AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದ ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ಮಕ್ಕಳಾದ ರಾಮಣ್ಣ, ಮುತ್ತಣ್ಣ ಮತ್ತು ತಾಯಿ ಚೌಡಮ್ಮ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಭೀಮೇಶ್​​ ಪೂಜಾರ್
| Edited By: |

Updated on: Aug 10, 2023 | 5:48 PM

Share

ರಾಯಚೂರು, ಆ.10: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು (Raichur) ಜಿಲ್ಲೆಯ ಮುದಗಲ್ ಪಟ್ಟಣದ ಮೇಗಳ‌ಪೇಟೆಯಲ್ಲಿ ನಡೆದಿದೆ. ಮೇಗಳಪೇಟೆ(Megalapete)ಹೊರ ವಲಯದ ಕೃಷಿ ಜಮೀನಿನ ಬಾವಿಗೆ ಹಾರಿ ರಾಮಣ್ಣ(4), ಮುತ್ತಣ್ಣ(3) ಮತ್ತು ತಾಯಿ ಚೌಡಮ್ಮ(34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಘಟನೆ ಕುರಿತು ಸ್ಥಳಕ್ಕೆ ಮುದಗಲ್ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ KSRTC ಬಸ್

ಮಂಡ್ಯ: ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಹಳ್ಳಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರೇಹಳ್ಳಿ ಗ್ರಾಮದ ಬಳಿಯ ಕೊಳ್ಳೇಗಾಲ-ಮಳವಳ್ಳಿ ಹೆದ್ದಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್​ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದ ಹಿನ್ನಲೆ ರಸ್ತೆ ಪಕ್ಕದಲ್ಲಿ ಹಳ್ಳ ತೆಗೆಯಲಾಗಿತ್ತು. ಈ ವೇಳೆ ವೇಗದಿಂದ ಬಂದ ಕೆಎಸ್​ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದೆ. ಇನ್ನು ಈ ಬಸ್​ ತಲಕಾಡಿನಿಂದ ಮಳವಳ್ಳಿ ಕಡೆಗೆ ಬರುತ್ತಿತ್ತು.

ಇದನ್ನೂ ಓದಿ:ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ಕಾಮಗಾರಿ ನಾಮಪಲಕ ಹಾಕದ ಕಾರಣ ಘಟನೆ

ಇನ್ನು ಬಸ್​ ಹಳ್ಳಕ್ಕೆ ನುಗ್ಗಿದ ಹಿನ್ನೆಲೆ ಚಾಲಕ ಸೇರಿ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಮಪಲಕ ಹಾಕದೆ ಇದ್ದಿದ್ದರಿಂದ ಚಾಲಕ ಗಮನಿಸಲಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೈನ್ ಮೂಲಕ ಬಸ್​ನ್ನು ಹೊರ ತೆಗೆಯಲಾಯಿತು.

ಹಾಲು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಕಾರು

ರಾಮನಗರ: ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಹಾಲು ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ರಸ್ತೆ ಪಕ್ಕ ಉರುಳಿಬಿದ್ದಿದೆ. ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ