AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ

ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ 30 ಜನರು ಅಸ್ವಸ್ಥರಾಗಿದ್ದಾರೆ. ಟ್ಯಾಂಕರ್‌ನಿಂದ ಪೂರೈಕೆಯಾದ ನೀರು ಕುಡಿದು ಅನೇಕರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಟ್ಯಾಂಕರ್ ಸ್ವಚ್ಛತೆ ಕುರಿತು ಪ್ರಶ್ನೆಗಳು ಎದ್ದಿವೆ.

ರಾಯಚೂರು: ಕಲುಷಿತ ನೀರು ಸೇವಿಸಿ 30 ಜನರು ಅಸ್ವಸ್ಥ
ಗ್ರಾಮದಲ್ಲಿ ವೈದ್ಯರ ತಪಾಸಣೆ
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on: Jun 14, 2025 | 3:23 PM

Share

ರಾಯಚೂರು, ಜೂನ್​ 14: ಕಲುಷಿತ ನೀರು (Polluted water) ಸೇವಿಸಿ 30 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ. ಟ್ಯಾಂಕರ್​ನಿಂದ​ ಪೂರೈಕೆಯಾದ ನೀರು ಕುಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ವಿರುದ್ಧ ಭೂತಲದಿನ್ನಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಿದರು.

ಪಿಡಿಒ ಅಮಾನತು

ಕರ್ತವ್ಯ ಲೋಪ ಹಾಗೂ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಗ್ರಾಮ ಪಂಚಾಯಿತಿ ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮ ಪಂಚಾಯಿತಿ ಪಿಡಿಒ ಶಿವರಾಜು ಮತ್ತು ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ನೋಡಿ: ರಾಯಚೂರಿನಲ್ಲಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ

ಇದನ್ನೂ ಓದಿ
Image
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
Image
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
Image
ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿದ 8 ಯುವಕರ ಬಂಧನ
Image
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ

ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಂಗಮ್ಮ ಅವರು 26,71,303 ರೂ. ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಅಮಾನತು ಮಾಡಲಾಗಿದೆ.  52.81 ಲಕ್ಷ ಮೊತ್ತದ ಅಪೂರ್ಣ ದಾಖಲೆ ನೀಡಿದ್ದ ಪಿಡಿಒ ಶಿವರಾಜ ಅವರನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಪಾಂಡ್ವೇ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ