ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; 24 ಕುಟುಂಬಗಳಿಗೆ ಪರಿಹಾರ, ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಎಂದು ಆರ್.ಧ್ರುವನಾರಾಯಣ
24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ನಿಲ್ಲಸಬೇಕು ಎಂದು ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಾಮರಾಜನಗರ: ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೇಮಿಸಿದ ತಜ್ಞರ ಸಮಿತಿ 36 ಜನರ ಮೃತಪಟ್ಟಿರುವುದಾಗಿ ವರದಿ ನೀಡಿತ್ತು. ಆದರೆ ಈಗ ರಾಜ್ಯ ಸರ್ಕಾರದಿಂದ 24 ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ. 24 ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಉಳಿದ 12 ಕುಟುಂಬಗಳಿಗೆ ಪರಿಹಾರ ಬಿಡುಗಡೆ ಮಾಡಿಲ್ಲ.
ಮೇ 2ರಂದು ಆಕ್ಸಿಜನ್ ಖಾಲಿಯಾಗಿ 24 ಜನ ಮೃತಪಟ್ಟಿದ್ದರು. ಹೈಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಕೆ ಅನ್ವಯ ಕುಟುಂಬದ ವಾರಸುದಾರರ ಖಾತೆಗಳಿಗೆ ಹಣ ಜಮೆ ಆಗಲಿದೆ. ಹೀಗಾಗಿ ಪರಿಹಾರ ವಿತರಣೆಗಾಗಿ ₹48 ಲಕ್ಷ ಡಿಸಿ ಖಾತೆಗೆ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಉಳಿದ 12 ಜನ ಆಕ್ಸಿಜನ್ ಸಿಗದೆ ಮೃತಪಟ್ಟಿಲ್ವಾ? 12 ಜನ ಮೃತರ ಕುಟುಂಬಗಳಿಗೆ ಪರಿಹಾರ ಏಕೆ ವಿತರಿಸಿಲ್ಲ? ಎಂಬ ಪ್ರಶ್ನೆ ಎದ್ದಿದೆ. ಹೈಕೋರ್ಟ್ ನೇಮಿಸಿದ ತಜ್ಞರ ಸಮಿತಿ 36 ಜನರ ಮೃತಪಟ್ಟಿರುವುದಾಗಿ ವರದಿ ನೀಡಿದ್ದರೂ ರಾಜ್ಯ ಸರ್ಕಾರ ವರದಿಯನ್ನು ಪರಿಗಣಿಸದೆ ಕೇವಲ 24 ಕುಟುಂಬಗಳಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ ಇನ್ನು ರಾಜ್ಯ ಸರ್ಕಾರ ಕೇವಲ 24 ಕುಟುಂಬಗಳಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಿರುವುದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಜ್ಞರ ಸಮಿತಿ 36 ಜನ ಮೃತಪಟ್ಟಿರುವುದಾಗಿ ವರದಿ ನೀಡಿತ್ತು. ಆದೆರ 24 ಕುಟುಂಬಗಳಿಗೆ ಮಾತ್ರ ತಲಾ 2 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಉಳಿದ 12 ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಸಾವಿನಲ್ಲೂ ತಾರತಮ್ಯ ಮಾಡುವುದನ್ನ ಸರ್ಕಾರ ನಿಲ್ಲಸಬೇಕು ಎಂದು ಚಾಮರಾಜನಗರದಲ್ಲಿ ಆರ್.ಧ್ರುವನಾರಾಯಣ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.




