AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ

ರಾಯಚೂರು ಮೂಲಕ ಮಂತ್ರಾಲಯಕ್ಕೆ ಮಾರ್ಗ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂತ್ರಾಲಯ ಪ್ರವೇಶದ ಮುಖ್ಯ ದ್ವಾರದ ಬಳಿ ಇಂದು ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಭಯ ರಾಮನ ವಿಗ್ರಹದ ಎದುರೇ ಅಭಯಾಂಜನೇಯ ಸ್ವಾಮಿಯ 32 ಅಡಿಯ ಏಕಶಿಲಾ ವಿಗ್ರಹವಿದೆ. ಇದರ ಎದುರಿಗಿನ ಸುಮಾರು ಆರು ಎಕರೆ ಪ್ರದೇಶದಲ್ಲಿ ಶ್ರೀಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

ರಾಯಚೂರು: ಮಂತ್ರಾಲಯದಲ್ಲಿ 36 ಅಡಿ ಎತ್ತರದ ಶ್ರೀರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ
ರಾಯಚೂರಿನ ಮಂತ್ರಾಲಯದಲ್ಲಿ 32 ಅಡಿ ಎತ್ತರದ ಅಭಯಾಂಜನೇಯ ಸ್ವಾಮಿಯ ಪ್ರತಿಮೆ ಎದುರು 36 ಅಡಿ ಎತ್ತರದ ಶ್ರೀ ಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ
ಭೀಮೇಶ್​​ ಪೂಜಾರ್
| Edited By: |

Updated on: Jan 20, 2024 | 4:15 PM

Share

ರಾಯಚೂರು, ಜ.20: ಮಂತ್ರಾಲಯ (Mantralaya) ಪ್ರವೇಶದ ಮುಖ್ಯ ದ್ವಾರದ ಬಳಿ ಇಂದು ಶ್ರೀ ಅಭಯ ರಾಮನ (Sri Abhaya Ram) 36 ಅಡಿ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಭಯ ರಾಮನ ವಿಗ್ರಹದ ಎದುರೇ ಅಭಯಾಂಜನೇಯ ಸ್ವಾಮಿಯ 32 ಅಡಿಯ ಏಕಶಿಲಾ ವಿಗ್ರಹವಿದೆ. ಇದರ ಎದುರಿಗಿನ ಸುಮಾರು ಆರು ಎಕರೆ ಪ್ರದೇಶದಲ್ಲಿ ಶ್ರೀಅಭಯ ರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

2021ರ ಮಾರ್ಚ್​ ತಿಂಗಳಲ್ಲಿ ಶ್ರೀ ಅಭಯ ರಾಮನ ವಿಗ್ರಹ ಕೆತ್ತನೆ ಆರಂಭವಾಗಿತ್ತು. ವಿಗ್ರಹ ಕೆತ್ತನ ಕಾರ್ಯದ ವೇಳೆಯೇ ಆಯೋಧ್ಯೆಯಲ್ಲಿ ಶ್ರೀರಾಮ ದೇವಸ್ಥಾನ ಉದ್ಘಾಟನೆ ವೇಳೆ ಈ ರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತದೆ ಅಂತ ಮಂತ್ರಾಲಯ ಪೀಠಾಧಿಪತಿ ಶ್ರೀ ಡಾ.ಸುಬುಧೇಂದ್ರ ತೀರ್ಥರು ಹೇಳಿದ್ದರು. ಅದರಂತೆ ಮಂತ್ರಾಲಯದ ಅಭಯರಾಮನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆಗೊಂಡಿದೆ.

ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಪ್ರತಿಷ್ಠಾಪನೆ

ಇಂದು ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಅಭಯರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. 36 ಅಡಿ ಎತ್ತರದ ಭವ್ಯವಾದ ಶ್ರೀ ಅಭಯ ರಾಮ ಮೂರ್ತಿಯ ಕೆತ್ತನೆ ಪ್ರಕ್ರಿಯೆ ವರ್ಷಗಳ ಬಳಿಕ ಪೂರ್ಣಗೊಂಡಿದೆ. ಹೀಗಾಗಿ ಮೇರುಕೃತಿಯನ್ನು ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಹೋರಭಾಗದ ಪೀಠದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಮಹತ್ವದ ಸಂದರ್ಭದಲ್ಲಿ ಸ್ವಾಮೀಜಿ ಅವರು ಪೀಠದ ಮೇಲೆ ವಿಗ್ರಹವನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಶ್ರೀಗಳು ಆಧ್ಯಾತ್ಮಿಕ ಮಹತ್ವದ ಕೆಲವು ಆಚರಣೆಗಳನ್ನು ನಡೆಸಿ ನಂತರ ಪ್ರತಿಷ್ಠಾಪನೆ ಮಾಡಿದರು.

ಇದನ್ನೂ ಓದಿ: ಏಕಾಶಿಲಾ‌ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ

ಕುಪ್ಪಂ ಮೂಲದ ಶಿಲ್ಪಿಗಳಿಂದ ಅಭಯ ರಾಮನ ವಿಗ್ರಹ ಕೆತ್ತನೆ

ಶ್ರೀ ಅಭಯ ರಾಮನ 36 ಅಡಿ ಎತ್ತರದ ಏಕಶಿಲಾ ಮೂರ್ತಿ ಕೆತ್ತನೆ ಕಾರ್ಯದ ಹಿಂದೆ 10 ಜನ ಶಿಲ್ಪಿಗಳ ತಂಡದ ಶ್ರಮವಿದೆ. ಆಂಧ್ರಪ್ರದೇಶದ ಕುಪ್ಪಂನ 10 ಮಂದಿ ಶಿಲ್ಪಿಗಳ ತಂಡ ಶ್ರೀರಾಮನ ಏಕಶಿಲಾ ವಿಗ್ರಹವನ್ನು ಕೆತ್ತನೆ ಮಾಡಿದೆ.

108 ಅಡಿ ಎತ್ತರದ ಪಂಚಲೋಹದ ರಾಮನ ಪ್ರತಿಮೆ ಸ್ಥಾಪನೆ

ಮಂತ್ರಾಲಯ ಹೊರಭಾಗದ ಯಮಿಗನೂರು ರಸ್ತೆಯ ಬಳಿ ಜುಲೈ 23 ರಂದು ಆಂಧ್ರಪ್ರದೇಶದ ಜೈ ಶ್ರೀ ರಾಮ್‌ ಫೌಂಡೇಶನ್‌ ವತಿಯಿಂದ 108 ಅಡಿ ಎತ್ತರದ ಬೃಹತ್‌ ಪಂಚಲೋಹದ ರಾಮನ ಮೂರ್ತಿ ಸ್ಥಾಪನೆಗೆ ಭೂಮಿಪೂಜೆ ಸಲ್ಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ವರ್ಚುವಲ್ ಮೂಲಕ ಈ ಪವಿತ್ರ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಮಂತ್ರಾಲಯ ಆಡಳಿತ ಮಂಡಳಿ ಶೀಘ್ರದಲ್ಲೇ ಈ ಕಾರ್ಯವನ್ನ ಮುಗಿಸುವ ಚಿಂತನೆಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್