AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಅನ್ನು ಮಣಿಸಿ ಐಪಿಎಲ್ ಫೈನಲ್​ ಪ್ರವೇಶಿಸಿದ ಬೆನ್ನಲ್ಲೇ ರಾಯಚೂರಿನಲ್ಲಿ ಭರ್ಜರಿ ಸಂಭ್ರಮಾಚರಣೆ ನಡೆದಿತ್ತು. ಆ ಸಂದರ್ಭದಲ್ಲಿ, ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಪೆಟ್ರೋಲ್ ತುಂಬಿದ ಚೀಲ ಸಿಡಿಸಿ ಸಂಭ್ರಮಾಚರಣೆ ಮಾಡಿ ಹುಚ್ಚಾಟ ಮೆರೆದಿದ್ದ ಯುವಕರು ಇದೀಗ ಜೈಲುಪಾಲಾಗಿದ್ದಾರೆ.

ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿ ಸಂಭ್ರಮಾಚರಣೆ: ರಾಯಚೂರಿನಲ್ಲಿ 8 ಯುವಕರ ಬಂಧನ
ಬಂಧಿತ ಯುವಕರು
ಭೀಮೇಶ್​​ ಪೂಜಾರ್
| Edited By: |

Updated on:Jun 01, 2025 | 11:34 AM

Share

ರಾಯಚೂರು, ಜೂನ್ 1: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (RCB) ಮೇ 29 ರಂದು ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಭರ್ಜರಿ ಗೆಲ್ಲುವು ದಾಖಲಿಸಿ ಐಪಿಎಲ್ ಫೈನಲ್ (IPL) ಪ್ರವೇಶಿಸಿತ್ತು. ಆರ್​ಸಿಬಿ ಅಭಿಮಾನಿಗಳು ರಾಜ್ಯದಾದ್ಯಂತ ಸಂಭ್ರಮಾಚರಣೆ ಮಾಡಿದ್ದರು. ಅನೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿತ್ತು. ಗಡಿ ಜಿಲ್ಲೆ ರಾಯಚೂರಿನಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ಬಾಂಬ್ ರೀತಿಯಲ್ಲಿ ಪೆಟ್ರೋಲ್ ಚೀಲಗಳನ್ನು ಸಿಡಿಸಿ ಸಂಭ್ರಮ ಆಚರಣೆ ಮಾಡಿದ್ದು, ಇದೀಗ ಜೈಲು ಪಾಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಯುವಕರ ಗುಂಪು ಆರ್ಸಿಬಿ ಪರಘೋಷಣೆಗಳನ್ನು ಕೂಗುತ್ತಾ, ಪಟಾಕಿ ಹಾಗೂ ಪೆಟ್ರೋಲ್ ಚೀಲಗಳನ್ನು ಸಿಡಿಸಿ ನಡು ರಸ್ತೆಯಲ್ಲಿ ಹುಚ್ಚಾಟ ಮೆರೆದಿತ್ತು.

ಪೆಟ್ರೋಲ್ ಚೀಲಗಳು ಭಯಾನಕವಾಗಿ ಸಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ನಡು ರಸ್ತೆಯಲ್ಲೇ ಭಯಾನಕ ಸ್ಪೋಟ

ಪ್ಲಾಸ್ಟಿಕ್ ಚೀಲದಲ್ಲಿ ಪೆಟ್ರೋಲ್ ತುಂಬಿದ್ದ ಯುವಕರ ತಂಡ ಅದನ್ನು ನಡು ರಸ್ತೆಯಲ್ಲಿಟ್ಟು, ಆ ಚೀಲದ ಮೇಲೆ ಅಡುಗೆಗೆ ಬಳಸುವ ಹಿಟ್ಟನ್ನು ಇಟ್ಟಿದ್ದರು. ರಸ್ತೆಯಲ್ಲಿ ವಾಹನಗಳು ಓಡಾಡುತ್ತಿರುವುದನ್ನು ಕ್ಯಾರೆ ಮಾಡದೆ ಚೀಲವನ್ನು ಸ್ಪೋಟಿಸಿದ್ದರು. ಸ್ಫೋಟದ ಭಯಾನಕ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್
Image
ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

ಆರ್​ಸಿಬಿ ಅಭಿಮಾನಿಗಳ ಹುಚ್ಚಾಟದ ವೈರಲ್ ವಿಡಿಯೋ

ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು 8 ಮಂದಿ ಯುವಕರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಮಾನವ ಜೀವಕ್ಕೆ ಅಪಾಯವನ್ನು ಉಂಟುಮಾಡುವ ಆರೋಪದಲ್ಲಿ ಹಾಗೂ ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನಗಳಿಗೆ ಅಡೆತಡೆ ಉಂಟುಮಾಡಿದ ಆರೋಪದಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಯುವಕರು ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿಲ್ಲ ಎಂಬುದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಸಂಭ್ರಮಾಚರಣೆಯ ಜೋಶ್‌ನಲ್ಲಿ ಯುವಕರು ಕೃತ್ಯ ಎಸಗಿರುವುದು ತಿಳಿದುಬಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಯೂಟ್ಯೂಬ್ ಚಾನೆಲ್​ಗಳಲ್ಲಿ ಪೆಟ್ರೋಲ್ ಬಾಂಬ್ ರೀತಿಯ ವಿಡಿಯೋಗಳನ್ನು ನೋಡಿ ಯುವಕರು ಈ ಕೃತ್ಯ ಎಸಗಿದ್ದಾರೆ ಎಂದು ರಾಯಚೂರು ಎಸ್​​ಪಿ ಪುಟ್ಟ ಮಾದಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: IPL 2025: ಆರ್​ಸಿಬಿಯ ಹೊಸ ಆಪತ್ಭಾಂಧವ ಜೋಶ್ ಹೇಜಲ್​ವುಡ್ ಎಷ್ಟು ಕೋಟಿಯ ಒಡೆಯ ಗೊತ್ತಾ?

ಅದೇನೆ ಇರಲಿ, ಅಭಿಮಾನಕ್ಕಾಗಿ ಪಟಾಕಿ ಸಿಡಿಸುವುದೇನೋ ಸಹಿಸಬಹುದು, ಆದರೆ ಸಮಾಜಕ್ಕೆ ಘಾತುಕವಾಗುವ ರೀತಿಯಲ್ಲಿ ಪೆಟ್ರೋಲ್ ಬಾಂಬ್ ಮಾದರಿಯ ಸ್ಫೋಟ ಮಾಡಿ ಹುಚ್ಚಾಟ ಮೆರೆಯುವುದು ಎಷ್ಟು ಸರಿ ಎಂದು ಸಾರ್ವಜನಿಕರು ಆರ್​​ಸಿಬಿ ಅಭಿಮಾನಿಗಳ ಹುಚ್ಚಾಟವನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:34 am, Sun, 1 June 25

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು