AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ 79 ಟನ್​ ಯೂರಿಯಾ ಕಾಳಸಂತೆಯಲ್ಲಿ ಮಾರಾಟ

ರಾಯಚೂರು ಜಿಲ್ಲೆಯಲ್ಲಿ 79 ಟನ್ ಯೂರಿಯಾ ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗಿರುವ ಬಗ್ಗೆ ರೈತರು ದೂರು ನೀಡಿದ್ದಾರೆ. ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬರಬೇಕಿದ್ದ ಗೊಬ್ಬರ ಕಾಣೆಯಾಗಿದೆ. ಕೃಷಿ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ವಿರುದ್ಧ ರೈತರು ಆರೋಪ ಮಾಡಿದ್ದಾರೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದೋಷಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ರೈತರಿಗೆ ಸಕಾಲದಲ್ಲಿ ಯೂರಿಯಾ ಗೊಬ್ಬರ ಒದಗಿಸುವುದು ಅತ್ಯಗತ್ಯ.

ರಾಯಚೂರಿನಲ್ಲಿ 79 ಟನ್​ ಯೂರಿಯಾ ಕಾಳಸಂತೆಯಲ್ಲಿ ಮಾರಾಟ
ಯೂರಿಯಾಗಾಗಿ ರೈತರ ಪ್ರತಿಭಟನೆ
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on:Jul 29, 2025 | 3:27 PM

Share

ರಾಯಚೂರು, ಜುಲೈ 29: ರಾಜ್ಯಾದ್ಯಂತ ರೈತರು (Farmers) ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲೇ ಕೃಷಿಗೆ ಅತೀ ಅವಶ್ಯಕವಾಗಿರುವ ಯೂರಿಯಾ (Urea) ಗೊಬ್ಬರದ ಕೊರತೆ ಇದೆ. ಈ ನಡುವೆ ರಾಯಚೂರು (Raichur) ಜಿಲ್ಲೆಯಲ್ಲಿ 79 ಟನ್ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡಲಾಗಿದೆ. ಈ ಸಂಬಂಧ ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ರಾಯಚೂರಿನ ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಡೌನ್​ಗೆ ಹೋಗಬೇಕಿದ್ದ ಯೂರಿಯಾ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ.

ರಾಯಚೂರು ಜಿಲ್ಲಾ ಕೇಂದ್ರದ ಆರ್​ಎಪಿಎಂಸಿಯಿಂದ ಜೂನ್ 19 ರಂದು 18 ಟನ್, ಜೂನ್ 26 ರಂದು 36 ಟನ್ ಹಾಗೂ ಜುಲೈ 4 ರಂದು 25 ಟನ್ ಯೂರಿಯಾ ಸೇರಿದಂತೆ ಒಟ್ಟು 79 ಟನ್ ಯೂರಿಯಾವನ್ನು ಕಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸರಬರಾಜು ಮಾಡಲಾಗಿದೆ ಎಂದು ದಾಖಲೆಗಳಲ್ಲಿದೆ. ಆದರೆ, ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮಿಗೆ ಒಂದೇ ಒಂದು ಚೀಲ ಯೂರಿಯಾ ತಲುಪಿಲ್ಲ. ಮಾರ್ಗ ಮಧ್ಯದಲ್ಲೇ 79 ಟನ್ ಯೂರಿಯಾ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಇದಕ್ಕೆಲ್ಲ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಕಾರಣ ಅಂತ ರೈತರು ಆರೋಪಿಸಿದ್ದಾರೆ‌.

ಸಂಘದ ಸದಸ್ಯರುಗಳು, ನಿರ್ದೆಶಕರುಗಳಿಗೆ ಮಾಹಿತಿ ನೀಡದೆ ರೈತರಿಗೆ ಸಿಗಬೇಕಿದ್ದ ಯೂರಿಯಾವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಾರೆ. ಕೂಡಲೇ ಯೂರಿಯಾ ಕೊಡಿ, ಇಲ್ಲ ಸಂಘವನ್ನು ಸುಪರ್ ಸೀಡ್ ಮಾಡಿ ಎಂದು ರೈತರು ಜಿಲ್ಲಾಧಿಕಾರಿಗಳ ಎದುರು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ
Image
ಯೂರಿಯಾ ಜತೆ ನ್ಯಾನೋ ಡಿಎಪಿ ಖರೀದಿ ಕಡ್ಡಾಯ: ರೈತರಿಗೆ ಮತ್ತೊಂದು ಆಘಾತ
Image
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
Image
ಕರ್ನಾಟಕದಾದ್ಯಂತ ರಸಗೊಬ್ಬರದ ಬರ: ರೈತರು ಕಂಗಾಲು, ಎಲ್ಲೆಲ್ಲೂ ‘ನೋ ಸ್ಟಾಕ್’!
Image
ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ: ಜೆಪಿ ನಡ್ಡಾಗೆ ಸಿದ್ದರಾಮಯ್ಯ ಪತ್ರ

ಕಾಳಸಂತೆಯಲ್ಲಿ ಯೂರಿಯಾ ಮಾರಾಟದ ಬಗ್ಗೆ ಮಾನ್ವಿ ತಾಲೂಕು ಕೃಷಿ ಇಲಾಖೆ ಅಧಿಕಾರಿಗಳಿಗೆ ರೂತರು ದೂರು ನೀಡಿದ್ದಾರೆ. ದೂರು ಪಡೆದು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಮಾರಾಟ ಮಾಡಿರುವುದು ಬಯಲಾಗಿದೆ. ಅಧಿಕಾರಿಗಳ ಪರಿಶೀಲನೆ ವೇಳೆ ಯೂರಿಯಾ ಮಾರಾಟದ ರಸೀದಿಗಳು, ದಾಖಲೆಗಳು ಪತ್ತೆಯಾಗಿಲ್ಲ. ಹೀಗಾಗಿ ಕೃಷಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಉತ್ತರ ನೀಡದೆ ಇದ್ದರೇ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲಾಗತ್ತೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಚೌಹ್ವಾಣ್​ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಯೂರಿಯಾ ಸಿಗುತ್ತಿಲ್ಲವೆಂದು ಮಣ್ಣು ತಿಂದ ರೈತನ ಮನೆಗೆ ಎರಡು ಚೀಲ ರಸಗೊಬ್ಬರ ತಂದುಕೊಟ್ಟ ಬಿಜೆಪಿ ರೈತ ಮೋರ್ಚಾ

ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕಿದೆ. ಕೂಡಲೇ ಕೃಷಿ ಇಲಾಖೆ ರೈತರಿಗೆ ಸಿಗಬೇಕಿದ್ದ ಯೂರಿಯಾ ಗೊಬ್ಬರ ತಲುಪಿಸಬೇಕುದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:24 pm, Tue, 29 July 25