Fire Accident: ರಾಯಚೂರಿನ ಐಡಿಎಸ್​ಎಂಡಿ ಲೇಔಟ್​ ಬಳಿಯ ಬೆಟ್ಟದ ತಪ್ಪಲಿನಲ್ಲಿ ಧಗಧಗಿಸುತ್ತಿರುವ ಬೆಂಕಿ

ರಾಯಚೂರಿನ ಐಡಿಎಸ್​ಎಂಡಿ ಲೇಔಟ್​ ಬಳಿ ಕಳೆದ ಎರಡೂವರೆ ಗಂಟೆಗಳಿಂದ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಇದನ್ನು ನಂದಿಸಲು ಈವರೆಗೆ ಅರಣ್ಯ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿಲ್ಲ. ಬೆಂಕಿ ನಂದಿಸಲು ಮೂವರು ಸ್ಥಳೀಯ ಯುವಕರು ಹರಸಾಹಸ ಪಡುತ್ತಿದ್ದಾರೆ.

Fire Accident: ರಾಯಚೂರಿನ ಐಡಿಎಸ್​ಎಂಡಿ ಲೇಔಟ್​ ಬಳಿಯ ಬೆಟ್ಟದ ತಪ್ಪಲಿನಲ್ಲಿ ಧಗಧಗಿಸುತ್ತಿರುವ ಬೆಂಕಿ
ರಾಯಚೂರಿನ ಬೆಟ್ಟದಲ್ಲಿ ಹತ್ತಿಕೊಂಡ ಬೆಂಕಿ ನಂದಿಸುತ್ತಿರುವ ಯುವಕರು
Follow us
TV9 Web
| Updated By: Rakesh Nayak Manchi

Updated on:Feb 09, 2023 | 9:32 PM

ರಾಯಚೂರು: ಬೆಟ್ಟದಲ್ಲಿ ಆಕಸ್ಮಿಕವಾಗಿ ಬೆಂಕಿ (Fire Accident) ತಗುಲಿ ಹೊತ್ತಿ ಉರಿಯುತ್ತಿರುವ ಘಟನೆ ನಗರದ ಐಡಿಎಸ್​ಎಂಡಿ ಲೇಔಟ್​ ಬಳಿ ನಡೆಯುತ್ತಿದೆ. ಸಂಜೆ ವೇಳೆ ಬೆಟ್ಟದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಈವರೆಗೆ ಸ್ಥಳಕ್ಕೆ ಬಾರದೆ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಆಕಸ್ಮಿಕ ಬೆಂಕಿಯಿಂದ ಅಪಾರ ಪ್ರಮಾಣದ ವನ್ಯಸಂಪತ್ತು ಭಸ್ಮವಾಗುತ್ತಿರುವುದನ್ನು ನೋಡಿದ ಮೂವರು ಯುವಕರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅದಾಗ್ಯೂ, ಒಂದು ಬದಿಯಿಂದ ಮತ್ತೊಂದು ಬದಿಗೆ ಬೆಂಕಿ ವ್ಯಾಪಿಸುತ್ತಿರುವುದನ್ನು ನೋಡಿ ಸ್ಥಳೀಯರು ಆತಂಕಗೊಂಡಿದ್ದಾರೆ.

ಆಕಾಶದೆತ್ತರದ ಬೆಂಕಿ ಕೆನ್ನಾಲಿಗೆಗೆ ಗಿಡಗಳು ಸುಟ್ಟು ಹೋಗುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಾರದ ಹಿನ್ನಲೆ ಕಗ್ಗತ್ತಲಲ್ಲಿ ನಡೆದುಕೊಂಡು ಬೆಟ್ಟವೇರಿದ ಮೂವರು ಯುವಕರು ಕೈಯಲ್ಲಿ ಹಸಿ ಗಿಡಗಳನ್ನ ಹಿಡಿದುಕೊಂಡು ಬೆಂಕಿ ಆರಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಂತ್ರಿಮಾಲ್‌ ಹಿಂಭಾಗದ ಮನೆ ಬೆಂಕಿ ಅವಘಡ, ಓರ್ವ ಮಹಿಳೆ ಸಜೀವದಹನ

ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಭಸ್ಮವಾದ ನಾರಿನ ಘಟಕ

ತುಮಕೂರು: ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಯಿಂದ ನಾರಿನ ಘಟಕ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಬಿಗನೇನಹಳ್ಳಿ ಬಳಿ ನಡೆದಿದೆ. ಹಳ್ಳದಹೊಸಹಳ್ಳಿಯ ಬಸವರಾಜುಗೆ ಸೇರಿದ ನಾರಿನ ಘಟಕಕ್ಕೆ ಬೆಂಕಿ ತಗುಲಿದ್ದು, ಕ್ಷಣಮಾತ್ರದಲ್ಲಿ ಇಡೀ ನಾರಿನ ಘಟಕಕ್ಕೆ ವ್ಯಾಪಿಸಿದ ಪರಿಣಾಮ ಸ್ವತ್ತುಗಳು ಸಂಪೂರ್ಣವಾಗಿ ಭಸ್ಮವಾಗಿದೆ. ಬೆಂಕಿಯ ತೀವ್ರತೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರಗಳು, ಕಾಯಿಮಟ್ಟೆ ಬೆಂಕಿಗಾಹುತಿಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಅಕ್ಕಪಕ್ಕದ ಜಮೀನುಗಳಿಗೆ ವ್ಯಾಪಿಸದಂತೆ ಮುನ್ನೆಚ್ಚರಿಕೆವಹಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 pm, Thu, 9 February 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ