ಚಾಕೊಲೇಟ್ ಆಸೆ ತೋರಿಸಿ 4ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಕಾಮುಕ

ಚಾಕೊಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ 52 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಪ್ರಕರಣ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಚಾಕೊಲೇಟ್ ಆಸೆ ತೋರಿಸಿ 4ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ಕಾಮುಕ
ಸ್ಥಳ ಪರಿಶೀಲಿಸಿದ ಪೊಲೀಸರು

Updated on: Jun 22, 2023 | 9:29 AM

ರಾಯಚೂರು: ಚಾಕೊಲೇಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ (Student) ಮೇಲೆ ಅತ್ಯಾಚಾರ(Rape) ಎಸಗಿರುವ ಘಟನೆ ರಾಯಚೂರು(Raichur) ಜಿಲ್ಲೆಯ ಸಿಂಧನೂರು ತಾಲೂಕಿನ ಆರ್​ಎಚ್ ಕ್ಯಾಂಪ್ 3ರಲ್ಲಿ ನಡೆದಿದೆ. 4ನೇ ತರಗತಿ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಡಿಸೋದಾಗಿ ಪುಸಲಾಯಿಸಿ ಸ್ಕೂಟರ್​ನಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸಪನ್ ಮಂಡಲ್(52) ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರ್ ಎಚ್ ಕ್ಯಾಂಪ್‌ ನಲ್ಲಿ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಅನುಮಾನ ಎಂಬ ಪಿಶಾಚಿ: ತಮ್ಮನ ಹೆಂಡತಿ ಶೀಲ ಶಂಕಿಸಿ ಕೊಲೆ, ಆರೋಪಿಗಳು ಅರೆಸ್ಟ್

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ, ಸಂಬಂಧಿಕರಿಂದ ಧರಣಿ

ಬಿಜಿಎಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿಯ ಆಸ್ಪತ್ರೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಿಜಿಎಸ್ ಆಸ್ಪತ್ರೆ ವೈದ್ಯರ ವಿರುದ್ದ ಕರ್ತವ್ಯ ಲೋಪ ಆಗಿದೆ ಎಂದು ಮೃತ ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸದ್ದಾರೆ. ಕಳೆದ 25 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಹನುಮನಕೊಪ್ಪಲು ಗ್ರಾಮದ ಚಂದ್ರ(40) ಇಂದು ಮೃತಪಟ್ಟಿದ್ದಾರೆ. ಚಂದ್ರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದು, ಚಂದ್ರು ಸಾವಿಗೆ ಪರಿಹಾರ ನೀಡಬೇಕೆಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಪರಿಹಾರ ಕೊಡದೆ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇನ್ನು ಸ್ಥಳಕ್ಕೆ ಬೆಳ್ಳೂರು ಪೊಲೀಸರು ಆಗಮಿಸಿದ್ದು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us