ಬೆಂಗಳೂರು: 15 ಕ್ಷೇತ್ರಗಳ ಉಪ ಸಮರಕ್ಕೆ ಬಿಜೆಪಿ ಈಗಾಗಲೇ 13 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದ್ರೆ ಅನರ್ಹ ಶಾಸಕ ಆರ್.ಶಂಕರ್ ಮತ್ತು ರೋಷನ್ ಬೇಗ್ ಅವರ ಹೆಸರನ್ನು ಪ್ರಕಟಿಸಿಲ್ಲ.
ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್ ಅವರನ್ನು ಎಂಎಲ್ಸಿ ಮಾಡಿ ಸಚಿವರನ್ನಾಗಿ ಮಾಡ್ತೇವೆ. ಹೀಗಾಗಿ ಅವರಿಗೆ ಟಿಕೆಟ್ ನೀಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ರೋಷನ್ ಬೇಗ್ಗೆ ಟಿಕೆಟ್ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿ ನಂತರ ತೀರ್ಮಾನ ತೆಗೆದುಕೊಳ್ಳಲಾಗುತ್ತೆ ಎಂದರು. ಆದ್ರೆ, ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ತಗ್ಲಾಕ್ಕೊಂಡಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ಘೋಷಿಸಿಲ್ಲ ಎನ್ನಲಾಗಿದೆ.