ಕರ್ನಾಟಕ ಬಿಜೆಪಿ ಉಸ್ತುವಾರಿ ಬದಲಾವಣೆ: ಅರುಣ್ ಸಿಂಗ್ಗೆ ಕೊಕ್, ಹೊಸ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯ ಹೈಕಮಾಂಡ್ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಬದಲಾವಣೆ ಮಾಡಿದೆ. ಈ ಮೂಲಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ಅರುಣ್ ಸಿಂಗ್ಗ್ ಕೊಕ್ ನೀಡಲಾಗಿದೆ.
ಬೆಂಗಳೂರು, (ಜುಲೈ 05); ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಇದೀಗ ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ. ಹೌದು..ಉಸ್ತುವಾರಿಯಾಗಿದ್ದ ಅರುಣ್ ಸಿಂಗ್ ಅವರಿಗೆ ಕೊಕ್ ನೀಡಿ ಇದೀಗ ಬಿಜೆಪಿ ಹೈಕಮಾಂಡ್, ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಇನ್ನು ಸುಧಾಕರ್ ರೆಡ್ಡಿ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಿಸಲಾಗಿದೆ.
ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.
ಅರುಣ್ ಸಿಂಗ್ ಅವರು ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿದ್ದರು. ಇನ್ನು ರಾಧಮೋಹನ್ ದಾಸ್ ಅವರು ಲೋಕಸಭೆ ಚುನಾವಣೆಯ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಇದೀಗ ಅರುಣ್ ಸಿಂಗ್ ಅವರನ್ನ ಬದಲಿಸಿ ರಾಧಮೋಹನ್ ದಾಸ್ ಅವರನ್ನು ರಾಜ್ಯ ಬಿಜೆಪಿ ಉಸ್ತುವರಿಯನ್ನಾಗಿ ನೇಮಕ ಮಾಡಲಾಗಿದೆ.
ಲೋಕಸಭಾ ಚುನಾವಣೆ ವೇಳೆ ರಾಜ್ಯ ಬಿಜೆಪಿಯಲ್ಲಿ ಸ್ಫೋಟಗೊಂಡಿದ್ದ ಅಸಮಾಧಾನವನ್ನು ಶಮನ ಮಾಡುವಲ್ಲಿ ರಾಧಮೋಹನ್ ದಾಸ್ ಪ್ರಮುಖ ಪಾತ್ರ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಸೇರಿಕೊಂಡು ಅಸಮಾಧಾನಗೊಂಡಿದ್ದ ನಾಯಕರನ್ನು ಸಮಾಧಾನ ಮಾಡಿದ್ದರು. ಅದರಲ್ಲೂ ಪ್ರಮುಖವಾಗಿ ರಾಧಮೋಹನ್ ದಾಸ್ ಅವರು ಟಿಕೆಟ್ ವಂಚಿತದಿಂದ ಬೇಸರಗೊಂಡಿದ್ದ ಪ್ರತಾಪ್ ಸಿಂಹ, ಸಂಗಣ್ಣ ಕರಡಿ, ಸದಾನಂದಗೌಡ ಸೇರಿದಂತೆ ಇತರೆ ನಾಯಕರನ್ನ ಕರೆದು ಮಾತನಾಡಿದ್ದರು.
ಇನ್ನು ಕೊನೆ ಕ್ಷಣದಲ್ಲಿ ಉತ್ತರ ಕನ್ನಡ, ಬೆಳಗಾವಿ, ರಾಯಚೂರು ಲೋಕಸಭಾ ಕ್ಷೇತ್ರದ ಟಿಕೆಟ್ಅನ್ನು ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಅಂತಿಮಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೈಕಮಾಂಡ್, ಅರುಣ್ ಸಿಂಗ್ ಅವರನ್ನು ಬದಲಾಯಿಸಿ ರಾಧಮೋಹನ್ ದಾಸ್ ಪ್ರ ಅವರನ್ನೇ ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:48 pm, Fri, 5 July 24