ವಯನಾಡ್ ಭೇಟಿಗೂ ಮುನ್ನ ಇಂದು ರಾತ್ರಿ ಬೆಂಗಳೂರಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ

| Updated By: ಗಣಪತಿ ಶರ್ಮ

Updated on: Jun 11, 2024 | 11:08 AM

Priyanka and Rahul Gandhi in Bengaluru: ಬೆಂಗಳೂರಿನಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಅವರು ಕಾಂಗ್ರೆಸ್​ನ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ವಯನಾಡ್ ಭೇಟಿಗೂ ಮುನ್ನ ಇಂದು ರಾತ್ರಿ ಬೆಂಗಳೂರಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ
ಇಂದು ರಾತ್ರಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
Follow us on

ಬೆಂಗಳೂರು, ಜೂನ್ 11: ಕಾಂಗ್ರೆಸ್ (Congress) ಸಂಸದ ರಾಹುಲ್ ಗಾಂಧಿ (Rahul Gandhi) ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾತ್ರಿ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ರಾಹುಲ್​​, ಪ್ರಿಯಾಂಕಾರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್​ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಉಭಯ ನಾಯಕರು ನಾಳೆ ಬೆಳಗ್ಗೆ ಕೇರಳದ ವಯನಾಡ್​​ಗೆ ತೆರಳಲಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ. ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಹುಲ್ ಹಾಗೂ ಪ್ರಿಯಾಂಕಾ ಕೇರಳದ ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ಬುಧವಾರ ಮತದಾರರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ವಯನಾಡ್ ತೊರೆದು ರಾಯ್​ಬರೇಲಿ ಉಳಿಸಿಕೊಂಡರೆ ಅವರ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ರಾಯಬರೇಲಿಯನ್ನು ಉಳಿಸಿಕೊಂಡು ಹಾಲಿ ಕ್ಷೇತ್ರವಾದ ವಯನಾಡನ್ನು ಹೊರಗಿಡುವ ಬಗ್ಗೆ ರಾಹುಲ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ವಾತಾವರಣವನ್ನು ಗಮನಿಸಿ, ಅಲ್ಲಿ ರಾಹುಲ್ ಉಪಸ್ಥಿತಿಯು ಅವಕಾಶವನ್ನು ಬಳಸಿಕೊಳ್ಳಲು ಪಕ್ಷ ಬಯಸುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಇದನ್ನೂ ಓದಿ: ವಯನಾಡು ತೊರೆದು ರಾಯ್​ಬರೇಲಿ ಸಂಸದರಾಗಿ ಉಳಿಯಲಿದ್ದಾರಾ ರಾಹುಲ್ ಗಾಂಧಿ?

ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಹೈ-ವೋಲ್ಟೇಜ್ ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 3.6 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. 2019 ರಲ್ಲಿ, ರಾಹುಲ್ ಈ ಕ್ಷೇತ್ರದಲ್ಲಿ 4.3 ಲಕ್ಷ ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ