AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕತ್ವ ಬದಲಾವಣೆ: ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ?

ಕರ್ನಾಟಕ ಕಾಂಗ್ರೆಸ್ ನಾಯಕರ ಹೈಕಮಾಂಡ್ ಸಭೆಯ ಬೆನ್ನಲ್ಲೇ ಎದ್ದಿದ್ದ ಹಲವು ರಾಜಕೀಯ ಚರ್ಚೆಗಳು ಹಾಗೂ ವದಂತಿಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೆರೆ ಎಳೆದಿದ್ದಾರೆ. ಇಂದು (ಮೇ 26) ದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಕೇವಲ ಮುಂಬರುವ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ರೆ, ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಸಹ ಚರ್ಚೆಯಾಗಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಸಿಎಂ ಸಿದ್ದರಾಮಯ್ಯಗೆ ಏನೆಲ್ಲಾ ಆಫರ್ ಕೊಡಲಾಗಿದೆ ಎನ್ನುವ ಇನ್​​​​ಸೈಡ್ ಮಾಹಿತಿ ಇಲ್ಲಿದೆ.

ನಾಯಕತ್ವ ಬದಲಾವಣೆ:  ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ಕೊಟ್ರಾ ರಾಹುಲ್ ಗಾಂಧಿ?
Rahul And Siddaramaiah
Pramod Shastri G
| Edited By: |

Updated on:May 26, 2026 | 8:01 PM

Share

ನವದೆಹಲಿ,(ಮೇ 26): ದೆಹಲಿಯಲ್ಲಿಂದು (New Delhi) ನಡೆದ ಸರಣಿ ಸಭೆಯಲ್ಲಿ ರಾಜ್ಯಸಭಾ ಚುನಾವಣೆ ಮಾತ್ರವಲ್ಲದೇ ಪ್ರಮುಖವಾಗಿ ಕರ್ನಾಟಕ (Karnataka) ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜತೆ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸರಿಸುಮಾರು 45 ನಿಮಿಷಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ಆಫರ್​​​ಗೆ ಸಮ್ಮಿಸಿಲ್ಲ ಎನ್ನಲಾಗಿದೆ.

ಮುಖ್ಯಾಂಶಗಳು

  • ರಾಹುಲ್ ಗಾಂಧಿ ಸಿದ್ದರಾಮಯ್ಯ ಸಭೆ ಇನ್​ ಸೈಡ್ ಸುದ್ದಿ ಟಿವಿ9ನಲ್ಲಿ
  • ರಾಜ್ಯಸಭಾ ಆಫರ್ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿದ ರಾಹುಲ್
  • ರಾಜ್ಯಸಭೆ ಸ್ಥಾನ ಜೊತೆಗೆ ಪುತ್ರ ಯತೀಂದ್ರಗೆ ಡಿಸಿಎಂ ಪಟ್ಟ ನೀಡುವ ಬಗ್ಗೆಯೂ ಪ್ರಸ್ತಾಪ
  • ಹೈಕಮಾಂಡ್​ ಪ್ರಸ್ತಾಪಕ್ಕೆ ಒಪ್ಪಿಗೆ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ

ಒನ್ ಟು ಒನ್ ಮಾತುಕತೆ ವೇಳೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಂದೆ ಅಧಿಕಾರ ಹಂಚಿಕೆ ಪ್ರಸ್ತಾಪ ಇಟ್ಟಿದ್ದು, ಇದರ ಜೊತೆ ಸಿದ್ದರಾಮಯ್ಯಗೆ ರಾಜ್ಯಸಭೆಯ ಆಫರ್ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಮಾತ್ರವಲ್ಲದೇ ಪುತ್ರ ಯತೀಂದ್ರ ಅವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿಯೂ ಸಹ ರಾಹುಲ್ ಗಾಂಧಿ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಸಿಎಂ ಸಿದ್ದರಾಮಯ್ಯ ಮಾತ್ರ ರಾಹುಲ್ ಗಾಂಧಿ ಆಫರ್​​ಗಳಿಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸದೆ ಸೈಲೆಂಟ್ ಆಗಿ ಬೇಸರದಲ್ಲೇ ಆಚೆ ಬಂದು ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ನಿಂತುಕೊಂಡರು.

ಇದನ್ನೂ ನೋಡಿ: ನಾಯಕತ್ವ ಬದಲಾವಣೆ ಗೊಂದಲ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

ಹೈಕಮಾಂಡ್ ಮುಂದೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಆಫರ್ ಮುಂದಿಟ್ಟಾಗ ಸಿಎಂ ಸಿದ್ದರಾಮಯ್ಯ ಸಹ ರಾಹುಲ್ ಮುಂದೆ ನೇರ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ ಎನ್ನಲಾಗಿದೆ. ನಾನು ರಾಜ್ಯಸಭೆಗೆ ಹೋದರೆ, ಮುಂದಿನ ಕರ್ನಾಟಕದ ಸಿಎಂ ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದಕ್ಕೆ ರಾಹುಲ್ ಪ್ರತಿಕ್ರಿಯಿಸಿ, ಹೈಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತೆ. ನಿಮ್ಮನ್ನು ಸಹ ವಿಶ್ವಾಸಕ್ಕೆ ಪಡೆದು ನಿರ್ಧಾರಕೈಗೊಳ್ಳುತ್ತೆ ಎಂದಿದ್ದಾರಂತೆ.

ಸಭೆಯಲ್ಲಿ ಕೇವಲ ರಾಜ್ಯಸಭೆ ಬಗ್ಗೆ ಚರ್ಚೆಯಾಗಿದೆ ಎಂದು ಕೆಸಿ ವೇಣುಗೋಪಾಲ್ ರಾಜಕೀಯ ಹೇಳಿಕೆಯಾಗಿ ನೀಡಿದ್ದಾರೆ. ಆದ್ರೆ, ಅಸಲಿಗೆ ರಾಹುಲ್ ಗಾಂಧಿ ಸಿದ್ದರಾಮಯ್ಯನವರ ಜೊತೆ ನಾಯತ್ವ ಬದಲಾವಣೆಯನ್ನೂ ಸಹ ಪ್ರಸ್ತಾಪಿಸಿದ್ದಾರೆ. ಹೀಗಾಗಿ ಎಲ್ಲವನ್ನೂ ಸೂಕ್ಷ್ಮವಾಗಿ ಆಲಿಸಿದ ಸಿದ್ದರಾಮಯ್ಯ, ಸಭೆ ಮುಗಿಯುತ್ತಿದ್ದಂತೆಯೇ ಯಾವುದೇ ಪ್ರತಿಕ್ರಿಯೆ ನೀಡಿದೇ ಬೇಸರ ಮುಖದಲ್ಲೇ ನೇರವಾಗಿ ತಮ್ಮ ಬೆಂಬಲಿಗರು ತಂಗಿರುವ ಜಾರ್ಜ್ ನಿವಾಸಕ್ಕೆ ತೆರಳಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್​​​ನಲ್ಲಿ ರಾಜಕೀಯ ಬೆಳವಣಿಗೆಗಳು ಸಂಚಲನ ಮೂಡಿಸಿದ್ದು, ಮುಂದೆ ಈ ಬೆಳವಣಿಗೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Tue, 26 May 26

Follow Us
Pramod Shastri G
Pramod Shastri G
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್