Karnataka Weather: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ, ಏಪ್ರಿಲ್ 18ರಿಂದ ಮತ್ತೆ ಮಳೆ ಶುರು

|

Updated on: Apr 15, 2024 | 7:21 AM

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ, ಏಪ್ರಿಲ್ 18ರಿಂದ ಮತ್ತೆ ಮಳೆ ಶುರು
ಮಳೆ
Image Credit source: Britannica
Follow us on

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್​ 18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ಆಗುಂಬೆ, ಧರ್ಮಸ್ಥಳ, ಎನ್​ಆರ್​ಪುರ, ಧಾರವಾಡ, ಬೇವೂರು, ಮುದಗಲ್, ಇಂಡಿ, ಶಿವಮೊಗ್ಗ, ಲಿಂಗನಮಕ್ಕಿ, ಆನವಟ್ಟಿ, ಔರಾದ್, ದೇವರಹಿಪ್ಪರಗಿ, ಯಡ್ರಾಮಿ, ಕಲಘಟಗಿ, ತ್ಯಾಗರ್ತಿ, ಕಳಸ, ಹರಪನಹಳ್ಳಿ, ಕುಡತಿನಿ, ಕೊಪ್ಪ, ತರೀಕೆರೆ, ಶೃಂಗೇರಿ, ಸಿದ್ದಾಪುರ, ಸಿಂಧನೂರು, ಹಿರೆಕೆರೂರು, ಲಕ್ಷ್ಮೇಶ್ವರ, ಅಣ್ಣಿಗೆರೆ, ಕಮ್ಮರಡಿ, ಸವಣೂರು, ತಾಳಗುಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆ ಸಾಧ್ಯತೆ

ರಾಯಚೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 33.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಏಪ್ರಿಲ್ 15,16ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಬಿಸಿಲ ತಾಪ ಹೆಚ್ಚಿರಲಿದೆ. ಹೊನ್ನಾವರದಲ್ಲಿ 33.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ