AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ನಿರ್ಮಿಸಿದ ರಾಯಚೂರು ಶಾಖೋತ್ಪನ್ನ ಕೇಂದ್ರ; 43.27 MU ವಿದ್ಯುತ್ ಉತ್ಪಾದನೆ

ರಾಯಚೂರು ಶಾಖೋತ್ಪನ್ನ ಕೇಂದ್ರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯೂನಿಟ್ (MU) ವಿದ್ಯುತ್​ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್​ 21 ರಿಂದ ನವೆಂಬರ್​​​ 29ರ ವರೆಗೆ 100 ದಿನಗಳ ಕಾಲ 800 ಮೆಗಾವ್ಯಾಟ್​ ವಿದ್ಯುತ್​ ಉತ್ಪಾದನೆಯಾಗಿದೆ.

ದಾಖಲೆ ನಿರ್ಮಿಸಿದ ರಾಯಚೂರು ಶಾಖೋತ್ಪನ್ನ ಕೇಂದ್ರ; 43.27 MU ವಿದ್ಯುತ್ ಉತ್ಪಾದನೆ
ರಾಯಚೂರು ಶಾಖೋತ್ಪನ್ನ ಕೇಂದ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 30, 2023 | 11:50 AM

Share

ರಾಯಚೂರು ನ.30: ರಾಯಚೂರು ಶಾಖೋತ್ಪನ್ನ ಕೇಂದ್ರ (RTPS) ಈ ವರ್ಷ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸಿದೆ. ವಿದ್ಯುತ್ (Electricity) ಸ್ಥಾವರವು 2023ರ ನವೆಂಬರ್ 29 ರವರೆಗೆ 43.27 ಮಿಲಿಯನ್ ಯೂನಿಟ್ (MU) ವಿದ್ಯುತ್​ ಉತ್ಪಾದನೆ ಮಾಡಿದೆ. ಘಟಕ 1 ಆಗಸ್ಟ್​ 21 ರಿಂದ ನವೆಂಬರ್​​​ 29ರ ವರೆಗೆ 100 ದಿನಗಳ ಕಾಲ 800 ಮೆಗಾವ್ಯಾಟ್​ ವಿದ್ಯುತ್​ ಉತ್ಪಾದನೆಯಾಗಿದೆ. ಇದು ಆರ್​ಟಿಪಿಎಸ್​​ ಅಧಿಕಾರಿಗಳ ಸಂತೋಷಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಶೇ 54.08 ರಷ್ಟು ಘಟಕ 1ರ ಸಾಮಾರ್ಥ್ಯ ಹೆಚ್ಚಾಗಿದೆ ಎಂದು ಆರ್​ಟಿಪಿಎಸ್​​​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ತಿಳಿಸಿದರು.

4 ಘಟಕಗಳು ಸ್ಥಗಿತಗೊಂಡಿದ್ದವು

ಬೇಡಿಕೆ ಇಲ್ಲದ ಕಾರಣ ನಾಲ್ಕು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿತ್ತು. ಒಂದು, ಎರಡು, ಮೂರು ಮತ್ತು ಆರನೇ ಘಟಕಗಳು ನಿಲುಗಡೆಯಾಗಿದ್ದವು. ರಾಜ್ಯದಲ್ಲಿ ಮಳೆ ಕೊರೆತೆಯಾಗಿ ಬರಗಾಲ ಆವರಿಸಿದ್ದು ಜಲ ಮೂಲಗಳಿಂದ ವಿದ್ಯುತ್​ ಉತ್ಪಾದನೆಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್​ನಿಂದ ಈ ನಾಲ್ಕರು ಘಟಕಗಳನ್ನು ಆರಂಭಿಸಲಾಗಿದೆ. ತಾತ್ಕಾಲಿಕವಾಗಿ ಘಟಕಗಳನ್ನು ಸ್ಥಗಿತಗೊಂಡ ನಂತರ ಸಹ ಇಷ್ಟು ಪ್ರಮಾಣದ ವಿದ್ಯುತ್​ ಉತ್ಪಾದನೆ ಗಮನಾರ್ಹವಾಗಿದೆ.

ಇದನ್ನೂ ಓದಿ: ಮೂರು ವರ್ಷಗಳಲ್ಲಿ 8,000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿದ ಬೆಸ್ಕಾಂ​ 

ರಾಯಚೂರು ಶಾಖೋತ್ಪನ್ನ ಕೇಂದ್ರ

ರಾಯಚೂರು ಶಾಖೋತ್ಪನ್ನ ಕೇಂದ್ರ ರಾಯಚೂರು ಜಿಲ್ಲೆಯ ಯದ್ಲಾಪುರ ಡಿ (ಶಕ್ತಿನಗರ)ದಲ್ಲಿದೆ. ಇದು ಕಲ್ಲಿದ್ದಲು ಆಧಾರಿತ ವಿದ್ಯುತ್ ಶಕ್ತಿ ಕೇಂದ್ರವಾಗಿದೆ. ಒಟ್ಟು 8 ಉತ್ಪಾದನಾ ಘಟಕಗಳಿವೆ. ಇದನ್ನು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ನಿರ್ವಹಿಸುತ್ತದೆ ಮತ್ತು ರಾಜ್ಯದಲ್ಲಿ ಸ್ಥಾಪಿಸಲಾದ ಮೊದಲ ಉಷ್ಣ ವಿದ್ಯುತ್ ಸ್ಥಾವರವಾಗಿದೆ. ವಿದ್ಯುತ್ ಕೇಂದ್ರವು 1985 ರಿಂದ ವಿವಿಧ ಅವಧಿಗಳಲ್ಲಿ ಕಾರ್ಯಾರಂಭ ಮಾಡಿತು. ಇದು ಕರ್ನಾಟಕದಲ್ಲಿ ಉತ್ಪತ್ತಿಯಾಗುವ ಒಟ್ಟು ವಿದ್ಯುತ್‌ನಲ್ಲಿ ಆರ್​ಟಿಪಿಎಸ್​​ನದ್ದು ಶೇ 70 ರಷ್ಟು ಪಾತ್ರವಿದೆ.

ಘಟಕ 1 ರಿಂದ 7 ರವರೆಗೆ, ಪ್ರತಿ ದಿನಕ್ಕೆ 5.04 MU ವಿದ್ಯುತ್​ ಅನ್ನು ಉತ್ಪಾದಿಸಬಹುದು. ಮತ್ತು ಘಟಕ 8 ದಿನಕ್ಕೆ 6 MU ಉತ್ಪಾದಿಸಬಹುದು, ಆದ್ದರಿಂದ ಸ್ಥಾವರವು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಿದಾಗ ದಿನಕ್ಕೆ 41.28 MU ಶಕ್ತಿಯನ್ನು ಉತ್ಪಾದಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:26 am, Thu, 30 November 23

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!