ಕೊರೊನಾ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ; ಕೊವಿಡ್ ನಿಯಂತ್ರಣಕ್ಕೆ ಮನೆ ಮನೆಯ ಸಮೀಕ್ಷೆ

ಪರೀಕ್ಷೆ ವೇಳೆಯಲ್ಲಿ ಸೊಂಕು ದೃಢವಾದರೆ ಕೊರೊನಾ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಮೂಲಕ ಕ್ರೂರಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಮುಂದಿಟ್ಟಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದ್ದಾರೆ.

ಕೊರೊನಾ ತಡೆಗೆ ಹಳ್ಳಿಗಳತ್ತ ಮುಖ ಮಾಡಿದ ಜಿಲ್ಲಾಡಳಿತ; ಕೊವಿಡ್ ನಿಯಂತ್ರಣಕ್ಕೆ ಮನೆ ಮನೆಯ ಸಮೀಕ್ಷೆ
ಹಳ್ಳಿಗಳಿಗೆ ಭೇಟಿ ನೀಡಿದ ರಾಯಚೂರು ಡಿಸಿ
Follow us
preethi shettigar
|

Updated on: May 26, 2021 | 8:53 AM

ರಾಯಚೂರು: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸಾವು-ನೋವುಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಪರಿಸ್ಥಿತಿಯನನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದೆ. ಅದರಂತೆ ಪ್ರತಿಯೊಂದು ಜಿಲ್ಲೆಯಲ್ಲೂ ಕೂಡ ಕಟ್ಟುನಿಟ್ಟಿನ ಕ್ರಮಗಳನ್ನು ಚಾಲ್ತಿಗೆ ತರಲಾಗಿದೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ರಾಯಚೂರು ಜಿಲ್ಲಾಡಳಿತ ಕೂಡ ಇದೇ ಪ್ರಯತ್ನದಲ್ಲಿದ್ದು, ಹಳ್ಳಿಗಾಡಿನತ್ತ ಹೆಜ್ಜೆ ಇಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಭೀತಿ ಹುಟ್ಟಿಸಿದ್ದ ಕೊರೊನಾ ಸೋಂಕಿಗೆ ತಡೆವೊಡ್ಡಲು ಮನೆ ಮನೆಗೆ ತೆರಳಿ ಕೊವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಸೊಂಕಿತರನ್ನು ಮುಲಾಜಿಲ್ಲದೇ ಪೊಲೀಸ್ ಬಲ ಬಳಸಿ ಕೊವಿಡ್ ಕೇರ್ ಸೆಂಟರ್​ ಶಿಫ್ಟ್​ ಮಾಡಲಾಗುತ್ತಿದೆ.

ಹಳ್ಳಿಗಳತ್ತ ದಾಂಗುಡಿ ಇಟ್ಟ ಅಧಿಕಾರಿಗಳು ರಾಯಚೂರು ಜಿಲ್ಲೆಯಲ್ಲಿ ಸದ್ಯ ಹಳ್ಳಿಗಳಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹಬ್ಬುತ್ತಿದೆ. ಇನ್ನು ಎಷ್ಟೇ ಲಾಕ್​ಡೌನ್ ಮಾಡಿದರು ನಗರದಲ್ಲಿ ಮಾತ್ರ ಜನಸಂದಣಿಗೆ ತಡೆ ಹಾಕಬಹುದು. ಆದರೆ ಹಳ್ಳಿಗಳಲ್ಲಿ ಜನಜೀವನ ಎಂದಿನಂತೆ ಇರಲಿದೆ. ಈ ನಡುವೆ ಹಳ್ಳಿಗಳಿಂದ ಜನ ಗಂಟಲು ದ್ರವ ಪರೀಕ್ಷೆಗೆ ಮುಂದಾಗದೇ ಇರುವುದು ಜಿಲ್ಲಾಡಳಿಕ್ಕೆ ದೊಡ್ಡ ತಲೆ ನೋವಾಗಿತ್ತು. ಹೀಗಾಗಿ ಆರೋಗ್ಯ, ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳ ತಂಡಗಳು ಪ್ರತಿ ಹಳ್ಳಿಗಳಿಗೂ ತೆರಳಿ ಮನೆ ಮನೆಗೆ ಭೇಟಿ ನೀಡಿ ಕೊವಿಡ್ ಟೆಸ್ಟ್ ಮಾಡುತ್ತಿದ್ದಾರೆ.

ಪರೀಕ್ಷೆ ವೇಳೆಯಲ್ಲಿ ಸೊಂಕು ದೃಢವಾದರೆ ಕೊರೊನಾ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಮೂಲಕ ಕ್ರೂರಿ ಕೊರೊನಾ ಸೋಂಕು ಹರಡದಂತೆ ಜಿಲ್ಲಾಡಳಿತ ದಿಟ್ಟ ಹೆಜ್ಜೆ ಮುಂದಿಟ್ಟಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಆತಂಕ ಇನ್ನು ಇದೆಲ್ಲದರ ಮಧ್ಯೆ ರಾಯಚೂರು ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮತ್ತಷ್ಟು ಆತಂಕ ಸೃಷ್ಟಿಸಿದೆ. ಈಗಾಗಲೇ ಜಿಲ್ಲೆಯಲ್ಲಿ 7 ಜನಕ್ಕೆ ಬ್ಲ್ಯಾಕ್ ಫಂಗಸ್ ದೃಢವಾಗಿದ್ದು, ಓರ್ವರು ಬಲಿಯಾಗಿದ್ದಾರೆ. ಹೀಗಾಗಿ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ರಾಯಚೂರಿನ ರಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ತಿಳಿಸಿದ್ದಾರೆ.

ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ 28 ಬೆಡ್​ಗಳ ವಾರ್ಡ್ ಸಿದ್ಧಪಡಿಸಲಾಗಿದೆ. ಚಿಕಿತ್ಸೆಗೆ ಬೇಕಾದ ಎಲ್ಲಾ ವೈದ್ಯಕೀಯ ಉಪಕರಣಗಳ ಖರೀದಿ ಕೂಡ ಮಾಡಲಾಗಿದೆ. ಇನ್ನು ಬ್ಲ್ಯಾಕ್ ಫಂಗಸ್​ ರೋಗ ನಿವಾರಣೆಗೆ ಬಳಸುವ ಇಂಜಕ್ಷನ್ ಪೂರೈಕೆಗೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಈಗಾಗಲೇ ಸರ್ಕಾರ 50 ವೈಲ್ಸ್​ಗಳ ಮಂಜೂರು ಕೂಡ ಮಾಡಿದೆ. ಒಬ್ಬ ರೋಗಿಗೆ ಕನಿಷ್ಟ 50 ವೈಲ್ಸ್​ಗಳು ಬೇಕಾಗಲಿದೆ. ಸಧ್ಯಕ್ಕೆ 350 ವೈಲ್ಸ್​ಗಳ ಬೇಡಿಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದ್ದಾರೆ.

ಒಟ್ಟಿನಲ್ಲಿ ರಾಯಚೂರು ಜಿಲ್ಲೆಯಾದ್ಯಂತ ನಿತ್ಯವೂ ಆತಂಕ ಹುಟ್ಟಿಸುತ್ತಿರುವ ಮಹಾಮಾರಿ ಕೊರೊನಾ ಕಟ್ಟಿ ಹಾಕಲು ಜಿಲ್ಲಾಡಳಿತ ಭಾರಿ ಪ್ರಯತ್ನ ನಡೆಸುತ್ತಿದೆ. ಅದರಲ್ಲೂ ವಿಶೇಷವಾಗಿ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಕೊವಿಡ್ ಟೆಸ್ಟ್ ಮಾಡುತ್ತಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಿಗೆ ಹರಡದಂತೆ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದ್ದು, ಹಳ್ಳಿಗಾಡಿನ ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ:

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ: ಹೊಸಹಳ್ಳಿ ಕೆರೆ ವೀಕ್ಷಣೆ ಮಾಡಿದ ಸಚಿವ ಆರ್.ಅಶೋಕ್

ಕಾಂಗ್ರೆಸ್​ನಿಂದ ಬೀದಿಗಿಳಿಯಲಿದೆ ವೈದ್ಯರ ಟೀಮ್, ಮನೆ ಮನೆಗೂ ತೆರಳಿ ನಡೆಸ್ತಾರೆ ಕೊವಿಡ್ ಟೆಸ್ಟ್!

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್