ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

| Updated By: ಗಂಗಾಧರ​ ಬ. ಸಾಬೋಜಿ

Updated on: Jun 10, 2024 | 4:39 PM

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುಡದನಾಳ ಗ್ರಾಮದಲ್ಲಿ ಅನಾರೋಗ್ಯ ಹಿನ್ನೆಲೆ ರಾಯಚೂರಿನಲ್ಲಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ತಾಯಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮನನೊಂದು ತನ್ನ ಜೊತೆ ಮಗಳ ಸಮೇತ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯಗೆ ಶರಣು
Follow us on

ರಾಯಚೂರು, ಜೂನ್​ 10: ಅನಾರೋಗ್ಯ ಹಿನ್ನೆಲೆ ರಾಯಚೂರಿನಲ್ಲಿ ತಾಯಿ (mother)  ಮಗಳು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ(45) ಹಾಗೂ ಅಮೃತ(12)ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ತಾಯಿ ಮಾಳಮ್ಮ ಕೂಲಿ ಕೆಲಸ ಮಾಡಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮನನೊಂದು ತನ್ನ ಜೊತೆ ಮಗಳ ಸಮೇತ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವಿದ್ಯುತ್ ತಂತಿ ತುಳಿದು ರೈತ ಸಾವು

ವಿಜಯನಗರ: ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ವರಹಳ್ಳಿ ಗ್ರಾಮದ ಪತ್ರಪ್ಪ (52) ಮೃತ ರೈತ. ಹೊಲದ ಬೋರ್‌ವೇಲ್ ವೈಯರ್ ಸರಿಪಡಿಸಲು ತೆರಳಿದ್ದಾಗ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಳಗಾವಿ; ಬೈಕ್​ನಲ್ಲಿ ತೆರಲುವಾಗ ಮರಬಿದ್ದು ಇಬ್ಬರ ಸಾವು, ಮತ್ತೋರ್ವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಇಬ್ಬರು ನಟೋರಿಯಸ್ ಮನೆ ಕಳ್ಳರ ಬಂಧನ 

ಬೆಂಗಳೂರು: ಆಂಧ್ರಾ, ಕೇರಳಾ ಸೇರಿದಂತೆ ನಗರದ ಸುಮಾರು 25 ಕಡೆಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರು ನಟೋರಿಯಸ್ ಮನೆ ಕಳ್ಳರ ಬಂಧನವಾಗಿದೆ. ಕಳ್ಳತನ ಮಾಡಿದ ಹಣದಲ್ಲಿ ಆರೋಪಿಗಳು ಶೋಕಿ ಜೀವನ  ಮಾಡುತ್ತಿದ್ದರು. ಹಮೀದ್ ಖಾನ್ ಹಾಗೂ ಖಲೀಲ್ ಉಲ್ಲಾ ಬಂಧಿತ ಆರೋಪಿಗಳು. ರಾತ್ರಿ ವೇಳೆ ಬೈಕ್​ನಲ್ಲಿ ರೌಂಡ್ಸ್ ಹಾಕುತ್ತಾ ಯಾರೂ ಇಲ್ಲದ ಮನೆಗಳನ್ನು ಸರ್ಚ್ ಮಾಡುತ್ತಿದ್ದರು. ಮನೆಯ ಕಿಟಕಿಯ ಗ್ರಿಲ್ ಕಟ್ ಮಾಡಿ ಮನೆಯ ಒಳಗೆ ಹೋಗುತ್ತಿದ್ದರು.

ಇದನ್ನೂ ಓದಿ: ವಾಲಿಬಾಲ್ ವಿಚಾರಕ್ಕೆ ನಡು ರಸ್ತೆಯಲ್ಲಿ ಮಹಿಳೆ, ಯುವತಿ ಮೇಲೆ ಪಾನಮತ್ತ ಪುಂಡರಿಂದ ಹಲ್ಲೆ; ಸ್ಥಳೀಯರಿಂದ ರಕ್ಷಣೆ

ಬಂಧಿತರಿಂದ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ವಿರುದ್ದ ಸುಮಾರು 25ಕ್ಕೂ ಹೆಚ್ಚು ಕೇಸ್​ಗಳು ದಾಖಲಾಗಿದೆ. ಆಂದ್ರಾ,‌ ಕೇರಳಾ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಕೇಸ್​ಗಳು ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:38 pm, Mon, 10 June 24