ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಆಸ್ಪತ್ರೆಗೆ ಶಿಫ್ಟ್.. ಏನಾಯ್ತು?

| Updated By: ಸಾಧು ಶ್ರೀನಾಥ್​

Updated on: Dec 24, 2020 | 10:51 AM

10 ಘಂಟೆ ಸುಮಾರಿಗೆ ಪರಪ್ಪನ ಅಗ್ರಹಾರದಿಂದ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಆಸ್ಪತ್ರೆಗೆ ಶಿಫ್ಟ್.. ಏನಾಯ್ತು?
ಸಾಂದರ್ಭಿಕ ಚಿತ್ರ
Follow us on

ಆನೇಕಲ್: ಡ್ರಗ್ಸ್ ಪ್ರಕರಣದಲ್ಲಿ ಜೈಲು ವಾಸದಲ್ಲಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಸುಮಾರು 10 ಗಂಟೆಗೆ ಪರಪ್ಪನ ಅಗ್ರಹಾರದಿಂದ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಗೊಳಿಸಲಾಗಿದೆ ಎಂದುತಿಳಿದುಬಂದಿದೆ.

ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಾಗಿಣಿ ನಿನ್ನೆ ಜೈಲಿನ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದರು. ನಿನ್ನೆ ಆಸ್ಪತ್ರೆಯಲ್ಲಿಯೇ ನಟಿ ರಾಗಿಣಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ, ರಾಗಿಣಿಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ -ಮೌಲ್ವಿ ವಿರುದ್ಧ ಠಾಣೆಗೆ ದೂರು