​ 13: ಒಂದೂವರೆ ತಿಂಗಳ ಬೇಸಿಗೆ ರಜೆ ಬಳಿಕ ಇತ್ತೀಚೆಗೆ ರಾಜ್ಯದ ಎಲ್ಲೆಡೆ ಶಾಲೆಗಳು ಪುನಾರಂಭವಾಗಿವೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ (textbooks) ನೀಡಿಲ್ಲ. ಶಾಲೆ ಆರಂಭವಾದರೂ ಪಠ್ಯಪುಸ್ತಕ ಕೊಡದಿರುವುದು ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಚಿತ ಅಂತ‌ ಹೇಳಿ ಇದುವರೆಗೂ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಉಚಿತ 10 ಯೋಜನೆ ಕೊಡಿ, ನಮ್ಮ ವಿರೋಧ ಇಲ್ಲ. ಆದರೆ ಆರ್ಥಿಕ ಪರಿಸ್ಥಿತಿ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ. ಸರ್ಕಾರ ಪಾಪರ್ ಆಗಿದ್ಯಾ, ಹಣದ ಹೊಳೆ ಹರಿಯುತ್ತಿದ್ಯಾ ಗೊತ್ತಾಗಲಿ. ಸಾರಿಗೆ ಇಲಾಖೆ ಮುಳುಗುವ ಸ್ಥಿತಿಗೆ ಬಂದಿದೆ. ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹ ಧನ ನಿಲ್ಲಿಸಿದ್ದಾರೆ. ನೌಕರರ ಸಂಬಳ ಕೊಡಲು ಸಾಲ‌ ಮಾಡುವ ಪರಿಸ್ಥಿತಿ ಬಂದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೆಳಿದ ಅಂಗನವಾಡಿ ಕಾರ್ಯಕರ್ತೆಯರು

ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸುವ ವಿಚಾರವಾಗಿ ಸರ್ಕಾರದ ಹೊಸ ಆದೇಶದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಕೆರಳಿದ್ದಾರೆ. ರಾಯಚೂರು ನಗರದಲ್ಲಿ ಶಾಸಕ ಶಿವರಾಕ್ ಪಾಟೀಲ್ ನಿವಾಸ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕಚೇರಿ ಎದುರು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಿದ್ದಾರೆ. ನಮ್ಮ ಭಾಗದ ಶಾಸಕರು ಸರ್ಕಾರದ ಮಟ್ಟದಲ್ಲಿ, ಅಂಗನವಾಡಿ ಕಾರ್ಯಕರ್ತರ ಪರ ಧ್ವನಿ ಎತ್ತಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಆರಂಭದ ಮೊದಲ ದಿನವೇ ಶಾಲೆಗೆ ಬೀಗ ಹಾಕಿದ ಎಸ್​ಡಿಎಂಸಿ ಸದಸ್ಯರು; ಯಾಕೆ ಗೊತ್ತಾ?

ಪ್ರತಿಭಟನೆ ಬಳಿಕ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ಪದ್ಮಾ ಟಿವಿ9ಗೆ ಹೇಳಿಕೆ ನೀಡಿದ್ದು, ನಮ್ಮಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಿಸಬೇಕು ಅಂತ ಈ ಹಿಂದೆಯೇ ಮನವಿ ಸಲ್ಲಿಸಲಾಗಿದೆ. ಆದರೆ ಈಗ  ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿಗಳನ್ನ ಆರಂಭಿಸಲಾಗಿದೆ. 3-6 ವರ್ಷದ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ, ಯುಕೆಜಿಗೆ ಹೋದರೆ ಅಂಗನವಾಡಿ ಕೇಂದ್ರಗಳು ಮುಚ್ಚಿ ಹೋಗುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯ ವಯೋಮಿತಿ: ಪೋಷಕರ ಆಕ್ರೋಶ

ನೂರಾರು ರೂಪಾಯಿ ಸಂಬಳಕ್ಕೆ ಕಷ್ಟಪಟ್ಟು ಮಕ್ಕಳ ಸೇವೆ ಮಾಡುತ್ತೇವೆ. ಆದರೆ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಕೈಗೊಳ್ಳುತ್ತಾರೆ. 6 ವರ್ಷದೊಳಗಿನ ಮಕ್ಕಳು ಅಂಗನವಾಡಿ ಕೇಂದ್ರಲ್ಲಿಯೇ ಉಳಿಯಬೇಕು ಅಂತ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.