AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ, ಸಿದ್ದರಾಮಯ್ಯ 30 ನಿಮಿಷ ಮಾತುಕತೆ: ಹನಿಟ್ರ್ಯಾಪ್ ಬಗ್ಗೆ ಸುದೀರ್ಘ ಚರ್ಚೆ

Rahul Gandhi and Siddaramaiah Meeting: ಸಿಎಂ ಸಿದ್ದರಾಮಯ್ಯ 3 ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಗುರುವಾರ ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹನಿಟ್ರ್ಯಾಪ್ ವಿವಾದ, ಆಡಳಿತ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಷಯಗಳು ಚರ್ಚೆಗೆ ಬಂದಿವೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯ 30 ನಿಮಿಷ ಮಾತುಕತೆ: ಹನಿಟ್ರ್ಯಾಪ್ ಬಗ್ಗೆ ಸುದೀರ್ಘ ಚರ್ಚೆ
ರಾಹುಲ್ ಗಾಂಧಿ, ಸಿದ್ದರಾಮಯ್ಯ ಭೇಟಿ
ಹರೀಶ್ ಜಿ.ಆರ್​.
| Updated By: Ganapathi Sharma|

Updated on:Apr 04, 2025 | 7:11 AM

Share

ನವದೆಹಲಿ, ಏಪ್ರಿಲ್ 4: ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿ ಭೇಟಿ ರಾಜ್ಯ ಕಾಂಗ್ರೆಸ್​ನಲ್ಲಿ (Karnataka Congress) ಭಾರಿ ಸಂಚಲನ ಸೃಷ್ಟಿಸಿದೆ. 3 ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಗುರುವಾರ ರಾಹುಲ್ ಗಾಂಧಿ (Rahul Gandhi), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಮೊದಲು ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿಯಾದರು. ಸುಮಾರು 30 ನಿಮಿಷಗಳ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಹಲ್​ಚಲ್ ಎಬ್ಬಿಸಿರುವ ಹನಿಟ್ರ್ಯಾಪ್ ವಿಚಾರವಾಗಿಯೂ ರಾಹುಲ್-ಸಿದ್ದರಾಮಯ್ಯ ನಡುವೆ ಚರ್ಚೆ ನಡೆದಿದೆ. ಈ ವೇಳೆ ಹನಿಟ್ರ್ಯಾಪ್‌ ವಿಚಾರವಾಗಿ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಪಕ್ಷದ ನಾಯಕರ ಮೇಲೆ ಆರೋಪಗಳಿದ್ದರೆ ಅದನ್ನು ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಬಹುದಿತ್ತು ಎಂದು ರಾಹುಲ್ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಉನ್ನತ ಮಟ್ಟದ ಚರ್ಚೆ?

ರಾಹುಲ್ ಗಾಂಧಿ ಮಾತ್ರವಲ್ಲದೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನೂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವೂ ಮುನ್ನೆಲೆಗೆ ಬಂದಿದೆ. ಅಧ್ಯಕ್ಷ ಸ್ಥಾನದ ರೇಸ್​ನಲ್ಲಿರುವ ಸಚಿವ ಈಶ್ವರ್ ಖಂಡ್ರೆ ದೆಹಲಿಗೆ ತೆರಳಿದ್ದಾರೆ.

ಇನ್ನು, ಪರಿಷತ್ ನಾಮನಿರ್ದೇಶನ ಅಭ್ಯರ್ಥಿಗಳ ಪಟ್ಟಿಯನ್ನು ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆದರೂ ಸದ್ಯಕ್ಕೆ ಬೇಡ ಎಂದು ಹೈಕಮಾಂಡ್ ಹೇಳಿದೆ ಎನ್ನಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ದೆಹಲಿಗೆ ಭೇಟಿ ಕೊಟ್ಟು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
ಸಾಕಾ, ಬೇಕಾ... ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಚಹಾ ದರ ಹೆಚ್ಚಳ
Image
ರೈಲ್ವೆ ಇಲಾಖೆ ಗುಡ್ ನ್ಯೂಸ್: ಮತ್ತೆರೆಡು ಬೇಸಿಗೆ ವಿಶೇಷ ರೈಲುಗಳ ಘೋಷಣೆ
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
Image
ಕಾಮಖೆಡ್ಡಾ, ರಾಜೇಂದ್ರ ಕೊಲೆ ಯತ್ನದ ಸೂತ್ರಧಾರಿಯ ಹಿಡಿಯುವರೇ ಅಧಿಕಾರಿಗಳು

ಇದನ್ನೂ ಓದಿ: ಸಿಟಿ ರವಿಗೆ ಕಬ್ಬಿನ ಗದ್ದೆ ತೋರಿಸಿದ ಅಧಿಕಾರಿಗಳು ಕಾಮಖೆಡ್ಡಾ ಮತ್ತು ರಾಜೇಂದ್ರ ಕೊಲೆ ಯತ್ನದ ಸೂತ್ರಧಾರಿಯನ್ನು ಹಿಡಿಯುವರೇ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಗೆ ಭೇಟಿ ನೀಡುತ್ತಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಹನಿಟ್ರ್ಯಾಪ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸೇರಿದಂತೆ ವಿವಿಧ ವಿಚಾರಗಳು ಚರ್ಚೆಯಲ್ಲಿರುವಾಗಲೇ ಮುಖ್ಯಮಂತ್ರಿಗಳು ದೆಹಲಿಗೆ ದೌಡಾಯಿಸಿದ್ದು ಕುತೂಹಲಕ್ಕೂ ಕಾರಣವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 am, Fri, 4 April 25