ರಾಯಚೂರಿನಲ್ಲಿ ಎಮ್ಮೆಗೆ ಡಿಕ್ಕಿಯಾಗಿ ಉರುಳಿಬಿದ್ದ ಖಾಸಗಿ ಬಸ್! ಚಿತ್ರದುರ್ಗದಲ್ಲಿ ಹೈಬ್ರೀಡ್ ಜೋಳದ ಚಿಗುರು ಸೇವಿಸಿ 11 ಕುರಿಗಳು ಸಾವು
ಖಾಸಗಿ ಬಸ್ ಹುಬ್ಬಳ್ಳಿಯಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗಿ ಈ ಘಟನೆ ನಡೆದಿದೆ. ಘಟನೆಯಲ್ಲಿ 5ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ರಿಮ್ಸ್ಗೆ ದಾಖಲಿಸಲಾಗಿದೆ.
ರಾಯಚೂರು: ರಸ್ತೆಯಲ್ಲಿ ಅಡ್ಡ ಬಂದ ಎಮ್ಮೆಗೆ (Buffalo) ಡಿಕ್ಕಿಯಾಗಿ ಖಾಸಗಿ ಬಸ್ (Private Bus) ಉರುಳಿ ಬಿದ್ದರಿರುವ ಘಟನೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ರಾಯಚೂರು-ತೆಲಂಗಾಣ ಗಡಿಯ ಮಾಗನೂರು ಬಳಿ ನಡೆದಿದೆ. ಖಾಸಗಿ ಬಸ್ ಹುಬ್ಬಳ್ಳಿಯಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗಿ ಈ ಘಟನೆ ನಡೆದಿದೆ. ಘಟನೆಯಲ್ಲಿ 5ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ರಿಮ್ಸ್ಗೆ ದಾಖಲಿಸಲಾಗಿದೆ. ಇನ್ನು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ತೆಲಂಗಾಣದ ಮಾಗನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕುರಿಗಳು ಸಾವು: ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಪಾಲನಾಯಕನಕೋಟೆ ಬಳಿ ಹೈಬ್ರೀಡ್ ಜೋಳದ ಚಿಗುರು ಸೇವಿಸಿ 11 ಕುರಿಗಳು ಸಾವನ್ನಪ್ಪಿವೆ. ರೈತ ತಿಪ್ಪೇಸ್ವಾಮಿ ಎಂಬುವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಜೋಳದ ಚಿಗುರಿನಲ್ಲಿ ಅಂಟಿನಂಶವಿದ್ದ ಹಿನ್ನೆಲೆ ಕುರಿಗಳಿಗೆ ಉಸಿರಾಟಕ್ಕೆ ತೊಂದರೆಯಾಗಿದೆ. ಸ್ಥಳಕ್ಕೆ ಪಶು ಇಲಾಖೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕುರಿಗಳ ಸಾವಿಗೆ ಸೂಕ್ತ ಪರಿಹಾರ ಒದಗಿಸುವಂತೆ ರೈತರು ಆಗ್ರಹಿಸಿದ್ದಾರೆ.
ಉದ್ಯೋಗ ಸಿಗದ ಹಿನ್ನೆಲೆ ಯುವತಿ ಆತ್ಮಹತ್ಯೆ: ಉಡುಪಿ: ಉದ್ಯೋಗ ಸಿಗದ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ.ಕ ಜಿಲ್ಲೆಯ ಉಪ್ಪಿನಂಗಡಿ ಮೂಲದ ಯುವತಿ ಸಹನಾ (23 ) ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾಳೆ. ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದು ಸಹನಾ ವಿಷ ಸೇವಿಸಿದ್ದಾಳೆ. ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಯುವತಿ ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದಳು. ಆದರೆ ಕೆಲಸ ಸಿಕ್ಕಿರಲಿಲ್ಲ. ಮೂರು ಆಸ್ಪತ್ರೆಗಳಲ್ಲಿ 10 ದಿನ ಚಿಕಿತ್ಸೆ ನೀಡಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯ, ಕೇಂದ್ರ ಸರಕಾರದ ವಿರುದ್ಧ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದೆ.
ಮರದ ಕೊಂಬೆ ಬಿದ್ದು ಯುವಕನಿಗೆ ಗಾಯ: ದಕ್ಷಿಣ ಕನ್ನಡ: ಜಿಲ್ಲೆಯ ಕಡಬದಲ್ಲಿ ಮರದ ಕೊಂಬೆ ಬಿದ್ದು ಯುವಕನಿಗೆ ಗಾಯವಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಡಬದ ಮುಖ್ಯಪೇಟೆಯಲ್ಲಿ ಸುನಿಲ್ ಎಂಬ ಯುವಕನ ಮೇಲೆ ಬೃಹತ್ ಮರದ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯುವಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
Published On - 2:08 pm, Thu, 12 May 22