ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದರೂ ದಾಖಲಾತಿಯಲ್ಲಿ ಪರಿಶೀಲನೆಯಲ್ಲಿ ರಿಜೆಕ್ಟ್, ವ್ಯವಸ್ಥೆ ವಿರುದ್ಧ ಬೇಸತ್ತು ಯುವಕ ಆತ್ಮಹತ್ಯೆ

25 ವರ್ಷದ ಯುವಕನೋರ್ವ 2022ರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ. ಇನ್ನೇನು ಶಿಕ್ಷಕ ಆಗುತ್ತೇನೆ ಎಂದು ಸಂತೋಷದಲ್ಲಿದ್ದ. ಆದ್ರೆ, ಯಾವುದೋ ದಾಖಲಾತಿಯಿಂದಾಗಿ ಕೊನೆ ಹಂತದಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ ಕೈ ತಪ್ಪಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಇದರಿಂದ ಮನನೊಂದು ಪ್ರಾಣಬಿಟ್ಟಿದ್ದಾನೆ.

ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದರೂ ದಾಖಲಾತಿಯಲ್ಲಿ ಪರಿಶೀಲನೆಯಲ್ಲಿ ರಿಜೆಕ್ಟ್, ವ್ಯವಸ್ಥೆ ವಿರುದ್ಧ ಬೇಸತ್ತು ಯುವಕ ಆತ್ಮಹತ್ಯೆ
ಚನ್ನಬಸವ ((25) ಮೃತ ಯುವಕ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on:Aug 25, 2023 | 2:41 PM

ರಾಯಚೂರು, (ಆಗಸ್ಟ್ 25): ಆಡಳಿತ ವ್ಯವಸ್ಥೆ ವಿರುದ್ಧ ಬೇಸತ್ತು ಯುವಕನೋರ್ವ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ರಾಯಚೂರು(Raichur) ಜಿಲ್ಲೆ ದೇವದುರ್ಗ ತಾಲ್ಲೂಕಿನ ಚಿಕ್ಕಬೂದುರು ಗ್ರಾಮದಲ್ಲಿ ನಡೆದಿದೆ. ಚನ್ನಬಸವ ((25) ಮೃತ ಯುವಕ. 2022ರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿದ್ದ. ಆದ್ರೆ, ಯಾವುದೋ ದಾಖಲಾತಿಯಿಂದಾಗಿ ಕೊನೆ ಹಂತದಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ ಕೈ ತಪ್ಪಿತ್ತು. ಈ ಹಿನ್ನೆಲೆ ಕಳೆದ ಕೆಲ ತಿಂಗಳುಗಳಿಂದ ಮನನೊಂದು, ಇಂದು (ಆಗಸ್ಟ್ 25) ಚಿಕ್ಕಬೂದುರು ಗ್ರಾಮದ ಖಾಸಗಿ ಶಾಲೆ ಪಕ್ಕದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಸಾವಿಗೂ ಮುನ್ನ ಡೆತ್ ನೋಟ್ ನಲ್ಲಿ ವ್ಯವಸ್ಥೆ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಚೆನ್ನಬಸವ, ಸಾವಿಗೆ ನಾನೇ ಕಾರಣ, ತನ್ನ ಪೋಷಕರು ಅಮಾಯಕರು. ಅವರು ದೂರು ಕೊಡಲು ಬಂದರೆ ಸ್ಬೀಕರಿಸಬೇಡಿ ಎಂದು ಡೆತ್ ನೋಟ್​ನಲ್ಲಿ ಬರೆದಿದ್ದಾನೆ.

ಇದನ್ನೂ ಓದಿ: ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

ಸರಿಯಾಗಿ ಓದು ಎಂದಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ

ಕಲಬುರಗಿ, (ಆಗಸ್ಟ್ 25): ಕಾಲೇಜಿಗೆ (Collège) ಹೋಗಿ ಚೆನ್ನಾಗಿ ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ಪಿಯು ವಿದ್ಯಾರ್ಥಿನಿ(Student) ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ. ಕಾವೇರಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪ್ರತಿದಿನ ತಪ್ಪದೇ ಕಾಲೇಜಿಗೆ ಹೋಗಿ ಚೆನ್ನಾಗಿ ಓದುವಂತೆ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯ ಹೋರಾಟಗಾರ ಜಿಗಣಿ ಶಂಕರ್ ಹೃದಯಾಘಾತದಿಂದ ನಿಧನ

ಆನೇಕಲ್: ಹಿರಿಯ ಹೋರಾಟಗಾರ ಜಿಗಣಿ ಶಂಕರ್(66) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ನಾಟಕ ರಿಪಬ್ಲಿಕ್ ಸೇನೆ ಸಂಘಟನೆ ರಾಜ್ಯಾಧ್ಯಕ್ಷರಾಗಿದ್ದ ಜಿಗಣಿ ಶಂಕರ್​, ಇಂದು(ಆಗಸ್ಟ್ 25) ಖಾಸಗಿ ಕಾರ್ಯಕ್ರಮದ ನಿಮಿತ್ತ ಕೋಲಾರಕ್ಕೆ ತೆರಳಿದ್ದಾಗ ಹೃದಯಾಘಾತವಾಗಿದೆ, ದಲಿತ ಪರ ಹೋರಾಟದಲ್ಲಿ ಜಿಗಣಿ ಶಂಕರ್ ಮುಂಚೂಣಿಯಲ್ಲಿರುತ್ತಿದ್ದರು. ಇನ್ನು ಜಿಗಣಿ ಬಳಿಯ ಬಂಡೇನಲ್ಲಸಂದ್ರ ಗ್ರಾಮದ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಬಂಡೇನಲ್ಲಸಂದ್ರ ಬಳಿ ಜಮೀನಿನಲ್ಲಿ ಶಂಕರ್ ಅವರ​ ಅಂತ್ಯಕ್ರಿಯೆ ನಡೆಯಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:36 pm, Fri, 25 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್