ಕರ್ನಾಟಕ ಕಾಂಗ್ರೆಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಮಹತ್ವದ ಸಭೆ

Updated By: Ganapathi Sharma

Updated on: Nov 29, 2025 | 2:09 PM

ಕರ್ನಾಕ ಕಾಂಗ್ರೆಸ್ ಆಂತರಿಕ ಬೆಳವಣಿಗೆಗಳ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ. ಮತ್ತೆ ನಾಳೆಯೂ ಸಭೆ ನಡೆಯುವ ನಿರೀಕ್ಷೆ ಇದೆ. ಇಂದಿನ ಸಭೆಯಲ್ಲಿ ಕೆಸಿ ವೇಣುಗೋಪಾಲ್, ಸುರ್ಜೆವಾಲ ಗೈರಾಗಿದ್ದು, ನಾಳಿನ ಸಭೆಗೆ ಹಾಜರಾಗುವ ನಿರೀಕ್ಷೆ ಇದೆ.

ನವದೆಹಲಿ, ನವೆಂಬರ್ 29: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ನಿವಾಸದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕರ್ನಾಟಕ ಕಾಂಗ್ರೆಸ್ ಬೆಳವಣಿಗೆಗಳ ಬಗ್ಗೆ ಚರ್ಚಿಸುವುದಕ್ಕೆಂದೇ ಈ ಸಭೆ ನಡೆಸಲಾಗುತ್ತಿದೆ ಮೂಲಗಳು ತಿಳಿಸಿವೆ. ಸಭೆ ಇನ್ನೂ ಮುಂದುವರಿದಿದ್ದು, ದಿನವಿಡೀ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಬಹುದೆಂದು ಹೇಳಲಾಗಿದೆ. ಇಂದಿನ ಸಭೆಗೆ ಕೆಸಿ ವೇಣುಗೋಪಾಲ್ ಮತ್ತು ಸುರ್ಜೆವಾಲ ಹಾಜರಾಗಿಲ್ಲ. ನಾಳೆಯ ಸಭೆಯಲ್ಲಿ ಕೆಸಿ ವೇಣುಗೋಪಾಲ್, ಸುರ್ಜೆವಾಲ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಜರಿರುವ ಸಾಧ್ಯತೆ ಇದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ