AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವಿಷ್ಯದ ಸಿಎಂ ಚರ್ಚೆ ಬಿಡಿ, ಬಿಜೆಪಿ ವಿರುದ್ಧ ಹೋರಾಡಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ

ಪ್ರಸ್ತುತ ರಾಜಕೀಯ ಸ್ಥಿತಿಗತಿಯಲ್ಲಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಭರವಸೆ ಮೂಡಿಸಬೇಕಾಗಿದೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬೇಕಾಗಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಈ ಹಾದಿಯಲ್ಲಿ ಮುಂದುವರೆಯಿರಿ ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ.

ಭವಿಷ್ಯದ ಸಿಎಂ ಚರ್ಚೆ ಬಿಡಿ, ಬಿಜೆಪಿ ವಿರುದ್ಧ ಹೋರಾಡಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ
ಡಿ ಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ
Follow us
TV9 Web
| Updated By: guruganesh bhat

Updated on: Jun 22, 2021 | 10:25 PM

ದೆಹಲಿ: ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್‌ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ. ದೆಹಲಿಯನ್ನು ತಮ್ಮನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕೆಲವು ಸೂಚನೆಗಳನ್ನು ನೀಡಿರುವ ರಾಹುಲ್ ಗಾಂಧಿ, ‘ಭವಿಷ್ಯದ ಸಿಎಂ’ ಚರ್ಚೆ ಬಿಟ್ಟು ಬಿಜೆಪಿ ವಿರುದ್ಧ ಹೋರಾಡಿ, ಬಿಜೆಪಿ ಸರ್ಕಾರದ ಬಿಕ್ಕಟ್ಟನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಪ್ರಸ್ತುತ ರಾಜಕೀಯ ಸ್ಥಿತಿಗತಿಯಲ್ಲಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಭರವಸೆ ಮೂಡಿಸಬೇಕಾಗಿದೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬೇಕಾಗಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಈ ಹಾದಿಯಲ್ಲಿ ಮುಂದುವರೆಯಿರಿ ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ವರಿಷ್ಠರೂ ಆಗಿರುವ ಸಂಸದ ರಾಹುಲ್ ಗಾಂಧಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವು ನೀಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನಾಯಕರು ಜನರ ನೆರವಿಗೆ ಧಾವಿಸಿದ್ದಾರೆ. ಇಂಧನ ಬೆಲೆ ಏರಿಕೆ ಬಗ್ಗೆ ವಾರಗಳ ಕಾಲ ಪ್ರತಿಭಟನೆ ನಡೆಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್‌ ಮಾಡಿರುವ ಕೆಲಸಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ಬಳಿ ಚರ್ಚಿಸಿದ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾಂಗ್ರೆಸ್ ವರಿಷ್ಠ, ಸಂಸದ ರಾಹುಲ್ ಗಾಂಧಿ ಜತೆ ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚಿಸಿದ್ದೇನೆ. ಆದರೆ ಚರ್ಚಿಸಿದ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕೊವಿಡ್ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ನಿರ್ವಹಿಸುತ್ತಿರುವ ಕೆಲಸಗಳ ಬಗ್ಗೆ ವರದಿ ನೀಡಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಪಕ್ಷ ಸಂಘಟನೆ ಬಗ್ಗೆಯೂ ರಾಹುಲ್ ಜತೆ ಚರ್ಚೆ ನಡೆಸಿದ್ದೇನೆ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.  ಈ ನಡುವೆಯೆ ತಮ್ಮ ದೆಹಲಿ ಭೇಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನೂ ಭೇಟಿಯಾಗಿದ್ದಾರೆ.

 ನಿನ್ನೆಯಷ್ಟೇ ಮಾಧ್ಯಮಗೋಷ್ಠಿ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೀಗಂದಿದ್ದರು: 

* ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ.

* ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಅದರ ಮಾರ್ಗಸೂಚಿ ಬಗ್ಗೆ ಪಕ್ಷದ ನಾಯಕರ ಜತೆ ಮಾತನಾಡಲು ಬಂದಿದ್ದೇನೆ. ಸದ್ಯಕ್ಕೆ ಕೆಲವು ಕಾರ್ಯಾಧ್ಯಕ್ಷರು ಮಾತ್ರ ಇದ್ದು, ಉಳಿದಂತೆ ಅಧಿಕೃತ ಸಮಿತಿ ಇಲ್ಲ. ಕೆಲವು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಸಮಿತಿ ಗಾತ್ರ ಹೆಚ್ಚಿಸಬೇಕೆ, ಇಳಿಸಬೇಕೆ ಎಂದು ಎರಡು ಮೂರು ವರ್ಷಗಳಿಂದ ಚರ್ಚೆ ನಡೆದಿದೆ. ಈ ಬಗ್ಗೆ ನಮ್ಮ ಪ್ರಧಾನ ಕಾರ್ಯದರ್ಶಿಗಳ ಜತೆ ಮಾತನಾಡಲು ಬಂದಿದ್ದೇನೆ. ನಾಳೆ ಬೆಳಗ್ಗೆ ಸುರ್ಜೆವಾಲ ಅವರನ್ನು ಭೇಟಿ ಮಾಡಲಿದ್ದೇನೆ.

* ಪಕ್ಷದಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ನಾನು ಒಂದು ವರ್ಷದಿಂದ ನೋಡಿದ್ದೇನೆ. ಕೆಲವು ಬದಲಾವಣೆ ಆಗಬೇಕಿದೆ. ಎಲ್ಲೆಲ್ಲಿ ಐದಾರು ವರ್ಷಗಳಿಂದ ಅಧ್ಯಕ್ಷರಿದ್ದಾರೋ ಅಲ್ಲಿ ಬದಲಾವಣೆ ಮಾಡಬೇಕು ಎಂದು ಹಿರಿಯ ನಾಯಕರ ಸಭೆಯಲ್ಲಿ ತೀರ್ಮಾನವಾಗಿದೆ. ಬ್ಲಾಕ್ ಅಥವಾ ಜಿಲ್ಲಾಧ್ಯಕ್ಷರು ಸತತ ಎರಡು ಬಾರಿ ಅಧ್ಯಕ್ಷರಾಗಿದ್ದರೆ ಬದಲಾವಣೆ ಮಾಡಬೇಕು ಎಂದು ತೀರ್ಮಾನಿಸಲಾಗಿದೆ. ಕೊರೋನಾ ಸಮಯದಲ್ಲಿ ಬದಲಾವಣೆ ಬೇಡ ಅಂತಾ ಸುಮ್ಮನಿದ್ದೆವು. ಕೊರೋನಾ ಸಮಯದಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ.

* ಮಧ್ಯಂತರ ಚುನಾವಣೆ ವಿಚಾರ ಬಿಜೆಪಿಗೆ ಬಿಟ್ಟ ವಿಚಾರ. ಒಂದು ವಿಚಾರ ಏನೆಂದರೆ ಬಿಜೆಪಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ ಅನ್ನೋದು ರುಜುವಾತಾಗಿದೆ. ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದನ್ನು ಬೆಳಕಿಗೆ ತಂದಿದ್ದೆವು. ಈಗ ಬಿಜೆಪಿ ಶಾಸಕರುಗಳೇ ನಮಗಿಂತ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಆ ಮೂಲಕ ನಮ್ಮ ಮಾತಿಗೆ ಪುಷ್ಠಿ ನೀಡುತ್ತಿದ್ದಾರೆ. ಸದ್ಯಕ್ಕೆ ನಾವು ಜಿಲ್ಲಾ ಪಂಚಾಯಿತಿ, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಗಮನ ಹರಿಸುತ್ತಿದ್ದೇವೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

ಮುಂದಿನ ಸಿಎಂ ಸಿದ್ಧರಾಮಯ್ಯ ಎಂದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವುದೇ ಎಚ್ಚರಿಕೆ ನೀಡಿಲ್ಲ: ಶಾಸಕ ಜಮೀರ್ ಅಹ್ಮದ್

(Rahul Gandhi instructs KPCC president DK Shivakumar to leave future CM debate fight against BJP)

ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು