ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ರಾಯಚೂರು ರೈತರು: ನೀರು ಬಿಡುಗಡೆಗೆ ರೈತರ ಆಗ್ರಹ

ಮಾನವಿ ತಾಲೂಕಿನಾದ್ಯಂತ ತುಂಗಭದ್ರಾ ಎಡದಂಡೆ ಕಾಲುವೆ ನೀರನ್ನೆ ನಂಬಿ ಸಾವಿರಾರು ಜನ ರೈತರು ಅಪಾರ ಪ್ರಮಾಣದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಜಿಲ್ಲಾಡಳಿತ ಜೋಳ, ಹತ್ತಿ, ಮೆಣಸಿನಕಾಯಿ ಸೇರಿದಂತೆ ಹಲವು ಮಿತ ಬೆಳೆ ಬೆಳೆಯುವಂತೆ ಎಷ್ಟೇ ಬೇಡಿಕೊಂಡರೂ ಕಿವಿಗೊಡದ ರೈತರು ಭತ್ತ ಬೆಳೆದಿದ್ದಾರೆ.

ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿ ರಾಯಚೂರು ರೈತರು: ನೀರು ಬಿಡುಗಡೆಗೆ ರೈತರ ಆಗ್ರಹ
ಒಣಗಿ ಹೋಗಿರುವ ಮೆಣಸು
Follow us
|

Updated on: Mar 09, 2021 | 10:58 AM

ರಾಯಚೂರು: ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಅನ್ನದಾತರು ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಕೈಗೆ ಬಂದಿರುವ ಅಪಾರ ಪ್ರಮಾಣದ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆ ಕೊನೆ ಭಾಗದ ರೈತರು ಸದ್ಯ ಹನಿ ಹನಿ ನೀರಿಗೂ ಪರದಾಡುತ್ತಿದ್ದಾರೆ. ಇಷ್ಟೆಲ್ಲಾ ಗೊತ್ತಿದ್ದರೂ ರೈತರ ಕೂಗಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಪಂದಿಸದೇ ಇರುವುದರಿಂದ ಲಕ್ಷಾಂತರ ಅನ್ನದಾತರ ಬದುಕು ಬೀದಿಗೆ ಬೀಳುವ ಆತಂಕ ಎದುರಾಗಿದೆ. ಅದರಲ್ಲೂ ಸದ್ಯ ಕಾಲುವೆಗೆ ನೀರು ಹರಿಸದೇ ಇದ್ದಲ್ಲಿ 1,000 ಕೋಟಿಗೂ ಅಧಿಕ ಮೌಲ್ಯದ ಭತ್ತದ ಬೆಳೆ ನಷ್ಟವಾಗುವ ಭೀತಿ ಎದುರಾಗಿದೆ.

1,000 ಕೋಟಿಗೂ ಅಧಿಕ ಮೌಲ್ಯದ ಭತ್ತ ಬೆಳೆ ನಷ್ಟದ ಭೀತಿ ತುಂಗಭದ್ರಾ ಎಡದಂಡೆ ಕಾಲುವೆಯ ನೀರನ್ನೆ ನಂಬಿ ಜಿಲ್ಲೆಯ ಸಿಂಧನೂರು, ಮಾನವಿ, ಸಿರವಾರ, ಮಸ್ಕಿ ಮತ್ತು ರಾಯಚೂರು ತಾಲೂಕಿನಾದ್ಯಂತ ಲಕ್ಷಾಂತರ ರೈತರು ಅಪಾರ ಪ್ರಮಾಣ ಬೆಳೆ ಬೆಳೆದಿದ್ದಾರೆ. ಅದರಲ್ಲೂ ವಿಶೇಷವಾಗಿ ಬೆಳೆದು ನಿಂತಿರುವ ಜೋಳ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳಿಗೆ ನೀರಿನ ಅಗತ್ಯವಿದೆ. ಆದರೆ ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ರೈತರು ಕೈಗೆ ಬಂದಿರುವ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಸದ್ಯ ತುಂಗಭದ್ರಾ ಜಲಾಶಯದಲ್ಲಿ 7 ಟಿಎಂಸಿ ನೀರಿನ ಕೊರತೆ ಎದುರಾಗಿದ್ದು, ರಾಯಚೂರು ಜಿಲ್ಲೆಯಾದ್ಯಂತ ಬೆಳೆದು ನಿಂತಿರುವ ಬೆಳೆಗೆ ಅಗತ್ಯ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ಕಾಲುವೆ ಕೊನೆ ಭಾಗದ ರೈತರು ಹನಿ ಹನಿ ನೀರಿಗೂ ಹರಸಾಹಸ ಪಡುತ್ತಿದ್ದಾರೆ. ಇನ್ನು ಸಿರವಾರ, ಮಸ್ಕಿ ಮತ್ತು ಮಾನವಿ ತಾಲೂಕಿನ ವ್ಯಾಪ್ತಿಯಲ್ಲಿ ರೈತರು ಅಪಾರ ಪ್ರಮಾಣದ ಭತ್ತ ಬೆಳೆದಿದ್ದಾರೆ. ಹೀಗಾಗಿ ಕಾಲುವೆಗೆ ನೀರು ಬಿಡದೇ ಇದ್ದರೆ 1,000 ಕೋಟಿಗೂ ಅಧಿಕ ಮೌಲ್ಯದ ಭತ್ತ ಒಣಗಿ ನಷ್ಟವಾಗುವ ಭೀತಿ ಹೆಚ್ಚಾಗಿದೆ.

ತುಂಗಭದ್ರಾ ಎಡದಂಡೆ ಕಾಲುವೆ

ಒಣಗಿ ಹೋಗಿದ ಬೆಳೆ

ಹನಿ ಹನಿ ನೀರಿಗೂ ತುಂಗಭದ್ರಾ ಕಾಲುವೆ ರೈತರ ಪರದಾಟ ಮಾನವಿ ತಾಲೂಕಿನಾದ್ಯಂತ ತುಂಗಭದ್ರಾ ಎಡದಂಡೆ ಕಾಲುವೆ ನೀರನ್ನೆ ನಂಬಿ ಸಾವಿರಾರು ಜನ ರೈತರು ಅಪಾರ ಪ್ರಮಾಣದಲ್ಲಿ ಭತ್ತ ನಾಟಿ ಮಾಡಿದ್ದಾರೆ. ಜಿಲ್ಲಾಡಳಿತ ಜೋಳ, ಹತ್ತಿ, ಮೆಣಸಿನಕಾಯಿ ಸೇರಿದಂತೆ ಹಲವು ಮಿತ ಬೆಳೆ ಬೆಳೆಯುವಂತೆ ಎಷ್ಟೇ ಬೇಡಿಕೊಂಡರೂ ಕಿವಿಗೊಡದ ರೈತರು ಭತ್ತ ಬೆಳೆದಿದ್ದಾರೆ. ಹೀಗಾಗಿ ಮಿತ ಬೆಳೆಗೆ ನೀರಿನ ಕೊರತೆಯಾಗಿದ್ದು, ಅತಿಯಾದ ನೀರು ನುಂಗುವ ಭತ್ತಕ್ಕೆ ನೀರು ಪೂರೈಕೆ ಮಾಡುವುದು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಭಾರಿ ಕಗ್ಗಂಟಾಗಿ ಪರಿಣಮಿಸಿದೆ.

ಈಗಾಗಲೇ ರಾಯಚೂರು ಮತ್ತು ಮಾನವಿ ತಾಲೂಕಿನ ವ್ಯಾಪ್ತಿಯ ಕಾಲುವೆ ಕೊನೆ ಭಾಗದಲ್ಲಿ ರೈತರು ಬೆಳೆದಿರುವ ಜೋಳ, ಹತ್ತಿ ಮತ್ತಿತರ ಬೆಳೆಗಳು ನೀರಿಲ್ಲದೆ ಒಣಗಿ ಹೋಗುತ್ತಿದ್ದು, ಲಕ್ಷಾಂತರ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಹೀಗಾಗಿ ಜಿಲ್ಲಾಡಳಿತ ರೈತರ ಬೆಳೆ ರಕ್ಷಣೆ ಮಾಡುವ ನಿಟ್ಟಿನಲ್ಲಿ ತುಂಗಭದ್ರ ಎಡದಂಡೆ ಕಾಲುವೆಗೆ ಅಗತ್ಯ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಬಳಿ ಕೇಳಿದಾಗ 7 ಟಿಎಂಸಿ ನೀರಿನ ಕೊರತೆ ಇದೆ. ರೈತರು ನೀರು ಕೇಳುತ್ತಿದ್ದಾರೆ. ಈ ಬಗ್ಗೆ ತುಂಗಭದ್ರಾ ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಜಿಲ್ಲೆಯಾದ್ಯಂತ ರೈತರ ಕೈಗೆ ಬಂದಿರುವ ಬೆಳೆಗಳ ರಕ್ಷಣೆಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತರು ಈಗಾಗಲೇ ಹಲವಡೆ ಪ್ರತಿಭಟನೆಗಳನ್ನ ಆರಂಭಿಸಿದ್ದಾರೆ. ಇದರಿಂದ ನೀರಾವರಿ ಇಲಾಖೆಯ ಅಧಿಕಾರಿಗಳು ಭಾರಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಇದರಿಂದಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ತುಂಗಭದ್ರ ಜಲಾಶಯಕ್ಕೆ ಕೊರತೆಯಾಗಿರುವ ನೀರನ್ನ ಭದ್ರ ಜಲಾಶದಿಂದ ಬಿಡುಗಡೆ ಮಾಡುವತ್ತ ತನ್ನ ಚಿತ್ತ ಹರಿಸಬೇಕಿದೆ.

ಇದನ್ನೂ ಓದಿ

ಶುಂಠಿ ಧಾರಣೆ ಕುಸಿತ.. ಬೆಳೆಗಾರರು ಕಂಗಾಲು; ವಾಣಿಜ್ಯ ಬೆಳೆಯ ಹಿಂದೆ ಬಿದ್ದು ಕೈ ಸುಟ್ಟುಕೊಂಡ ಚಿಕ್ಕಬಳ್ಳಾಪುರ ರೈತರು

Karnataka Budget 2021: ಕೃಷಿ ಮತ್ತು ಪೂರಕ ಚಟುವಟಿಕೆಗೆ ₹ 31,028 ಕೋಟಿ ಅನುದಾನ, ರೈತ ಸಮುದಾಯಕ್ಕೆ ಶಕ್ತಿ ತುಂಬಲು ಹಲವು ಯೋಜನೆ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ