ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ದಲಿತ ಮುಖಂಡನ ಬರ್ಬರ ಹತ್ಯೆ

ರಾಯಚೂರಿನಲ್ಲಿ ಬೈಕ್​​ ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ದುಷ್ಕರ್ಮಿಗಳು ದಲಿತ ನಾಯಕನ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು SP ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ವಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ದಲಿತ ಮುಖಂಡನ ಬರ್ಬರ ಹತ್ಯೆ
ದಲಿತ ಮುಖಂಡ ಪ್ರಸಾದ್ ಕುಟುಂಬಸ್ಥರ ಆಕ್ರಂದನ
Follow us
TV9 Web
| Updated By: ಆಯೇಷಾ ಬಾನು

Updated on: Oct 30, 2023 | 2:34 PM

ರಾಯಚೂರು, ಅ.30: ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ಮಾಡಲಾಗಿದೆ (Murder). ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ದಲಿತ ಮುಖಂಡ (Dalit Leader) ಪ್ರಸಾದ್(40) ಹತ್ಯೆ ಮಾಡಲಾಗಿದೆ. ಬೈಕ್​​ ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು SP ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ವಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಕೆರೆಯಲ್ಲಿ ತೇಲಿಬಂದ ವೃದ್ಧೆಯ ಶವ

ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ಹೌಸಿಂಗ್ ಬೋರ್ಡ್ ಪಕ್ಕದಲ್ಲಿರುವ ನಾರಾಯಣಪ್ಪನ ಕೆರೆಯಲ್ಲಿ ವೃದ್ಧೆಯ ಶವ ತೇಲಿಬಂದಿದೆ. ವೃದ್ಧೆ ಹರಿತಾ (60) 2 ದಿನಗಳ ಹಿಂದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಕೆರೆ‌ ದಡದಲ್ಲಿ ವೃದ್ಧೆಯ ಮೊಬೈಲ್ ಹಾಗೂ ಆಧಾರ್ ಕಾರ್ಡ್ ಪತ್ತೆಯಾಗಿದೆ. ಸ್ಥಳಕ್ಕೆ ಕನಕಪುರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Viral Video: ಸಮುದ್ರದೊಳಗೆ ತೇಲುತ್ತಿರುವ ಮನೆ; ನೆಟ್ಟಿಗರ ನಾನಾ ರೀತಿಯ ಪ್ರತಿಕ್ರಿಯೆ

ಸಾಲಬಾದೆ ತಾಳಲಾರದೇ ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಸ್ಕೌಟ್ ಕ್ಯಾಂಪ್​ ರಸ್ತೆ ಪಕ್ಕದ ಮರಕ್ಕೆ ನೇಣು‌ ಬಿಗಿದುಕೊಂಡು ಗಂಗರಾಜ್ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ, ಸಾಲಬಾದೆ ತಾಳಲಾರದೇ ರಘುನಾಥಪುರ ನಿವಾಸಿ ಗಂಗರಾಜ್ (40)ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೂದಿಹಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಲಹಂಕದ ಸುರೇಶ್(28) ಮೃತ ದುರ್ದೈವಿ. ಅಪಘಾತದ ನಂತರ ಕ್ಯಾಂಟರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ